Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ...

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ರಾತ್ರಿ ಕರ್ಫ್ಯೂ ಜಾರಿ: ಆರೋಗ್ಯ ಸಚಿವ ಡಾ.ಸುಧಾಕರ್

ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ

ವಾರ್ತಾಭಾರತಿವಾರ್ತಾಭಾರತಿ23 Dec 2020 7:00 PM IST
share
ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ರಾತ್ರಿ ಕರ್ಫ್ಯೂ ಜಾರಿ: ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು, ಡಿ.23: ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ನಡುವೆ, ಯುನೈಟೆಡ್ ಕಿಂಗ್ ಡಮ್ ನಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಯು.ಕೆ.ಯಲ್ಲಿ ಹೊಸ ಪ್ರಭೇದದ ಕೊರೋನ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿದ ನಂತರ, ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಚರ್ಚೆ ಕುರಿತು ಮಾಹಿತಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿದ ಬಳಿಕ ರಾತ್ರಿ ಕರ್ಫ್ಯೂ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನಿಂದ ಜನವರಿ 2 ರವರೆಗೆ ಪ್ರತಿ ದಿನ ರಾತ್ರಿ ರಾಜ್ಯದಲ್ಲಿ ಕರ್ಫ್ಯೂ ವಿಧಿಸಲಾಗುತ್ತದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳನ್ನು ಮುಗಿಸಿ ಈ ಅವಧಿಯೊಳಗೆ ಮನೆಗೆ ಮರಳಬೇಕು. ಹಬ್ಬದ ಸಮಾರಂಭ, ಹೊಸ ವರ್ಷದ ಸಮಾರಂಭ, ಆಚರಣೆ ಎಂದು ಅನವಶ್ಯಕವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಅವರು, ತುರ್ತು ಸೇವೆಗಳು ಹೇಗಿರಬೇಕು, ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ವಿವರವಾಗಿ ತಿಳಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖೆಯಿಂದ ನಿಗಾ: ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ರಾಜ್ಯಕ್ಕೆ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸಲಿದ್ದಾರೆ. ಯು.ಕೆ.ಯಿಂದ ಬಂದವರು ಕಡ್ಡಾಯವಾಗಿ 28 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಬೇಕು. ಮೊದಲ 14 ದಿನಗಳ ಕಾಲ ಅವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸುತ್ತಾರೆ. ನಂತರದ 14 ದಿನ ಅವರೇ ಸ್ವತಃ ನಿಗಾ ಇರಿಸಿಕೊಳ್ಳಬೇಕು ಎಂದು ಸುಧಾಕರ್ ವಿವರಿಸಿದರು.

ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ಯು.ಕೆ.ಯಿಂದ ರಾಜ್ಯಕ್ಕೆ 2,500 ಜನರು ಬಂದಿದ್ದಾರೆ. ಪ್ರತಿ ದಿನ ಯು.ಕೆ.ಯಿಂದ ಎರಡೆರಡು ವಿಮಾನ ಬಂದಿವೆ. ಯಾವ ವಿಮಾನದಲ್ಲಿ ಎಷ್ಟು ಜನ ಬಂದಿದ್ದಾರೆ ಎಂಬ ಮಾಹಿತಿಯನ್ನೂ ಕೂಡ ನೀಡಲಾಗುವುದು. ಇಷ್ಟೂ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುವುದು. ಯಾರಲ್ಲಾದರೂ ರೋಗ ಲಕ್ಷಣ ಕಂಡುಬಂದರೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದು ಅವರು ತಿಳಿಸಿದರು.

