ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ ಆರೋಪ: ಯುವಕನ ಬಂಧನ

ಸಾಂದರ್ಭಿಕ ಚಿತ್ರ
ಮಡಿಕೇರಿ, ಡಿ.22: ಮದುವೆಯಾಗುವುದಾಗಿ ನಂಬಿಸಿ 15 ವರ್ಷ ವಯಸ್ಸಿನ ಬಾಲಕಿಯ ಅತ್ಯಾಚಾರವೆಸಗಿದ ಆರೋಪದಡಿ ಯುವಕನೊಬ್ಬನನ್ನು ವೀರಾಜಪೇಟೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಅರಪಟ್ಟು ಗ್ರಾಮದ ಲೈನ್ ಮನೆಯಲ್ಲಿರುವ ರವಿ ಎಂಬಾತನೇ ಬಂಧಿತ ಆರೋಪಿ.
ತನ್ನ ಸಂಬಂಧಿಕರ ಮನೆಯ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಎರಡು ತಿಂಗಳ ಹಿಂದಿನಿಂದಲೇ ಈತ ಲೈಂಗಿಕ ಸಂಪರ್ಕ ಹೊಂದಿದ್ದನೆನ್ನಲಾಗಿದ್ದು, ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಆಕೆಯ ಪೋಷಕರು ಆರೋಗ್ಯ ತಪಾಸಣೆ ಮಾಡಿಸಿದಾಗ ಆಕೆ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಬಾಲಕಿ ನೀಡಿದ ಮಾಹಿತಿ ಮೇರೆಗೆ ಪೊಲೀಸರು ರವಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.
Next Story





