ಮತಪೆಟ್ಟಿಗೆ ಕೊಂಡೊಯ್ಯುತ್ತಿದ್ದ ಬಸ್ ಅಪಘಾತ: ಮತಗಟ್ಟೆ ಅಧಿಕಾರಿಗಳು, ಪೊಲೀಸರಿಗೆ ಗಾಯ

ವಿಜಯಪುರ, ಡಿ.22: ಮತಪೆಟ್ಟಿಗೆ ಕೊಂಡೊಯ್ಯುತ್ತಿದ್ದ ಬಸ್ ಅಪಘಾತ ಸಂಭವಿಸಿದ ಪರಿಣಾಮ ಮತಗಟ್ಟೆ ಅಧಿಕಾರಿಗಳು ಹಾಗೂ ಪೊಲೀಸರು ಸೇರಿ ಒಟ್ಟು 10 ಮಂದಿಗೆ ಗಾಯಗಳಾದ ಘಟನೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಕ್ರಾಸ್ ಬಳಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಹುಲ್ಲೂರು, ಕೊಪ್ಪ ತಾಂಡಾ, ಕೊಪ್ಪ, ಸಿದ್ದಾಪುರ ಗ್ರಾಮದ ಮತಗಟ್ಟೆಯ ಡಬ್ಬಿ ತರುತ್ತಿದ್ದ ಬಸ್ ಹಾಗೂ ಟಿಪ್ಪರ್ ನಡುವೆ ಹಡಲಗೇರಿ ಕ್ರಾಸ್ ಬಳಿ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಮತಗಟ್ಟೆ ಅಧಿಕಾರಿಗಳು ಹಾಗೂ ಪೊಲೀಸರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ತಹಶೀಲ್ದಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