ನಿಮ್ಹಾನ್ಸ್, ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ವೈರಸ್ ಬಗ್ಗೆ ಅಧ್ಯಯನ ಮಾಡುವ ನಾಲ್ಕು ಸಂಸ್ಥೆಗಳು ಬೆಂಗಳೂರಿನಲ್ಲಿವೆ. ಪಾಸಿಟಿವ್ ಆದವರ ಮಾದರಿಯನ್ನು ಈ ಸಂಸ್ಥೆಗಳಿಗೆ ನೀಡಿ ಹೊಸ ಪ್ರಭೇದದ ವೈರಸ್ ಬಗ್ಗೆ ಅಧ್ಯಯನ ಮಾಡಲಾಗುವುದು. ಅಗತ್ಯವಿದ್ದರೆ ಜೀನ್ ಸೀಕ್ವೆನ್ಸ್ ಅಧ್ಯಯನ ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.

ತಪ್ಪು ಮಾಹಿತಿ ನೀಡಬೇಡಿ: ರಾಜಕೀಯ ಮುಖಂಡರೊಬ್ಬರು ಯು.ಕೆ.ಯಿಂದ 14 ಸಾವಿರ ಜನರು ಬಂದಿದ್ದಾರೆ ಎಂದು ತಪ್ಪಾಗಿ ಹೇಳಿದ್ದಾರೆ. ನಮ್ಮ ಸರಕಾರಕ್ಕೆ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ, ಪ್ರಯಾಣಿಕರ ಸಂಖ್ಯೆಯನ್ನು ಮರೆಮಾಚುವ ಅಗತ್ಯವಿಲ್ಲ. ಅಂಕಿ ಸಂಖ್ಯೆಯನ್ನು ಮುಚ್ಚಿಡುವ ಯಾವುದೇ ಅವಶ್ಯಕತೆ ಇಲ್ಲ. ಯಾವುದೇ ರಾಜಕೀಯ ಮುಖಂಡರು ಸರಿಯಾದ ಮಾಹಿತಿ ಕಲೆಹಾಕಿ ಮಾತನಾಡಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ವಿರುದ್ಧ ಪರೋಕ್ಷವಾಗಿ ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರು.

ಕರ್ಫ್ಯೂ ನಿರ್ಧಾರಕ್ಕೆ ಬಾರ್ ಮತ್ತು ಹೊಟೇಲ್ ಮಾಲಕರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾಕರ್, ರಾತ್ರಿ ಕರ್ಫ್ಯೂ ನಿರ್ಧಾರವನ್ನು ಸಂತೋಷದಿಂದೇನೂ ತೆಗೆದುಕೊಂಡಿಲ್ಲ. ಬಹಳ ಅನಿವಾರ್ಯ, ಅವಶ್ಯಕತೆ ಇರುವುದರಿಂದ ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನಕ್ಕೆ ಬರಲಾಗಿದೆ. ಕೃಷಿ ಚಟುವಟಿಕೆಗಳಿಗೆ, ಸರಕು ಸಾಗಣಿಕೆಗೆ, ಮಾರಾಟಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಚಾರದಲ್ಲಿ ಎಲ್ಲರಿಗೂ ಜವಾಬ್ದಾರಿ ಇದೆ. ಕೇವಲ ಹಣ ಸಂಪಾದನೆ ಹಾಗೂ ಆರ್ಥಿಕ ಚಟುವಟಿಕೆಯನ್ನು ಮಾತ್ರ ನೋಡದೆ, ಜನರ ಸುರಕ್ಷತೆ ಹಾಗೂ ಆರೋಗ್ಯವನ್ನು ಕೂಡ ನೋಡಬೇಕು. ಕೇವಲ ಒಂಬತ್ತು ದಿನಗಳು ಮಾತ್ರ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಹೊಸ ಪ್ರಭೇದದ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗಲಿದೆ ಎಂದ ಅವರು, ಬೆಂಗಳೂರಿನ ಆರ್ಚ್ ಬಿಷಪ್ ನನಗೆ ಮಾಹಿತಿ ಕಳುಹಿಸಿದ್ದಾರೆ. ಯಾವುದೇ ಸಮಾರಂಭ ಮಾಡುವುದಿಲ್ಲ ಎಂದು ಅವರೇ ಹೇಳಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X