Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಡೆಬರಹ ಪ್ರಕರಣ ಎನ್‌ಐಎಗೆ ವಹಿಸಿ:...

ಗೋಡೆಬರಹ ಪ್ರಕರಣ ಎನ್‌ಐಎಗೆ ವಹಿಸಿ: ವಿಎಚ್‌ಪಿ

ವಾರ್ತಾಭಾರತಿವಾರ್ತಾಭಾರತಿ23 Dec 2020 10:04 PM IST
share
ಗೋಡೆಬರಹ ಪ್ರಕರಣ ಎನ್‌ಐಎಗೆ ವಹಿಸಿ: ವಿಎಚ್‌ಪಿ

ಮಂಗಳೂರು, ಡಿ.23: ಪ್ರಚೋದನಕಾರಿ ಗೋಡೆಬರಹ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾದಳಕ್ಕೆ (ಎನ್‌ಐಎ) ವಹಿಸಬೇಕು ಎಂದು ಆಗ್ರಹಿಸಿ ಮತ್ತು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿ ಕೊಲೆಯತ್ನ ಖಂಡಿಸಿ ವಿಶ್ವಹಿಂದೂ ಪರಿಷತ್ ಮಂಗಳೂರು ವಿಭಾಗದಿಂದ ಮಂಗಳೂರು ತಾಲೂಕು ಕಚೇರಿ ಮುಂಭಾಗ ವಿಹಿಂಪ ಮತ್ತು ಬಜರಂಗದಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಬಜರಂಗದಳದ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್., ಮಂಗಳೂರಿನಲ್ಲಿ ಪ್ರಚೋದನಕಾರಿ ಗೋಡೆ ಬರಹದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಆರೋಪಿಗಳ ಬಳಿ ವಿದೇಶಿ ಮೂಲದ ವ್ಯಕ್ತಿಯ ಪ್ರಚೋದನಕಾರಿ ಭಾಷಣ ಮತ್ತು ಇತರ ಪುಸ್ತಕಗಳು ಸಿಕ್ಕಿರುವುದು ಆತಂಕಕಾರಿ. ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರವಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದರು.

ಹಿಂದೂ ಧರ್ಮ ಸಾವಿರಾರು ವರ್ಷಗಳಿಂದ ಅನ್ಯಮತೀಯರ ದಾಳಿಯನ್ನು ಎದುರಿಸಿ ನಿಂತಿದೆ. ಕರಾವಳಿ ತೀರ ಹಿಂದುತ್ವದ ಕಡಲು. ಇಲ್ಲಿ ಭಯೋತ್ಪಾದನೆಗೆ ವಿಹಿಂಪ, ಬಜರಂಗದಳ ಅವಕಾಶ ನೀಡುವುದಿಲ್ಲ. ಉಗ್ರಗಾಮಿ ಚಟುವಟಿಕೆ ನಡೆಸುವವರ ಕೈ, ತಲೆ ಉಳಿಯುವುದಿಲ್ಲ. ತಮ್ಮ ಮೇಲೆ ದಾಳಿ ನಡೆದರೆ ಪೊಲೀಸರು ಬಂದೂಕು ಬಳಕೆ ಮಾಡಬೇಕು. ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆ ನಿಗ್ರಹಕ್ಕೆ ಎನ್‌ಐಎ ಕಚೇರಿಯನ್ನು ಮಂಗಳೂರಿನಲ್ಲಿ ತೆರೆಯಬೇಕು ಎಂದರು.

ವಿಹಿಂಪ ಜಿಲ್ಲಾ ಉಪಾಧ್ಯಕ್ಷ ವಾಸುದೇವ ಗೌಡ ಮಾತನಾಡಿ, ದೇಶದ ಎಲ್ಲೇ ಉಗ್ರಗಾಮಿ ಚಟುವಟಿಕೆ ನಡೆದರೂ ಕಾಸರಗೋಡು, ಮಂಗಳೂರು, ಮಣಿಪಾಲಕ್ಕೆ ನಂಟು ಇರುವುದು ಇತ್ತೀಚಿನ ದಿನಗಳಲ್ಲಿ ಸಾಬೀತಾಗುತ್ತಿದೆ. ಹಿಂದುಗಳ ವಿರುದ್ಧ, ದೇಶದ ವಿರುದ್ಧ ಮಾತನಾಡುವ ಎಲ್ಲರೂ ಉಗ್ರರೇ ಆಗಿದ್ದಾರೆ. ಮಂಗಳೂರಿನ ಗೋಡೆ ಬರಹ ಪ್ರಕರಣದ ಮೂಲ ತಿಳಿಯಬೇಕಾದರೆ ಎನ್‌ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಉಪಾಧ್ಯಕ್ಷ ಮನೋಹರ ಸುವರ್ಣ, ಬಜರಂಗದಳದ ಮಂಗಳೂರು ವಿಭಾಗ ಸಂಚಾಲಕ ಭುಜಂಗ ಕುಲಾಲ್, ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ, ಸುಕನ್ಯಾ ರಾವ್, ಆಶಾ ಜಗದೀಶ್, ಗುರುಪ್ರಸಾದ್ ಉಳ್ಳಾಲ ಪಾಲ್ಗೊಂಡಿದ್ದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ವಿಹಿಂಪ ಜಿಲ್ಲಾ ಸಹ ಕಾರ್ಯದರ್ಶಿ ಸುರೇಖಾರಾಜ್ ಮನವಿ ಪತ್ರ ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X