Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿ.ಎಫ್.ಐ. ಮಾಜಿ ರಾಷ್ಟ್ರೀಯ ಅಧ್ಯಕ್ಷ...

ಪಿ.ಎಫ್.ಐ. ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ

ವಾರ್ತಾಭಾರತಿವಾರ್ತಾಭಾರತಿ22 Dec 2020 12:47 PM IST
share
ಪಿ.ಎಫ್.ಐ. ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ

ಬಂಟ್ವಾಳ, ಡಿ.22: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.)ದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ (56) ಕೆಲವು ದಿನಗಳ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ನಿಧನರಾದರು.

ಶ್ವಾಸಕೋಶ, ರಕ್ತದೊತ್ತಡ, ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನದ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ಪಿ.ಎಫ್.ಐ. ರಾಷ್ಟ್ರೀಯ ಕಾರ್ಯದರ್ಶಿ ಅನಿಸ್ ಅಹ್ಮದ್ ತಿಳಿಸಿದ್ದಾರೆ.

ಖ್ಯಾತ ಧಾರ್ಮಿಕ ವಿದ್ವಾಂಸ ದಿವಂಗತ ಮಿತ್ತಬೈಲ್ ಅಬ್ದುಲ್ ಹಾಜಿ ಮತ್ತು ನಫೀಸಾ ದಂಪತಿಯ ಪುತ್ರರಾದ ಕೆ.ಎಂ.ಶರೀಫ್ 1964 ಸೆಪ್ಟಂಬರ್ 1ರಂದು ಜನಿಸಿದ್ದರು.

ಕೈಕಂಬ ಮುಹಮ್ಮದ್ ಶರೀಫ್ ಆದ ಅವರು ಊರಿನಲ್ಲಿ 'ಮುಹಮ್ಮದ್' ಎಂದೇ ಪರಿಚಿತರಾಗಿದ್ದರು. ಬಾಲ್ಯದಲ್ಲೇ ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಸಮಸ್ತ ಕೇರಳದ ಆಧೀನ ಸಂಘಟನೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.‌ ಬಿಎಸ್ಸಿ ಪದವೀಧರ ಆಗಿರುವ ಅವರು ಖ್ಯಾತ ಧಾರ್ಮಿಕ ವಿದ್ವಾಂಸ ದಿ.ಮಿತ್ತಬೈಲ್ ಜಬ್ಬಾರ್ ಉಸ್ತಾದ್ ಅವರ ಶಿಷ್ಯರಾಗಿ ಧಾರ್ಮಿಕ ವಿದ್ಯಾಭ್ಯಾಸ ಪಡೆದಿದ್ದರು‌.

ವಿದೇಶದಲ್ಲಿ ವೃತ್ತಿ ಜೀವನ ನಡೆಸುತ್ತಿದ್ದ ಅವರು ಬಳಿಕ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿ ಜೆರಾಕ್ಸ್ ಅಂಗಡಿ ಮತ್ತು ಎಸ್.ಟಿ.ಡಿ. ಬೂತ್ ಹೊಂದಿ ವೃತ್ತಿ ಜೀವನ ನಡೆಸುತ್ತಿದ್ದರು. ಮಂಗಳೂರಿನ ತನ್ನ ಜೆರಾಕ್ಸ್ ಅಂಗಡಿಯಲ್ಲಿ ಜಾಗತಿಕ ಇತಿಹಾಸ, ಇಸ್ಲಾಮಿಕ್ ಇತಿಹಾಸ ಹಾಗೂ ಇತರ ಇಸ್ಲಾಮಿಕ್ ಪುಸ್ತಕಗಳ ಸಣ್ಣ ಗ್ರಂಥಾಲಯವನ್ನು ಸ್ಥಾಪಿಸಿ ಸಾರ್ವಜನಿಕರಿಗೆ ಪುಸ್ತಕಗಳನ್ನು ನೀಡಿ ಓದಿಸುತ್ತಿದ್ದರು. ಅಲ್ಲದೆ ಅವರು ಕೆಲವು ಪುಸ್ತಕಗಳನ್ನೂ ಬರೆದಿದ್ದಾರೆ.

