ಡಿ. 28: ದ.ಕ. ಜಿಲ್ಲಾಮಟ್ಟದ ಯುವಜನೋತ್ಸವ
ಮಂಗಳೂರು, ಡಿ.23: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಸಿಹಿತ್ಲು ಯುವಕರ ಮಂಡಲಗಳ ಸಂಯುಕ್ತಾಶ್ರಯದಲ್ಲಿ ಡಿ.28ರಂದು ಬೆಳಗ್ಗೆ 9:30ಕ್ಕೆ ಸಸಿಹಿತ್ಲು ಹಳೆ ವಿದ್ಯಾರ್ಥಿ ಸಂಘದ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಡಿ.28ರಂದು ಬೆಳಗ್ಗೆ 9 ಗಂಟೆಯೊಳಗೆ ಸ್ಪರ್ಧಿಗಳ ಹೆಸರನ್ನು ಸಸಿಹಿತ್ಲು ಹಳೆ ವಿದ್ಯಾರ್ಥಿ ಸಂಘದ ರಂಗಮಂದಿರದಲ್ಲಿ ನೋಂದಾಯಿಸಿಕೊಳ್ಳ ಬೇಕು. ಹೆಚ್ಚಿನ ಮಾಹಿತಿಗಾಗಿ ಸಸಿಹಿತ್ಲು ಯುವಕ ಮಂಡಲದ ಸಂಘಟಕ ದಿಲೀಪ್ (9164255042), ಮಂಗಳೂರು ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವಿನೋದ್ ಕುಮಾರ್ (9845026869) ಅವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





