Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಶಾಲೆಗಳಿಗೆ ತಂತ್ರಜ್ಞಾನದ...

ಸರಕಾರಿ ಶಾಲೆಗಳಿಗೆ ತಂತ್ರಜ್ಞಾನದ ಸ್ಪರ್ಶ: ಎಸ್.ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Dec 2020 11:20 PM IST
share
ಸರಕಾರಿ ಶಾಲೆಗಳಿಗೆ ತಂತ್ರಜ್ಞಾನದ ಸ್ಪರ್ಶ: ಎಸ್.ಸುರೇಶ್ ಕುಮಾರ್

ಬೆಂಗಳೂರು, ಡಿ.23: ಭಾರತ್ ನೆಟ್ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಆಲೋಚಿಸಲಾಗುತ್ತಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಮುಂದಿನ ಒಂದು ವರ್ಷದೊಳಗೆ ಸಾಕಾರವಾಗುವ ನಿರೀಕ್ಷೆಯಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬುಧವಾರ ಆಂಗ್ಲ ದಿನ ಪತ್ರಿಕೆಯೊಂದರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರದ ಈ ಕ್ರಮವು ಮುಂದಿನ ದಿನಗಳಲ್ಲಿ ಸರಕಾರಿ ಶಾಲಾ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆಯನ್ನ ಕಲ್ಪಿಸಲಿದೆ. ಕೋವಿಡ್ ಸೃಷ್ಟಿಸಿರುವ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ತಂತ್ರಜ್ಞಾನಾಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಹೈಕೋರ್ಟ್ ಅಪೇಕ್ಷೆಯಂತೆ ಮಧ್ಯಾಹ್ನ ಉಪಾಹಾರ ಯೋಜನೆಯಡಿಯಲ್ಲಿ ಮಕ್ಕಳಿಗೆ ಬೇಳೆ ಕಾಳುಗಳನ್ನು ನೀಡುವ ಕಾರ್ಯಕ್ರಮ ಮುಂದುವರೆಯಲಿದ್ದು, ಕೋವಿಡ್ ಕಾರಣಕ್ಕೆ ಈ ಸಾಲಿನಲ್ಲಿ ಶಾಲಾವರಣದಲ್ಲಿ ಆಹಾರವನ್ನು ತಯಾರಿಸುವ ಕಾರ್ಯಕ್ರಮ ಇರುವುದಿಲ್ಲ. ವಿದ್ಯಾಗಮ ಕಾರ್ಯಕ್ರಮವನ್ನು ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಪುನರಾರಂಭಿಸಲಾಗುತ್ತದೆ. ಒಂದರಿಂದ 9ನೆ ತರಗತಿಗಳ ಮಕ್ಕಳಿಗೆ ಕನಿಷ್ಠ ಕಲಿಕೆಯ ಅವಶ್ಯಕತೆಗಳು, ಲಭ್ಯವಾಗುವ ಸಮಯಗಳನ್ನು ಗಮನದಲ್ಲಿಟ್ಟುಕೊಂಡು ಅವಶ್ಯಕ ಬೋಧನೆಯನ್ನು ಶಾಲಾ ಶಿಕ್ಷಕರು ತಮ್ಮ ಹಂತದಲ್ಲಿ ನಿರ್ಧರಿಸಿ ನಿರ್ವಹಿಸಬೇಕಾದ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಎಸೆಸೆಲ್ಸಿ ಪರೀಕ್ಷೆಯ ಕುರಿತಂತೆ ವೈಜ್ಞಾನಿಕ ಪಠ್ಯ ಸಂಯೋಜನೆಯ ಕ್ರಮಕ್ಕೆ ಆಲೋಚಿಸಲಾಗಿದೆ ಎಂದು ಅವರು ಹೇಳಿದರು.

ಈ ವರ್ಷ ಶಾಲಾರಂಭದ ಬಳಿಕ ಶಾಲೆಗೆ ಹಾಜರಾಗುವುದು ಅಥವಾ ಆನ್‍ಲೈನ್ /ಪರ್ಯಾಯ ಮಾದರಿಯ ಶಿಕ್ಷಣವನ್ನು ಪಡೆಯುವುದು ವಿದ್ಯಾರ್ಥಿ/ಪೋಷಕರಿಗೆ ಬಿಟ್ಟಿದ್ದು. ಮಾರ್ಗದರ್ಶಕ ಶಿಕ್ಷಕರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮ ಕಲಿಕೆಯನ್ನು ಮುಂದುವರಿಸಲಿದ್ದಾರೆ. ಪ್ರತಿ ಶಿಕ್ಷಕರೂ ಮುಂಚಿತವಾಗಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಂಡು ಶಾಲೆಗೆ ಹಾಜರಾಗಬೇಕು. ಕೋವಿಡ್ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಎಲ್ಲ ಶಿಕ್ಷಕರನ್ನು ಆ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಶಾಲಾ ಹಾಜರಾತಿ ಕಡ್ಡಾಯವಲ್ಲವಾದರೂ ಯಾವುದೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಇಚ್ಛಿಸಿದಲ್ಲಿ ಅಲ್ಲಿ ಸುರಕ್ಷಿತ ವಾತಾವರಣದ ಭರವಸೆ ಇಡಬಹುದೆಂದು ಹೇಳಿದರು.

ಖಾಸಗಿ ಶಾಲೆಗಳು ಪೋಷಕರ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು. ಅವರ ಹಂತದಲ್ಲಿ ಕಡ್ಡಾಯವಾಗಿ ಪೋಷಕರ ಸಭೆ ನಡೆಸಿ ಶುಲ್ಕ ಪ್ರಮಾಣವನ್ನು ನಿರ್ಧರಿಸುವ ಕ್ರಮಕ್ಕೆ ಮುಂದಾಗಬೇಕು. ತಾವು ಕಳೆದ ಬಾರಿ ಖಾಸಗಿ ಶಾಲಾ ಸಂಘಟನೆಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಈ ಕುರಿತಂತೆ ವಿಸ್ತ್ರತ ಚರ್ಚೆ ನಡೆಸಿ ತಿಳಿಸಲು ನಿರ್ದೇಶನ ನೀಡಿದ್ದು, ಖಚಿತವಾದ ವರದಿ ಸ್ವೀಕೃತವಾದ ಬಳಿಕ ಸರಕಾರ ಮುಂದಿನ ಕ್ರಮವನ್ನು ನಿರ್ಣಯಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X