Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುರಕ್ಷಿತ ವಾತಾವರಣದಲ್ಲಿ ಶಾಲೆ ಕಾಲೇಜು...

ಸುರಕ್ಷಿತ ವಾತಾವರಣದಲ್ಲಿ ಶಾಲೆ ಕಾಲೇಜು ಆರಂಭಕ್ಕೆ ಸಿದ್ಧತೆ: ಸಚಿವ ಸುರೇಶ್ ಕುಮಾರ್

ಶಾಲಾರಂಭ ಸಿದ್ಧತೆ ಕುರಿತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್

ವಾರ್ತಾಭಾರತಿವಾರ್ತಾಭಾರತಿ23 Dec 2020 10:25 PM IST
share
ಸುರಕ್ಷಿತ ವಾತಾವರಣದಲ್ಲಿ ಶಾಲೆ ಕಾಲೇಜು ಆರಂಭಕ್ಕೆ ಸಿದ್ಧತೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಡಿ.23: ‘ಮಹಾಮಾರಿ ಕೊರೋನ ಓಡಿಸೋಣ, ನಮ್ಮ ವಿದ್ಯಾರ್ಥಿಗಳನ್ನು ಸುರಕ್ಷತೆಯಲ್ಲಿ ಓದಿಸೋಣ' ಎಂಬ ಧ್ಯೇಯದೊಂದಿಗೆ ಸುರಕ್ಷಿತ ವಾತಾವರಣದಲ್ಲಿ ಜ.1ರಿಂದ ಶಾಲೆಗಳನ್ನು ಆರಂಭಿಸಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಶಿಕ್ಷಣ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಮಾರ್ಗದರ್ಶನದೊಂದಿಗೆ ಶಾಲೆಗಳು ಆರಂಭಿಸುವ ಸಂಬಂಧದಲ್ಲಿ ಬುಧವಾರ ಬೆಳಗ್ಗೆ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಡಿಡಿಪಿಐ ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳನ್ನು ವಿವರಿಸಿ ಅವರಿಂದ ಸಲಹೆಗಳನ್ನು ಪಡೆದುಕೊಂಡು ಮಾತನಾಡಿದ ಅವರು, ಎಷ್ಟೋ ಮಕ್ಕಳು ಶಾಲೆಗೆ ಬರಲಿ. ಅವರು ಸುರಕ್ಷಿತವಾಗಿರುವಂತೆ ಎಲ್ಲ ಉಪಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.

ಎಲ್ಲಕ್ಕಿಂತ ಮೊದಲು ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳು ಸುರಕ್ಷಿತ ವಾತಾವರಣದಲ್ಲಿ ಆರಂಭಗೊಂಡು ತರಗತಿಗಳು ಸುರಕ್ಷಿತ ಅಂತರದಲ್ಲಿ ನಡೆಯುತ್ತವೆ ಎಂಬ ಕುರಿತು ಪೋಷಕರಲ್ಲಿ ಮತ್ತು ಸಮಾಜದಲ್ಲಿ ಭರವಸೆ ಮೂಡಿಸುವ ಪ್ರಯತ್ನಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಲಹೆ ನೀಡಿದ ಅವರು, ಡಿ.24ರ ಗುರುವಾರ ಬೆಳಗ್ಗೆ ಆಯಾ ಜಿಲ್ಲಾ ಡಿಡಿಪಿಐ ಮತ್ತು ಡಿಡಿಪಿಯುಗಳು ತಮ್ಮ ವ್ಯಾಪ್ತಿಯ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಮತ್ತು ಪಿಯು ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿ 10 ಮತ್ತು 12ನೇ ತರಗತಿಗಳ ಮತ್ತು 6ರಿಂದ 9ನೆ ತರಗತಿಗಳ ವಿದ್ಯಾಗಮ ತರಗತಿಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಮತ್ತು ಎಸ್‍ಒಪಿಗಳನ್ನು ಪಾಲಿಸುವ ಸಂಬಂಧದಲ್ಲಿ ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ಶಾಲಾರಂಭ ಸರಕಾರಕ್ಕೆ ಬದ್ಧತೆಯ ವಿಷಯ ಮಾತ್ರವೇ ಆಗಿದ್ದು, ಅದು ಪ್ರತಿಷ್ಠೆಯ ವಿಷಯವಾಗಿಲ್ಲ. ಇನ್ನೊಂದು ವಾರದಲ್ಲಿ ಶಾಲಾ ತರಗತಿಗಳ ಪೀರಿಯಡ್ ಸಮಯ, ಪಠ್ಯಕ್ರಮ ನಿಗದಿ ಮಾಡಲಾಗುತ್ತದೆ ಮತ್ತು 10 ಮತ್ತು 12ನೇ ತರಗತಿಗಳ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಿರ್ದೇಶನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ರೂಪಿಸಿರುವ ಪ್ರಮಾಣಿತ ಮಾರ್ಗದರ್ಶಿ ಸೂತ್ರಗಳು-ಎಸ್‍ಒಪಿಗಳು ಈಗಾಗಲೇ ಫೋನ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳನ್ನು ತಲುಪಿವೆ. ಮೂರ್ನಾಲ್ಕು ದಿನಗಳಲ್ಲಿ ಎಸ್‍ಒಪಿಗಳನ್ನು ಎಲ್ಲ ಕ್ಲಸ್ಟರ್ ಗಳಿಗೆ ತಲುಪಿಸಲಾಗುವುದು ಎಂದು ಅವರು ಹೇಳಿದರು.

