Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಲ್ಲೇಶ್ವರದ ಸರಕಾರಿ ಪ್ರೌಢಶಾಲೆ...

ಮಲ್ಲೇಶ್ವರದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ

ವಾರ್ತಾಭಾರತಿವಾರ್ತಾಭಾರತಿ24 Dec 2020 3:25 PM IST
share
ಮಲ್ಲೇಶ್ವರದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ

ಬೆಂಗಳೂರು : ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ 8, 9 ಮತ್ತು 10ನೇ ತರತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ 1,000 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಗಳನ್ನು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಗುರುವಾರ ವಿತರಿಸಿದರು.

ಕೋವಿಡ್‌ ಕಾರಣದಿಂದ ಎಲ್ಲೆಡೆ ಡಿಜಿಟಲ್‌ ಕಲಿಕೆ ಅನಿವಾರ್ಯವಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಬೋಧನೆ ಮತ್ತು ಕಲಿಕೆಯಲ್ಲಿ ಸರಕಾರಿ ಶಾಲೆಗಳ ಮಕ್ಕಳು ಹಿಂದೆ ಬಿದ್ದಿದ್ದಾರೆಂಬ ಮಾತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಶಿಕ್ಷಣದಿಂದಲೇ ವಂಚಿತವಾಗುವ ಅಪಾಯವೂ ಎದುರಾಗಿತ್ತು. ಇದನ್ನು ಗಮನಿಸಿದ ಉಪ ಮುಖ್ಯಮಂತ್ರಿಗಳು, ಮಲ್ಲೇಶ್ವರ ಕ್ಷೇತ್ರದಲ್ಲಿರುವ ಏಳು  ಪ್ರೌಢಶಾಲೆಗಳೂ ಸೇರಿ ಒಟ್ಟು 21 ಸರಕಾರಿಗಳ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ತರಿಸಿಕೊಂಡು, ʼಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ʼ, ʼಆರ್‌.ವಿ.ಶಿಕ್ಷಣ ತರಬೇತಿ ಸಂಸ್ಥೆ ಮತ್ತು ಶಿಕ್ಷಣ ಫೌಂಡೇಷನ್‌ʼ ನೆರವಿನೊಂದಿಗೆ ಎಲ್ಲ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗಾಗಿ ಒಟ್ಟು 1,000 ಉತ್ಕೃಷ್ಟ ಗುಣಮಟ್ಟದ ಟ್ಯಾಬ್‌ಗಳನ್ನು ನೀಡಿದರು.

ಡಿಜಿಟಲ್‌ ಅಂತರ ನಿವಾರಣೆ

ಖಾಸಗಿ ಮತ್ತು ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳ ನಡುವೆ ಡಿಜಿಟಲ್‌ ಅಂತರವನ್ನು ಕಡಿಮೆ ಮಾಡುವುದು, ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಟ್ಯಾಬ್‌ಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈ ಮೂಲಕ ಡಿಜಿಟಲ್‌ ಮತ್ತು ಸ್ಮಾರ್ಟ್‌ ಕಲಿಕೆಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ನಮ್ಮ ಕ್ಷೇತ್ರದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಈ ನಿಟ್ಟಿನಲ್ಲಿ ಸಜ್ಜುಗೊಳಿಸಲಾಗುತ್ತಿದೆ ಎಂದ ಅವರು, ಈ ಟ್ಯಾಬ್‌ಗಳಿಂದ ಮಕ್ಕಳ ಕಲಿಕೆಯ ಗುಣಮಟ್ಟ ಸುಧಾರಣೆಯಾಗಲಿದೆ ಎಂದರು.

ಈ ಟ್ಯಾಬ್‌ಗಳ ಉಪಯೋಗವೇನು ?

ಉತ್ತಮ ಗುಣಮಟ್ಟದ ಈ ಟ್ಯಾಬ್‌ಗಳಲ್ಲಿ ರಾಜ್ಯಮಟ್ಟದ ಪಠ್ಯ ಇರಲಿದೆ. ಅದರಲ್ಲಿ ಫೊಟೋಗಳು, ವಿಡಿಯೋಗಳು ಸೇರಿದಂತೆ ಸಮಕಾಲೀನ ಸಂದರ್ಭದಲ್ಲಿ ಕಲಿಯಬೇಕಾದ ಎಲ್ಲ ರೀತಿಯ ಅಂಶಗಳನ್ನೂ ಮೊದಲೇ ಲೋಡ್‌ ಮಾಡಲಾಗಿರುತ್ತದೆ.

ಶಿಕ್ಷಣ ಪೌಂಡೇಶನ್ ಅವರ ಸಹಯೋಗದೊಂದಿಗೆ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಎಲ್ಲ ವಿಷಯಗಳನ್ನು ಟ್ಯಾಬ್‌ಗಳಲ್ಲಿ ತುಂಬಲಾಗಿದೆ. ಅದರಲ್ಲಿ ವೀಡಿಯೋಗಳು ಮತ್ತು ಚಟುವಟಿಕೆಗಳೂ ಸೇರಿವೆ.

