Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ' 6ನೇ...

'ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ' 6ನೇ ಸ್ಥಾನದಲ್ಲಿ ಕರ್ನಾಟಕ : ಮುಖ್ಯಮಂತ್ರಿ ಬಿ.ಎಸ್.ವೈ

ವಾರ್ತಾಭಾರತಿವಾರ್ತಾಭಾರತಿ23 Dec 2020 2:53 PM IST
share
ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ 6ನೇ ಸ್ಥಾನದಲ್ಲಿ ಕರ್ನಾಟಕ : ಮುಖ್ಯಮಂತ್ರಿ ಬಿ.ಎಸ್.ವೈ

ಬೆಂಗಳೂರು: ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯೋಜನಾ ಇಲಾಖೆಯು ಸಿದ್ಧ ಪಡಿಸಿರುವ ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030 ರ ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿ ಮಾತನಾಡಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030ರ ಕಾರ್ಯತಂತ್ರ ಮತ್ತು ಕ್ರಿಯಾ ಯೋಜನೆಯು ಮುಂದಿನ 10 ವರ್ಷಗಳ ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಪೂರಕವಾದ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ದೃಷ್ಟಿಕೋನವನ್ನು ಅನುಷ್ಠಾನಕ್ಕೆ ತರಲು ಇದು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ರಾಜ್ಯದ ಎಲ್ಲ ಜನರಿಗೆ ಉತ್ತಮ ಜೀವನೋಪಾಯ, ಸ್ವಚ್ಛ ಪರಿಸರ, ಉತ್ತಮ ರೋಗ್ಯ, ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಇತ್ಯಾದಿ ಗುರಿಗಳನ್ನು ತಲುಪಲು ಈ ಕ್ರಿಯಾ ಯೋಜನೆ ಒತ್ತು ನೀಡುತ್ತದೆ. ಹೆಚ್ಚು ಸುಧಾರಣೆಯ ಅಗತ್ಯವಿರುವ ಪ್ರದೇಶ ಮತ್ತು ಕಾರ್ಯಕ್ರಮಗಳಿಗೆ ಮುಂದಿನ ಆಯವ್ಯಯದಲ್ಲಿ ಅಗತ್ಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕರ್ನಾಟಕ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಅವರು ಮಾತನಾಡಿ, ತಾವು ಕರ್ನಾಟಕಕ್ಕಿಂತ ಉತ್ತಮ ಶ್ರೇಯಾಂಕ ಹೊಂದಿರುವ ಕೇರಳ, ಗುಜರಾತ್ ಮತ್ತು ಇತರ ರಾಜ್ಯಗಳಿಗೆ ಭೇಟಿ ನೀಡಿದ್ದು, ಆ ರಾಜ್ಯಗಳಲ್ಲಿ ಸುಸ್ಥಿರ ಅಭಿವೃದ್ಧಿ ಗುರಿ 2030 ಸಾಧನೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲಾಗಿದೆ. ಇದರ ವಿವರಗಳನ್ನು ಯೋಜನಾ ಮಂಡಳಿಯ ಸಭೆಯಲ್ಲಿ ಪ್ರಸ್ತುತ ಪಡಿಸುವು ದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು, ಕೇಂದ್ರ ಸರ್ಕಾರದ ನೀತಿ ಆಯೋಗದ ಸೂಚನೆಯಂತೆ ಸುಸ್ಥಿರ ಅಭಿವೃದ್ಧಿಯ 17 ಗುರಿ ಸಾಧನೆಗೆ ನಿವೃತ್ತ/ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈ ಅಧಿಕಾರಿಗಳ ಸಮಿತಿಗಳು ಕಾರ್ಯಯೋಜನೆಗಳನ್ನು ರೂಪಿಸಿ, ಸಲ್ಲಿಸಿದ್ದು, ಇವುಗಳನ್ನು ಆಯವ್ಯಯದಲ್ಲಿ ಅಳವಡಿಸುವ ಕುರಿತಾಗಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದರು.

ಯೋಜನಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಾತನಾಡಿ, ನೀತಿ ಆಯೋಗ ಬಿಡುಗಡೆ ಮಾಡಿದ 2019ರ ಎಸ್ ಡಿ ಜಿ ಇಂಡಿಯಾ ಇಂಡೆಕ್ಸ್ ನಲ್ಲಿ ಕರ್ನಾಟಕ 66 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಕಡಿಮೆ ಅಂಕ ಪಡೆದಿರುವ ಗುರಿಗಳನ್ನು ಸಾಧಿಸಲು ಆದ್ಯತೆ ನೀಡುವ ಮೂಲಕ ಕರ್ನಾಟಕದ ಶ್ರೇಯಾಂಕವನ್ನು ಉತ್ತಮಪಡಿಸಬಹುದಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ ಕ್ರಿಯಾ ಯೋಜನೆಯ ವಿವರಗಳು planning.karnataka.gov.in ವೆಬ್ ಸೈಟಿನಲ್ಲಿ ಲಭ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X