ಹೊಸ ವರ್ಷದ ದಿನ ಹೊಸ ಭರವಸೆಯೊಂದಿಗೆ ಶಾಲೆಗಳತ್ತ ಬರುತ್ತಿರುವ ಮಕ್ಕಳನ್ನು ಆಹ್ಲಾದಕರ ವಾತಾವರಣದಲ್ಲಿ ಸ್ವಾಗತ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಶಾಲಾ ಸಂಚಿತ ನಿಧಿ ಖಾತೆಯಲ್ಲಿರುವ ಹಣವನ್ನು ಮಕ್ಕಳಿಗೆ ಅಗತ್ಯವಾದ ಸೋಪು, ಥರ್ಮಲ್ ಸ್ಕ್ಯಾನರ್ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬಳಸಲು ಅಗತ್ಯ ಸುತ್ತೋಲೆ ಹೊರಡಿಸಬೇಕೆಂದು ಶಿಕ್ಷಣ ಇಲಾಖೆ ಆಯುಕ್ತರಿಗೆ ಸುರೇಶ್ ಕುಮಾರ್ ಸೂಚಿಸಿದರು.

ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, 55 ವರ್ಷ ಮೀರಿದ ಶಿಕ್ಷಕರು ಫೇಸ್ ಮಾಸ್ಕ್ ನೊಂದಿಗೆ ಫೇಸ್ ಶೀಲ್ಡ್ ಬಳಸುವುದು ಕ್ಷೇಮ. ಹಾಗೆಯೇ ಶಿಕ್ಷಕರು ಮಕ್ಕಳ ಹಿತದೃಷ್ಟಿಯಿಂದ ಶಾಲೆ ಆರಂಭವಾಗುವ 72 ಗಂಟೆಗಳ ಮೊದಲು ಆರ್‍ಟಿಪಿಸಿಆರ್ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ವರದಿಯೊಂದಿಗೆ ಬರಲು ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸುರೇಶ್ ಕುಮಾರ್ ಹೇಳಿದರು.

ಬೆಂಗಳೂರು ನಗರ ಸೇರಿದಂತೆ ಯಾವುದಾದರೂ ಜಿಲ್ಲೆಗಳಲ್ಲಿ ಶಾಲಾ ಶಿಕ್ಷಕರು ಕೋವಿಡ್ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದರೆ ತಕ್ಷಣವೇ ಅವರನ್ನು ಕೋವಿಡ್ ಕರ್ತವ್ಯದಿಂದ ಮುಕ್ತಗೊಳಿಸುವಂತೆ ಸಂಬಂಧಿಸಿದವರಿಗೆ ಪ್ರಸ್ತಾವನೆ ಸಲ್ಲಿಸಲು ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ ಅವರು, ದೂರದರ್ಶನ ಚಂದನಾ ವಾಹಿನಿಯಲ್ಲಿ ಪ್ರಸಾರವಾಗುವ ಸಂವೇದಾ ತರಗತಿಗಳು ತರಗತಿ ವೇಳೆ ಹೊರತು ಪಡಿಸಿ ಬಿತ್ತರವಾಗುವಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. 

ಪಿಯುಸಿ ಮತ್ತು 10ನೇ ತರಗತಿಗಳಿಗೆ ಅಗತ್ಯವಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರು/ಉಪನ್ಯಾಸಕರನ್ನು ನೇಮಿಸಿಕೊಳ್ಳಬಹುದಾಗಿದೆ. ಮುಂದೆ ಉಳಿದ ತರಗತಿಗಳು ಆರಂಭವಾದ ನಂತರ ಆ ತರಗತಿಳ ಬೋಧನೆಗೂ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬಹುದು. ಆಯಾ ಇಲಾಖೆಗಳು ವಿದ್ಯಾರ್ಥಿನಿಲಯಗಳು ಆರಂಭವಾಗಲಿದ್ದು, ಆ ಇಲಾಖೆಗಳು ನೀಡಿರುವ ನಿಯಮಗಳಂತೆ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಅವರು ವಿವರಿಸಿದರು.

ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲೆಗಳಿಗೆ ಹೊರ ರಾಜ್ಯದ ವಿದ್ಯಾರ್ಥಿಗಳು ಹಾಜರಾಗುತ್ತಿರುವುದರ ಹಿನ್ನೆಲೆಯಲ್ಲಿ ಶಾಲಾ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಸಂಬಂಧದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು(ಅಧ್ಯಕ್ಷರು) ಮತ್ತು ಜಿಪಂ ಸಿಇಒ(ಉಪಾಧ್ಯಕ್ಷರು) ನೇತೃತ್ವದ ಸಮಿತಿಗಳು ವಿದ್ಯಾರ್ಥಿಗಳ ಹಿತದೃಷ್ಟಿಯ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್, ಪಿಯು ನಿರ್ದೇಶಕಿ ಸ್ನೇಹಲ್, ಎಸ್.ಎಸ್.ಕೆ. ಎಸ್ಟಿಡಿ ದೀಪಾ ಚೋಳನ್ ಸೇರಿದಂತೆ ಶಿಕ್ಷಣ ಇಲಾಕೆಯ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದ ವೇಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X