Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಎಪಿಎಂಸಿ ಕಾಯ್ದೆ ತಿದ್ದುಪಡಿ’...

‘ಎಪಿಎಂಸಿ ಕಾಯ್ದೆ ತಿದ್ದುಪಡಿ’ ಗೊಂದಲಕ್ಕೆ ಶಾಶ್ವತ ಪರಿಹಾರ: ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ23 Dec 2020 7:03 PM IST
share
‘ಎಪಿಎಂಸಿ ಕಾಯ್ದೆ ತಿದ್ದುಪಡಿ’ ಗೊಂದಲಕ್ಕೆ ಶಾಶ್ವತ ಪರಿಹಾರ: ಎಸ್.ಟಿ.ಸೋಮಶೇಖರ್

ಬೆಂಗಳೂರು, ಡಿ.23: ಎಪಿಎಂಸಿ ಒಳಗೆ ಯಾವ ರೀತಿ ಸೆಸ್ ಇದೆಯೋ ಹೊರಗೂ ಅದೇ ರೀತಿಯ ನೀತಿ ರೂಪಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಉಂಟಾಗಿರುವ ಗೊಂದಲಕ್ಕೆ ಶಾಶ್ವತ ಪರಿಹಾರ ಕೊಡುವುದಕ್ಕೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಬುಧವಾರ ನಗರದ ಕೆ.ಜಿ.ರಸ್ತೆಯಲ್ಲಿರುವ ಎಫ್‍ಕೆಸಿಸಿಐ ಸಭಾಂಗಣದಲ್ಲಿ ನಡೆದ ಎಪಿಎಂಸಿ ವರ್ತಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಲ್ಲಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಕೇಳಿಬಂದಿರುವ ಸಮಸ್ಯೆಗಳನ್ನು ಸಂಪುಟದ ಗಮನಕ್ಕೆ ತಂದು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾನು ಯಾರಿಗೂ ಅಸಹಕಾರ ಕೊಡುವುದಿಲ್ಲ. ಸಹಕಾರ ಕ್ಷೇತ್ರದಲ್ಲಿ ಸಹಕಾರವನ್ನು ಕೊಡುತ್ತಾ ಬಂದಿದ್ದೇನೆಯೇ ವಿನಹ ಯಾರಿಗೂ ಸಮಸ್ಯೆ ಮಾಡುವುದು ನಮ್ಮ ಉದ್ದೇಶವಲ್ಲ ಎಂದರು.

1.30 ರೂಪಾಯಿ ಇದ್ದ ಎಪಿಎಂಸಿ ಸೆಸ್ ಅನ್ನು 1 ರೂಪಾಯಿಗಳಿಗೆ ಮೊದಲು ಇಳಿಸಲಾಗಿತ್ತು. ಕೊನೆಗೆ ಎಲ್ಲರ ಬೇಡಿಕೆಗೆ ಅನುಗುಣವಾಗಿ ಮುಖ್ಯಮಂತ್ರಿಗಳು 35 ಪೈಸೆಗೆ ಇಳಿಸಿ ತೀರ್ಮಾನ ತೆಗೆದುಕೊಂಡಿದ್ದರು. ಆದರೆ, ಇದರಿಂದ ಸರಕಾರಕ್ಕೆ 500 ಕೋಟಿ ರೂ.ಗಳಷ್ಟು ನಷ್ಟವಾಗುತ್ತದೆ ಎಂದು ವಿರೋಧ ವ್ಯಕ್ತವಾಯಿತು. ಪುನಃ 1 ರೂಪಾಯಿಗೇರಿಸುವ ತೀರ್ಮಾನವನ್ನು ಮುಖ್ಯಮಂತ್ರಿ ತೆಗೆದುಕೊಂಡಿದ್ದಾರೆ. ಆದರೆ, ಎಪಿಎಂಸಿಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಸೋಮಶೇಖರ್, 8,500 ಎಕರೆ ಎಪಿಎಂಸಿ ಜಾಗವಿದೆ. ಇಷ್ಟು ವಿಶಾಲವಾಗಿರುವ ಎಪಿಎಂಸಿಯನ್ನು ಮುಚ್ಚುವುದಿಲ್ಲ. ಕೆಲವರು ಟಿವಿ ಮುಂದೆ ಬೇಕೆಂದೆ ವಿರೋಧ ಮಾಡುತ್ತಿದ್ದಾರೆ. ಆದರೆ, ವರ್ತಕರ ಅಹವಾಲುಗಳನ್ನು ಮುಖ್ಯಮಂತ್ರಿ ಮುಂದೆ ಪ್ರಾಮಾಣಿಕವಾಗಿಡುತ್ತೇನೆ ಎಂದರು.

