ಚುನಾವಣೆ ದಿನವೇ ಅಭ್ಯರ್ಥಿ ಆತ್ಮಹತ್ಯೆ

ಧಾರವಾಡ, ಡಿ.22: ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಯ ಮತದಾನ ನಡೆಯುತ್ತಿದ್ದಂತೆಯೇ ಗರಗ ಗ್ರಾಪಂನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.
ಗರಗ ಗ್ರಾಪಂನ 2ನೇ ವಾರ್ಡ್‌ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ದಾಮೋದರ ಯಲಿಗಾರ(25) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬಿಜೆಪಿ ಕಾರ್ಯಕರ್ತರಾಗಿದ್ದ ದಾಮೋದ ಅವರ ಅ-ವರ್ಗದಡಿ ಚುನಾವಣೆಗೆ ಸ್ಪರ್ಧಿಸಿದ್ದರು.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