ಆಫ್‌ಲೈನ್‌ನಲ್ಲಿ ಇದ್ದಾಗಲೂ ವಿದ್ಯಾರ್ಥಿಗಳು ಟ್ಯಾಬ್‌ಗಳ ಮೂಲಕ ಕಲಿಕೆಯನ್ನು ಮುಂದುವರಿಸಬಹುದು. ತಂತ್ರಜ್ಞಾನದ ಮೂಲಕ ಕಲಿಕೆ ಮತ್ತು ಗ್ರಹಿಕೆ ಪರಿಣಾಮಕಾರಿಯಾಗಿರುತ್ತದೆ. ಈ ಮೂಲಕ ಮಕ್ಕಳ ಕಲಿಕೆಯ ಆಸಕ್ತಿ ಇಮ್ಮಿಡಿಗೊಳ್ಳುತ್ತದೆ. ಸಂವಹನ, ಸಹಯೋಗ, ಸೃಜನಾತ್ಮಕತೆ ಹಾಗೂ ತಾರ್ಕಿಕ ಚಿಂತನೆಗಳತ್ತ ಮಕ್ಕಳು ಹೆಚ್ಚು ಪರಿಣಾಮಕಾರಿಯಾಗಿ ತೆರೆದುಕೊಳ್ಳುತ್ತಾರೆ.

ಮಕ್ಕಳು ಮನೆಯಲ್ಲಿದ್ದಾಗಲೂ ಕಲಿಯಬಹುದು. ಜತೆಗೆ ಆಯಾ ಮಕ್ಕಳನ್ನು ಶಿಕ್ಷಕರು ಪ್ರತ್ಯೇಕವಾಗಿ ಗಮನವಿಟ್ಟು ನೋಡಬಹುದು. ಅವರ ಕಲಿಕೆಯ ಗುಣಮಟ್ಟವನ್ನು ಪರಿಶೀಲನೆ ಮಾಡಬಹುದು. ನಿತ್ಯವೂ ತಂತ್ರಜ್ಞಾನದ ಮೂಲಕ ಕಲಿಕೆ ಸಾಗುವುದರಿಂದ ಮಕ್ಕಳಲ್ಲಿ ಹೊಸ ಕಲಿಕೆಯ ಅನ್ವೇಷಣೆಯತ್ತ ಆಸಕ್ತಿ ಉಂಟಾಗುತ್ತದೆ.

ಶಿಕ್ಷಕರಿಗೂ ತರಬೇತಿ

ಡಿಜಿಟಲ್‌ ಮತ್ತು ಸ್ಮಾರ್ಟ್‌ ಶಿಕ್ಷಣಕ್ಕೆ ಶಿಕ್ಷಕರೂ ಹೊಂದಿಕೊಳ್ಳುವಂತೆ ಮಾಡಲು ಶಿಕ್ಷಕರಿಗೂ ಸೂಕ್ತ ತರಬೇತಿ ನೀಡಲಾಗುತ್ತಿದೆ. ಮಕ್ಕಳಿಂದ ಹೋಮ್‌ ವರ್ಕ್‌ ಮಾಡಿಸುವುದು, ಟೆಸ್ಟ್‌, ಪರೀಕ್ಷೆ ನಡೆಸುವುದು, ಮಕ್ಕಳ ಓದು ಸೇರಿ ಎಲ್ಲ ಅಂಶಗಳನ್ನು ಸೂಕ್ತವಾದ ರೀತಿಯಲ್ಲಿ ಟ್ರ್ಯಾಕ್‌ ಮಾಡಲು ಅವರನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಹೇಳಿದರು.

ಆರ್‌ವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಉದ್ಘಾಟನಾ ಭಾಷಣ ಮಾಡಿ, ಈ ಟ್ಯಾಬ್‌ಗಳ ಮೂಲಕ ಮಕ್ಕಳ ಕಲಿಕೆ ಇನ್ನಷ್ಟು ಉತ್ತಮವಾಗಲಿ ಎಂದು ಹಾರೈಸಿದರು.

ರಾಜ್ಯ ಸರಕಾರದ ಸ್ಟಾರ್‌ಟಪ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಹಾಗೂ ಶಿಕ್ಷಣ ಫೌಂಡೇಶನ್‌ ಮುಖ್ಯಸ್ಥ ಪ್ರಶಾಂತ್‌ ಪ್ರಕಾಶ್‌, ಶಿಕ್ಷಣ ಫೌಂಡೇಶನ್‌ ಸಿಇಒ ಪ್ರಸನ್ನ, ಬೆಂಗಳೂರು ಉತ್ತರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಾರಾಯಣ್‌, ಬಿಇಒ ಉಮಾದೇವಿ, ಬಿಬಿಎಂಪಿ ಮಾಜಿ ಸದಸ್ಯ ಜಯಪಾಲ್‌ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X