ನಾಪತ್ತೆಯಾಗಿದ್ದ ಮಹಿಳೆ, ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ, ಡಿ.24: ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಮಲ್ಲಾಪುರದಲ್ಲಿ ನಡೆದಿದೆ.
ಮಂಜುಳಾ (35), ಮಕ್ಕಳಾದ ರಚನಾ (5), ಯಮುನಾ (7) ಮೃತಪಟ್ಟವರು. ಕಳೆದ 10 ದಿನದ ಹಿಂದೆ ತಾಯಿ ಮಕ್ಕಳು ನಾಪತ್ತೆಯಾಗಿದ್ದರು. ಈ ಬಗ್ಗೆ ಹೊಳೆಹೊನ್ನೂರು ಠಾಣೆಯಲ್ಲಿ ಡಿ.18 ರಂದು ಕುಟುಂಬಸ್ಥರು ದೂರು ನೀಡಿದ್ದರು.
ಗ್ರಾಮದ ಕೆರೆ ಬಳಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆರೆ ಸಮೀಪ ತೆರಳಿ ಗಮನಿಸಿದಾಗ ತಾಯಿ ಮಕ್ಕಳ ಶವ ಪತ್ತೆಯಾಗಿದೆ. ಈ ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
Next Story





