Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1992 ಸಿಸ್ಟರ್ ಅಭಯಾ ಕೊಲೆ ಪ್ರಕರಣ:...

1992 ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಪಾದ್ರಿ ಮತ್ತು ಭಗಿನಿಗೆ ಜೀವಾವಧಿ ಶಿಕ್ಷೆ

‘ಕೊಡಲಿ ಬಳಸಿ ಕೊಲೆಗೈದಿದ್ದ ಅಪರಾಧಿಗಳು’

ವಾರ್ತಾಭಾರತಿವಾರ್ತಾಭಾರತಿ23 Dec 2020 4:12 PM IST
share
1992 ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಪಾದ್ರಿ ಮತ್ತು ಭಗಿನಿಗೆ ಜೀವಾವಧಿ ಶಿಕ್ಷೆ

ತಿರುವನಂತಪುರಂ,ಡಿ.23: ಇಪ್ಪತ್ತೆಂಟು ವರ್ಷಗಳ ಹಿಂದೆ, 1992ರಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಭಗಿನಿ ಅಭಯಾ ಪ್ರಕರಣದಲ್ಲಿ ಆಕೆಯನ್ನು ಹತ್ಯೆಗೈದ ಅಪರಾಧಕ್ಕಾಗಿ  ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಫಾದರ್ ಥಾಮಸ್ ಕೊಟೂರ್ ಹಾಗೂ ಭಗಿನಿ ಸೆಫಿ ಅವರಿಗೆ ಜೀವಾವಧಿ ಶಿಕ್ಷೆ ಘೋಷಿಸಿದೆ.  ಮಾರ್ಚ್ 1992ರಲ್ಲಿ ಭಗಿನಿ ಅಭಯಾ(19) ಕೇರಳದ ಕೊಟ್ಟಾಯಂನ ಪಾಯಸ್ ಎಕ್ಸ್ ಕಾನ್ವೆಂಟಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು.

ಇಬ್ಬರು ಅಪರಾಧಿಗಳಿಗೂ ಐಪಿಸಿ ಸೆಕ್ಷನ್ 302 ಅನ್ವಯ ಶಿಕ್ಷೆ ಪ್ರಕಟಿಸಲಾಗಿದೆ. ಮುಖ್ಯ ಆರೋಪಿ ಥಾಮಸ್ ಕೊಟೂರ್  ಎರಡು ಜೀವಾವಧಿ ಶಿಕ್ಷೆ ಅವಧಿ ಅನುಭವಿಸಬೇಕಿದೆ. ಒಂದು ಜೀವಾವಧಿ ಶಿಕ್ಷೆ ಕೊಲೆಗಾಗಿ ಹಾಗೂ ಇನ್ನೊಂದು ಕಾನ್ವೆಂಟ್‍ಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕೆ, ಆದರೆ ಎರಡೂ ಶಿಕ್ಷೆಯನ್ನು ಜತೆಯಾಗಿ ಅನುಭವಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಸಾಕ್ಷ್ಯ ನಾಶಕ್ಕಾಗಿ ಎರಡೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹೊರತಾಗಿ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು ತಲಾ ಐದು ಲಕ್ಷ ರೂ. ದಂಡ ಕೂಡ ಪಾವತಿಸಬೇಕಿದೆ. ಇಬ್ಬರನ್ನೂ ನ್ಯಾಯಾಲಯ ಮಂಗಳವಾರ ಅಪರಾಧಿ ಎಂದು ಘೋಷಿಸಿ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ತಾನು ಕ್ಯಾನ್ಸರ್‍ಗೆ ಚಿಕಿತ್ಸೆ ಪಡೆಯುತ್ತಿರುವುದರಿಂದ ಕಡಿಮೆ ಶಿಕ್ಷೆ ನೀಡಬೇಕೆಂಬ ಥಾಮಸ್ ಕೊಟೂರ್ ಮಾಡಿದ ಮನವಿ ಹಾಗೂ  ತನ್ನ ಶಿಕ್ಷೆ ಕಡಿಮೆಗೊಳಿಸುವಂತೆ ಭಗಿನಿ ಸೆಫಿ ಮಾಡಿದ ಮನವಿಗಳನ್ನು ನ್ಯಾಯಾಲಯ ಒಪ್ಪಿಲ್ಲ.

ಭಗಿನಿ ಅಭಯಾ ಮೃತದೇಹ ಬಾವಿಯಲ್ಲಿ ಪತ್ತೆಯಾದ ಆರಂಭದಲ್ಲಿ ಇದೊಂದು ಆತ್ಮಹತ್ಯೆ  ಎಂದು ತಿಳಿಯಲಾಗಿತ್ತಾದರೂ ಸಿಬಿಐ ತನಿಖೆಯಿಂದ ಇದೊಂದು ಕೊಲೆ ಎಂದು ಕಂಡು ಬಂದಿತ್ತು. ನಸುಕಿನಲ್ಲಿ ಓದಲೆಂದು ಎದ್ದು ಮುಖ ತೊಳೆಯಲೆಂದು ಅಡುಗೆ ಮನೆಗೆ ಬಂದಿದ್ದ ಅಭಯಾ ಅಲ್ಲಿ ಓರ್ವ ಭಗಿನಿ ಹಾಗೂ ಇಬ್ಬರು ಪಾದ್ರಿಗಳನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ್ದರು. ಇದನ್ನು ಆಕೆ ಬೇರೆಯವರಿಗೆ ಹೇಳಬಹುದು ಎಂಬ ಭಯದಿಂದ ಆಕೆಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ನಂತರ ಬಾವಿಗೆಸೆಯಲಾಗಿತ್ತು. ಆದರೆ ಚರ್ಚ್ ಮಾತ್ರ ಆರೋಪಿಗಳ ಬೆಂಬಲಕ್ಕೆ ನಿಂತು ಅವರು ನಿರಪರಾಧಿಗಳೆಂದೇ ಹೇಳಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X