ಶಾಸಕ ಯು.ಟಿ.ಖಾದರ್ ಕಾರು ಹಿಂಬಾಲಿಸಿದ್ದ ಪ್ರಕರಣ: ಓರ್ವ ಆರೋಪಿ ವಶಕ್ಕೆ

ಮಂಗಳೂರು: ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಶಾಸಕ ಯು.ಟಿ. ಖಾದರ್ ಅವರ ಕಾರನ್ನು ಹಿಂಬಾಲಿಸಿದ್ದ ಶಂಕೆಯಲ್ಲಿ ಓರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳೀಯ ಯುವಕನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಶಾಸಕರು ಬುಧವಾರ ಸಂಜೆ ಬೆಂಗಳೂರಿಗೆ ತೆರಳಲು ವಿಮಾನ ನಿಲ್ದಾಣದತ್ತ ತೆರಳುತ್ತಿದ್ದರು. ಈ ವೇಳೆ ಇಬ್ಬರು ಅಪರಿಚಿತರು ಹಿಂಬಾಲಿಸಿಕೊಂಡು ಹೋಗುತ್ತಿದ್ದರು. ಈ ಬಗ್ಗೆ ಓರ್ವನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಇದನ್ನು ಪೊಲೀಸರು ಅಧಿಕೃತವಾಗಿ ದೃಢಪಡಿಸಿಲ್ಲ.
Next Story





