Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿನೋಟಿಫಿಕೇಷನ್ ಪ್ರಕರಣ: ಸಿಎಂ...

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ24 Dec 2020 6:34 PM IST
share
ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಡಿ.24: ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ಧತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ಗೊತ್ತಿದ್ದು ಮಾಡಿರುವ ಅಪರಾಧ (Cognizable offence) ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿ.22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.

ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್‍ಐಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡಾ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಯಡಿಯೂರಪ್ಪನವರ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಅವರಿಗೆ ರಾಜೀನಾಮೆ ನೀಡದ ಹೊರತು ಬೇರೆ ದಾರಿ ಇಲ್ಲದಂತಾಗಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಅವರು ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ ಎಂದು ಅವರು ದೂರಿದರು.

ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತನ್ನ ಆದೇಶದಲ್ಲಿ ತಿಳಿಸಿರುವುದು ಯಡಿಯೂರಪ್ಪ ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ. ಯಡಿಯೂರಪ್ಪ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

‘ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ ಅವರು, ಆರ್.ವಿ.ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X