ರಿಕ್ಷಾ ಢಿಕ್ಕಿ: ಸೈಕಲ್ ಸವಾರ ಮೃತ್ಯು
ಕಾರ್ಕಳ, ಡಿ.23: ರಿಕ್ಷಾವೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಮುಡಾರು ಗ್ರಾಮದ ಅಬ್ಬೆಂಜಾಲು ಬಳಿ ಡಿ.22ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ನೋಣಯ್ಯ ಎಂದು ಗುರುತಿಸಲಾಗಿದೆ. ಬಜಗೋಳಿ ಕಡೆಯಿಂದ ಕಡಾರಿ ಕಡೆಗೆ ಬರುತ್ತಿದ್ದ ಅಟೋ ರಿಕ್ಷಾ ಎದುರಿನಲ್ಲಿ ಹೋಗುತ್ತಿದ್ದ ಸೈಕಲಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ನೋಣಯ್ಯ ಸೈಕಲ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು, ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ಮೃತ ಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





