ಹರೇಕಳ: ಎಸ್ ಡಿಪಿಐ - ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಯ್ಕೈ
ಗುಂಪು ಚದುರಿಸಲು ಲಾಠಿ ಬೀಸಿದ ಪೊಲೀಸರು

ಸಾಂದರ್ಭಿಕ ಚಿತ್ರ
ಮಂಗಳೂರು, ಡಿ.22: ಹರೇಕಳದ ಮತಗಟ್ಟೆಯೊಂದರಲ್ಲಿ ಎಸ್ ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿರುವ ಘಟನೆ ವರದಿಯಾಗಿದೆ.
ಹರೇಕಳ ರಾಮಕೃಷ್ಣ ಪ್ರೌಢ ಶಾಲೆಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮತಗಟ್ಟೆಗೆಯೊಳಗೆ ಪದೇಪದೇ ಹೋಗುತ್ತಿದ್ದನೆನ್ನಲಾಗಿದ್ದು, ಇದನ್ನು ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಆಕ್ಷೇಪಿಸಿದ್ದು, ಮಾತಿನ ಚಕಮಕಿಗೆ ಕಾರಣ ಎನ್ನಲಾಗಿದೆ.
ಈ ವೇಳೆ ಉಭಯ ಗುಂಪುಗಳ ನಡುವೆ ಮಾತಿನ ಚಕಮಕಿ, ಹೊಯ್ ಕೈ ನಡೆದಿದೆ ಎಂದು ತಿಳಿದುಬಂದಿದೆ. ಈ ವೇಳೆ ಹಲ್ಲೆಗೊಳಗಾದ ಕಾರ್ಯಕರ್ತರೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಹಿತಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿ ಪರಿಸ್ಥಿತಿ ತಿಳಿಸಿಗೊಳಿಸಿದರು. ಇಲ್ಲಿ ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





