ಕೃಷಿ ಕಾನೂನು ವಿರುದ್ಧ 2 ಕೋಟಿ ಹಸ್ತಾಕ್ಷರವಿರುವ ಪತ್ರ ರಾಷ್ಟ್ರಪತಿಗೆ ಸಲ್ಲಿಸಲು ಕಾಂಗ್ರೆಸ್ ನಿರ್ಧಾರ

ಹೊಸದಿಲ್ಲಿ: ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನಕ್ಕೆ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷ ಈ ವೇಳೆ ಕೃಷಿ ಕಾನೂನುಗಳನ್ನು ವಿರೋಧಿಸಿ 2 ಕೋಟಿ ಹಸ್ತಾಕ್ಷರವಿರುವ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರಿಗೆ ಸಲ್ಲಿಸಲು ತೀರ್ಮಾನಿಸಿದೆ. ರಾಹುಲ್‌ಗೆ ಕಾಂಗ್ರೆಸ್‌ನ ಎಲ್ಲ ಸಂಸದರು ಸಾಥ್ ನೀಡಲಿದ್ದಾರೆ.
ಕಾಂಗ್ರೆಸ್ ದೇಶಾದ್ಯಂತ ಈ ಸಹಿ ಸಂಗ್ರಹ ಅಭಿಯಾನ ನಡೆಸಿತ್ತು. ಮೂರು ಕೃಷಿ ಸುಧಾರಣಾ ಕಾನೂನುಗಳ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅದನ್ನು ಹಿಂಪಡೆಯುವಂತೆ ರಾಷ್ಟ್ರಪತಿಗೆ ಕಾಂಗ್ರೆಸ್ ವಿನಂತಿಸಿಕೊಳ್ಳಲಿದೆ.
ಕೊರೆಯುವ ಚಳಿಯನ್ನು ಲೆಕ್ಕಿಸದೆ ಸುಮಾರು ಒಂದು ತಿಂಗಳಿನಿಂದ ದಿಲ್ಲಿ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡುವ ಸಲುವಾಗಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸಂಸದರ ನಿಯೋಗ ಸಂಸತ್ ಕಟ್ಟಡ ಸಮೀಪವಿರುವ ವಿಜಯ್ ಚೌಕದಿಂದ ರಾಷ್ಟ್ರಪತಿ ಭವನದ ತನಕ ಗುರುವಾರ ಮೆರವಣಿಗೆ ನಡೆಸಲಿದೆ.
Next Story