ವರ್ತಕರ ಅಹವಾಲು ಸ್ವೀಕಾರ: ರೈತರ, ದಲ್ಲಾಳಿಗಳ ಹಾಗೂ ವರ್ತಕರಿಗೆ ಒಂದೇ ನಿಯಮ ಇರಲಿ. ಎಪಿಎಂಸಿ ಒಳಗೆ ಹಾಗೂ ಹೊರಗೆ ಏಕರೂಪ ಶುಲ್ಕ ನಿಗದಿ ಮಾಡಬೇಕು. ರೈತ ಹಾಗೂ ವರ್ತಕನನ್ನು ಸರಿಸಮನಾಗಿ ನೋಡಿಕೊಳ್ಳಬೇಕು. ಎಪಿಎಂಸಿ ಮೂಲಕವೇ ಖರೀದಿಗೆ ಅವಕಾಶ ಕಲ್ಪಿಸಬೇಕು. ಕಾಯ್ದೆ ತಿದ್ದುಪಡಿಯಿಂದ ರೈತರು ಹಾಗೂ ವ್ಯಾಪಾರಸ್ಥರಿಗಿಬ್ಬರಿಗೂ ತೊಂದರೆಯಾಗುತ್ತಿದೆ. ಎಪಿಎಂಸಿ ಒಳಗೊಂದು ದರ ಹೊರಗೊಂದು ದರ ಇರಬಾರದು ಎಂಬಿತ್ಯಾದಿ ಸಮಸ್ಯೆಗಳ ಬಗ್ಗೆ ವರ್ತಕರು ಸಚಿವರ ಗಮನಕ್ಕೆ ತಂದರು.

ವರ್ತಕರ ಪರವಾಗಿ ಬೇಡಿಕೆಗಳನ್ನು ಮುಂದಿಟ್ಟ ಎಫ್‍ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ.ಸುಂದರ್, ರಾಜ್ಯ ಸರಕಾರ ಆಗಸ್ಟ್ 4ರಂದು ಹೊರಡಿಸಿದ ಆದೇಶದಂತೆ ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇ.0.35 ಗೆ ನಿಗದಿ ಮಾಡಬೇಕು. ಹಾಗೂ ಡಿ.15ರಂದು ಹೊರಡಿಸಿದ ಆದೇಶವನ್ನು ರದ್ದು ಮಾಡಬೇಕು. ಎಪಿಎಂಸಿ ಪ್ರಾಂಗಣದ ಹೊರಗಡೆಯ ವ್ಯಾಪಾರಸ್ಥರಿಗೂ ಸಹ ಶೇ.0.35ರಷ್ಟು ಮಾರುಕಟ್ಟೆ ನಿಗದಿ ಮಾಡಿ ಎರಡು ಮಾರುಕಟ್ಟೆಯಲ್ಲಿ (ಪ್ರಾಂಗಣದ ಒಳಗೆ ಮತ್ತು ಹೊರಗೆ) ವ್ಯಾಪಾರ ಮಾಡುವ ವರ್ತಕರಿಗೆ ನ್ಯಾಯಯುತ ಮತ್ತು ಸಮಾನಾಂತರ ವಾತಾವರಣ ಕಲ್ಪಿಸಬೇಕು ಎಂದರು.

ಇಲ್ಲವೆ ಪ್ರಾಂಗಣದ ಒಳಗೆ ಮತ್ತು ಹೊರಗೆ ವ್ಯಾಪಾರ ಮಾಡುವವರಿಗೆ ಇರುವ ಮಾರುಕಟ್ಟೆ ಶುಲ್ಕವನ್ನು ನಿರ್ಮೂಲನೆ ಮಾಡಬೇಕು. ಸರಕಾರ ಈ ತಿದ್ದುಪಡಿಯನ್ನು ಮಾಡುವುದರಿಂದ ಆದಾಯ ಬರುತ್ತದೆ ಎಂದು ಭಾವಿಸಿರುವುದು ತಪ್ಪು ಕಲ್ಪನೆ. ಸರಕಾರವು ಪ್ರಾಂಗಣದ ಹೊರಗಡೆಯ ವ್ಯಾಪಾರಸ್ಥರಿಗೂ ಸಹ ಶೇ.0.35ರಷ್ಟು ಮಾರುಕಟ್ಟೆ ಶುಲ್ಕ ನಿಗದಿ ಮಾಡಿದಲ್ಲಿ ಸರಕಾರ ಯೋಚನೆ ಮಾಡಿದ್ದಕ್ಕಿಂತ ಎರಡರಷ್ಟು ಆದಾಯ ತರುತ್ತದೆ ಎಂದು ಪೆರಿಕಲ್ ಎಂ.ಸುಂದರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಶಂಕರ ಮುನವಳ್ಳಿ, ವೀರಣ್ಣ ಚರಂತಿಮಠ, ಬ್ಯಾಡಗಿ ಮಾಜಿ ಶಾಸಕ ಸುರೇಶ್ ಗೌಡ ಪಾಟೀಲ್, ಎಪಿಎಂಸಿ ನಿರ್ದೇಶಕ ಕರೀಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X