ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ: ಮುಂದಿನ ಕ್ರಮಗಳು ಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ- ಹೈಕೋರ್ಟ್

ಬೆಂಗಳೂರು, ಡಿ.22: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಅನುಸಾರ ಕೈಗೊಳ್ಳುವ ಎಲ್ಲ ಮುಂದಿನ ಕ್ರಮಗಳು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಅಖಿಲ ಭಾರತ ಕಿಸಾನ್ ಸಭಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಅನುಸಾರ ಕೈಗೊಳ್ಳುವ ಎಲ್ಲ ಮುಂದಿನ ಕ್ರಮಗಳು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಿದೆ.
ಸೆಕ್ಷನ್ 63ರ ಅಡಿಯಲ್ಲಿ ಮಾಡಲಾಗಿರುವ ತಿದ್ದುಪಡಿಯು, ಕೃಷಿ ಉತ್ಪಾದನೆಗೆ ಮಾರಕವಾಗುವ ಸಂಭವಗಳಿವೆ. ಕೃಷಿ ಹಿನ್ನೆಲೆ ಇಲ್ಲದವರು ಕೂಡ ಕೃಷಿ ಭೂಮಿಯನ್ನು ಖರೀದಿಸಲು ಇರುವಂತಹ ನಿರ್ಬಂಧವನ್ನು ಸಡಿಲಿಸಿರುವುದು ಭೂ ಸುಧಾರಣಾ ಕಾಯ್ದೆಯ ಮೂಲ ಆಶಯಗಳಿಗೆ ವಿರುದ್ದವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.





