ಅಂಬೇಡ್ಕರ್ ಜೀವನಾಧಾರಿತ ‘ಮಹಾನಾಯಕ’ ಧಾರಾವಾಹಿ ಫ್ಲೆಕ್ಸ್ ಗೆ ಕಿಡಿಗೇಡಿಗಳಿಂದ ಬೆಂಕಿ
ಮಂಡ್ಯ, ಡಿ.23: ಅಂಬೇಡ್ಕರ್ ಜೀವನ ಕುರಿತ ‘ಮಹಾನಾಯಕ’ ಟಿವಿ ಧಾರಾವಾಹಿಯ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಎಂ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಫ್ಲೆಕ್ಸ್ ಗೆ ಬೆಂಕಿಹಚ್ಚಿರುವ ದುಷ್ಕರ್ಮಿಗಳು, ಚೀಟಿಯೊಂದರಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಕೆಲವರ ಹೆಸರುಗಳನ್ನು ಬರೆದು ನಾಪತ್ತೆಯಾಗಿದ್ದಾರೆಂದು ವರದಿಯಾಗಿದೆ.
ಗ್ರಾಮದಲ್ಲಿ ಶಾಂತಿ ಕದಡುವ ಯತ್ನ ಇದಾಗಿದ್ದು, ಕೂಡಲೇ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮದ ದಲಿತ ಸಮುದಾಯದವರು ಒತ್ತಾಯಿಸಿದ್ದಾರೆ.
ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.
Next Story





