ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲನೆ

ಉಡುಪಿ, ಡಿ.22: ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಉಡುಪಿ ಶಾಸಕ ಕೆ.ರಘುಪತಿ ಅಧಿಕಾರಿ ಗಳೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಕೆಎಸ್‌ಆರ್‌ಟಿಸಿ ಕಾರ್ಯಪಾಲಕ ಅಭಿಯಂತರ ಎ.ಎನ್.ಶಿವಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಗುಳಿಗಾರ್, ಮಂಗಳೂರು ವಿಭಾಗೀಯ ಕಂಟ್ರೋಲರ್ ಅರುಣ್, ಉಡುಪಿ ಡಿಪೋ ಮ್ಯಾನೇಜರ್ ಉದಯ್ ಶೆಟ್ಟಿ ಅವರೊಂದಿಗೆ ನಿಲ್ದಾಣದ ಕಾಮಗಾರಿ ವಿಕ್ಷೀಸಿದ ಶಾಸಕರು, ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರವೇ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯ ಸವಿತಾ ಹರೀಶ್‌ರಾಮ್, ನಗರಸಭೆಯ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ರಾಜ್ ಉಪಸ್ಥಿತರಿದ್ದರು.
Next Story





