Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಹ್ಮದ್ ಪಟೇಲ್ ಶ್ರಮವಹಿಸಿ ಗೆದ್ದಿದ್ದ...

ಅಹ್ಮದ್ ಪಟೇಲ್ ಶ್ರಮವಹಿಸಿ ಗೆದ್ದಿದ್ದ ರಾಜ್ಯಸಭಾ ಸ್ಥಾನವನ್ನು ಕಳೆದುಕೊಳ್ಳಲಿರುವ ಕಾಂಗ್ರೆಸ್: ವರದಿ

ವಾರ್ತಾಭಾರತಿವಾರ್ತಾಭಾರತಿ23 Dec 2020 3:39 PM IST
share
ಅಹ್ಮದ್ ಪಟೇಲ್ ಶ್ರಮವಹಿಸಿ ಗೆದ್ದಿದ್ದ ರಾಜ್ಯಸಭಾ ಸ್ಥಾನವನ್ನು ಕಳೆದುಕೊಳ್ಳಲಿರುವ ಕಾಂಗ್ರೆಸ್: ವರದಿ

ಹೊಸದಿಲ್ಲಿ,ಡಿ.23: ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ರಾಜ್ಯಸಭಾ ಸ್ಥಾನವನ್ನು ಕಾಂಗ್ರೆಸ್ ಕಳೆದುಕೊಳ್ಳುವ ಸಾಧ್ಯತೆಗಳು ನಿಚ್ಚಳವಾಗಿದೆ. ಆದರೆ 2017ರಲ್ಲಿ ಈ ರಾಜ್ಯಸಭಾ ಸ್ಥಾನ ಬಿಜೆಪಿ ಕೈವಶವಾಗುವುದನ್ನು ತಡೆದು ಗೆಲ್ಲಲು ಅಹ್ಮದ್ ಪಟೇಲ್ ನೇತೃತ್ವದ ಕಾಂಗ್ರೆಸ್ ಪಕ್ಷವು ಬಹಳಷ್ಟು ಶ್ರಮಪಟ್ಟಿತ್ತು ಎಂದು ndtv.com ವರದಿ ಮಾಡಿದೆ.

ಅಹ್ಮದ್ ಪಟೇಲ್ ಅವರ ರಾಜ್ಯಸಭಾ ಅಧಿಕಾರಾವಧಿಯು ಆಗಸ್ಟ್ 18, 2023ರ ತನಕ ಇತ್ತು.  ಪಟೇಲ್ ಅವರ ಸ್ಥಾನ ಅವರ ನಿಧನ ಹೊಂದಿದ ನವೆಂಬರ್ 25ರಂದೇ ತೆರವಾಗಿದೆ ಎಂದು ಘೋಷಿಸಲಾಗಿದ್ದರೆ  ಬಿಜೆಪಿಯ ಅಭಯ್ ಭಾರಧ್ವಾಜ್ ಅವರು ಡಿಸೆಂಬರ್ 1ರಂದು ನಿಧನರಾದ ಬಳಿಕ ಅವರ ಸ್ಥಾನವೂ ತೆರವುಗೊಂಡಿದೆ. ಭಾರದ್ವಾಜ್ ಅವರ ಅಧಿಕಾರಾವಧಿ ಜೂನ್ 21, 2026ರ ತನಕವಿತ್ತು.

ಈ ಎರಡು ಸ್ಥಾನಗಳನ್ನು ತುಂಬಲು ಪ್ರತ್ಯೇಕವಾಗಿ ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ಬಿಜೆಪಿ ಬಳಿ ಗುಜರಾತ್‍ನಲ್ಲಿ 111 ಶಾಸಕರಿದ್ದರೆ ಕಾಂಗ್ರೆಸ್ ಬಳಿ 65 ಶಾಸಕರಿದ್ದಾರೆ.  ಒಬ್ಬ ಅಭ್ಯರ್ಥಿಗೆ ಶೇ 50ರಷ್ಟು ಅಥವಾ 88 ಮತಗಳು ಗೆಲುವಿಗೆ ಅಗತ್ಯವಿದೆ.

ಕಳೆದ ವರ್ಷ ಅಮಿತ್ ಶಾ ಹಾಗೂ ಸ್ಮೃತಿ ಇರಾನಿ ಅವರಿಂದ ತೆರವಾದ ರಾಜ್ಯಸಭಾ ಸೀಟುಗಳನ್ನು ಬಿಜೆಪಿ ಗೆದ್ದಿತ್ತು. ಒಂದರಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಗೆಲುವು ಸಾಧಿಸಿದ್ದರೂ ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಎರಡೂ ಸ್ಥಾನಗಳಿಗೆ ಚುನಾವಣೆ ಏಕಕಾಲದಲ್ಲಿ ನಡೆದಿದ್ದರೆ ತಾನು ಒಂದು ಸ್ಥಾನ ಗಳಿಸಬಹುದಾಗಿತ್ತು ಎಂದು ಕಾಂಗ್ರೆಸ್ ಹೇಳುತ್ತಿದೆ. ಎರಡು ಸ್ಥಾನಗಳಿಗೆ ಜತೆಯಾಗಿ ಚುನಾವಣೆ ನಡೆದಾಗ ಪ್ರಮಾಣಾಗುಣ ಪ್ರಾತಿನಿಧಿತ್ವದ ವ್ಯವಸ್ಥೆಯ ಆಧಾರದಲ್ಲಿ ನಡೆಯುತ್ತದೆ, ಎಂದರೆ ಈ ವ್ಯವಸ್ಥೆಯಡಿಯಲ್ಲಿ ಶಾಸಕರು  ಪ್ರತಿಯೊಬ್ಬ ಅಭ್ಯರ್ಥಿಯ ಪ್ರಾಶಸ್ತ್ಯ ಪಟ್ಟಿ ಮಾಡುತ್ತಾರೆ.  ಯಾವ ಅಭ್ಯರ್ಥಿ ಹೆಚ್ಚಿನ ಮತದಾರರಿಗೆ ಪ್ರಥಮ ಪ್ರಾಶಸ್ತ್ಯದ ಆಯ್ಕೆಯಾಗುತ್ತಾರೆಯೇ ಅವರು ಗೆಲ್ಲುತ್ತಾರೆ ಹಾಗೂ ಪ್ರತಿಯೊಬ್ಬರ ಮತವನ್ನು ಒಮ್ಮೆ ಮಾತ್ರ ಲೆಕ್ಕ ಮಾಡಲಾಗುತ್ತದೆ.

ಆದರೆ ಪ್ರತ್ಯೇಕವಾಗಿ ರಾಜ್ಯಸಭಾ ಚುನಾವಣೆಯನ್ನು 2009ರಿಂದಲೇ ನಡೆಸಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಇದೇ ರೀತಿ ಈ ಬಾರಿಯೂ ಪ್ರತ್ಯೇಕವಾಗಿ ಚುನಾವಣೆ ನಡೆದರೆ ಎರಡೂ ಸ್ಥಾನಗಳು ಬಿಜೆಪಿ ಪಾಲಾಗಲಿವೆ ಎಂದು ndtv.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X