ಉಡುಪಿ : 15 ಮಂದಿ ಕೋವಿಡ್ಗೆ ಪಾಸಿಟಿವ್
![ಉಡುಪಿ : 15 ಮಂದಿ ಕೋವಿಡ್ಗೆ ಪಾಸಿಟಿವ್ ಉಡುಪಿ : 15 ಮಂದಿ ಕೋವಿಡ್ಗೆ ಪಾಸಿಟಿವ್](https://www.varthabharati.in/sites/default/files/images/articles/2020/12/22/272192-1608644492.jpg)
ಉಡುಪಿ, ಡಿ.22: ಮಂಗಳವಾರ ಜಿಲ್ಲೆಯಲ್ಲಿ ಒಟ್ಟು 15 ಮಂದಿಯಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಏಳು ಮಂದಿ ಚಿಕಿತ್ಸೆಯಿಂದ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡರೆ, ಜಿಲ್ಲೆಯಲ್ಲಿ ರೋಗಕ್ಕೆ ಸಕ್ರಿಯರ ಸಂಖ್ಯೆ 78 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ಏಳು ಮಂದಿ ಪುರುಷರು ಹಾಗೂ ಎಂಟು ಮಂದಿ ಮಹಿಳೆಯಿದ್ದಾರೆ. ಮೂವರು ಪುರುಷರು ಹಾಗೂ ಆರು ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ. ಇಂದು ಸೋಂಕು ಪತ್ತೆಯಾದವರಲ್ಲಿ ಐವರು ಉಡುಪಿ ಮತ್ತು ಕುಂದಾಪುರ ತಾಲೂಕಿನವರಾದರೆ, ನಾಲ್ವರು ಕಾರ್ಕಳ ತಾಲೂಕು ಹಾಗೂ ಒಬ್ಬರು ಹೊರಜಿಲ್ಲೆಯವರಾಗಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
7 ಮಂದಿ ಗುಣಮುಖ: ಸೋಮವಾರ ಜಿಲ್ಲೆಯಲ್ಲಿ ಏಳು ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,710ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 78 ಮಂದಿ ಕೆವಿಡ್ಗೆ ಸಕ್ರಿಯರಿದ್ದಾರೆ ಎಂದರು.
740 ನೆಗೆಟಿವ್: ಜಿಲ್ಲೆಯಲ್ಲಿ ಸೋಮವಾರ ಒಟ್ಟು 755 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 740 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದ 15 ಮಂದಿಯಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,976ಕ್ಕೇರಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಸೋಮವಾರದವರೆಗೆ ಒಟ್ಟು 2,74,888 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,51,912 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,976 ಮಂದಿ ಪಾಸಿಟಿವ್ ಬಂದಿದ್ದರೆ, 22,710 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಇಂದು ಸಹ ಕೋವಿಡ್ನಿಂದ ಯಾರೂ ಮೃತಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 188 ಮಾತ್ರ ಎಂದು ಇಲಾಖೆ ತಿಳಿಸಿದೆ.