ಕರ್ನಾಟಕದಲ್ಲಿ ಕೆ.ಎಫ್.ಡಿ. ಸಂಘಟನೆಯ ಆರಂಭದಲ್ಲೇ ಸದಸ್ಯತ್ವ ಪಡೆದ ಅವರು ಬಳಿಕ ಕೆ.ಎಫ್.ಡಿ. ರಾಜ್ಯಾಧ್ಯಕ್ಷರೂ ಆಗಿದ್ದರು. ಆ ಬಳಿಕ ಕೆ.ಎಫ್.ಡಿ. ಸಂಘಟನೆ ಪಿ.ಎಫ್.ಐ.ಯೊಂದಿಗೆ ವಿಲೀನ ಆದ ಬಳಿಕ ಪಿ.ಎಫ್.ಐ. ರಾಜ್ಯಾಧ್ಯಕ್ಷರಾಗಿದ್ದರು. ಬಳಿಕ ಅವರು ಪಿ.ಎಫ್.ಐ. ರಾಷ್ಟ್ರಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಉತ್ತಮ ವಾಗ್ಮಿಯೂ ಆದ ಅವರು ಪ್ರಸಕ್ತ ಪಿ.ಎಫ್.ಐ. ರಾಷ್ಟ್ರೀಯ ಕೋಶಾಧಿಕಾರಿಯೂ, ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿದ್ದರು.

ಅಲ್ಪಸಂಖ್ಯಾತ ಸಮುದಾಯಗಳ ಮತ್ತು ದಲಿತ ಸಮುದಾಯದ ಒಗ್ಗಟ್ಟು, ರಾಜಕೀಯ ಅಸ್ತಿತ್ವದ ಬಗ್ಗೆ ತನ್ನದೇ ಪರಿಕಲ್ಪನೆಯನ್ನು ಹೊಂದಿದ್ದ ಕೆ.ಎಂ.ಶರೀಫ್, ರಾಜಕೀಯ ಪಕ್ಷವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.)ದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ಪಿ.ಎಫ್.ಐ.ಯನ್ನು ಉತ್ತರ ಭಾರತದಾದ್ಯಂತ ವಿಸ್ತರಿಸಲು ಕೆ.ಎಂ.ಶರೀಫ್ ನಾಯಕತ್ವ ವಹಿಸಿದ್ದ ತಂಡದ ಪಾತ್ರ ಅತೀ ದೊಡ್ಡದು ಎಂದು ಪಿ.ಎಫ್.ಐ. ಮೂಲಗಳು ತಿಳಿಸಿವೆ.

ವರದಕ್ಷಿಣೆ ರಹಿತ ಸಮಾಜ ನಿರ್ಮಾಣಕ್ಕೆ ಪ್ರತೀ ಜಮಾಅತ್ ನಲ್ಲಿ ಕರಪತ್ರಗಳನ್ನು ಹಂಚುವುದು ಸಹಿತ ಈ ಬಗ್ಗೆ ಕರಾವಳಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸಿ ಮುಸ್ಲಿಮ್ ಸಮುದಾಯದ ಯುವಕರಲ್ಲಿ ಜಾಗೃತಿ ಮೂಡಿಸುವ ಆಂದೋಲನದಲ್ಲಿ ಕೆ.ಎಂ.ಶರೀಫ್ ಮುಂದಿದ್ದರು.‌ ಬಳಿಕ ಈ ತತ್ವವನ್ನು ಕೆ.ಎಫ್.ಡಿ. ಮತ್ತು ಪಿ.ಎಫ್‌.ಐ. ಸಂಘಟನೆಯಲ್ಲಿ ಅಳವಡಿಸುವ ಮೂಲಕ ಕಡ್ಡಾಯ ವರದಕ್ಷಿಣೆರಹಿತ ಮದುವೆಗೆ ಕಾರ್ಯಕರ್ತರನ್ನು ಪ್ರೋತ್ಸಾಹಿಸಿದವರು ಎನ್ನಲಾಗಿದೆ.

ಉಪ್ಪಿನಂಗಡಿಯ ಪ್ರತಿಷ್ಠಿತ ಕುಟುಂಬದ ಸಿ.ಎಚ್.ಉಮರ್ ಎಂಬವರ ಪುತ್ರಿ ಫಾತಿಮಾ ಎಂಬವರನ್ನು ವಿವಾಹವಾಗಿದ್ದ ಕೆ.ಎಂ.ಶರೀಫ್ ಅವರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X