Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ನಿ, ಮಕ್ಕಳಿಗೆ ಜೀವನಾಂಶ ಪಾವತಿಸದಿರಲು...

ಪತ್ನಿ, ಮಕ್ಕಳಿಗೆ ಜೀವನಾಂಶ ಪಾವತಿಸದಿರಲು ನಿರುದ್ಯೋಗ, ಕಡಿಮೆ ವರಮಾನ ಸಕಾರಣಗಳಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Dec 2020 7:25 PM IST
share
ಪತ್ನಿ, ಮಕ್ಕಳಿಗೆ ಜೀವನಾಂಶ ಪಾವತಿಸದಿರಲು ನಿರುದ್ಯೋಗ, ಕಡಿಮೆ ವರಮಾನ ಸಕಾರಣಗಳಲ್ಲ: ಹೈಕೋರ್ಟ್

ಬೆಂಗಳೂರು, ಡಿ.24: ಅಪ್ರಾಪ್ತ ಪುತ್ರ ಪ್ರೌಢಾವಸ್ಥೆಗೆ ಬರುವವರಿಗೆ ಪ್ರತಿ ತಿಂಗಳು 3,500 ರೂ. ಪಾವತಿಸುವಂತೆ ತಂದೆಗೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ಪಾವತಿಸದಿರಲು ನಿರುದ್ಯೋಗ, ಕಡಿಮೆ ವರಮಾನದ ಕಾರಣಗಳನ್ನು ಪತಿ ನೀಡುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಈ ಕುರಿತು ಸುನಿಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಿಆರ್‍ಪಿಸಿ ಸೆಕ್ಷನ್ 125ರ ಅಡಿ ಪತ್ನಿ ಮತ್ತು ಮಕ್ಕಳ ಜೀವನಾಂಶ ಪಾವತಿಸದಿರಲು ನಿರುದ್ಯೋಗ, ಕಡಿಮೆ ವರಮಾನದ ಕಾರಣಗಳನ್ನು ಪತಿ ನೀಡುವಂತಿಲ್ಲ ಎಂದು ಹೇಳಿದೆ.

ಅಪ್ರಾಪ್ತ ಮಗುವಿನ ಜೀವನ ನಿರ್ವಹಣೆಯು ತಂದೆಯ ವೈಯಕ್ತಿಕ ಜವಾಬ್ದಾರಿಯಾಗಿದೆ. ಹೀಗಾಗಿ, ಕೂಲಿ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಕುಟುಂಬ ನಿರ್ವಹಣೆಯಿಂದ ಅದರಲ್ಲೂ ಅಪ್ರಾಪ್ತ ಬಾಲಕನ ಜೀವನ ನಿರ್ವಹಣೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗದು ಎಂದು ನ್ಯಾಯಾಲಯ ಹೇಳಿದೆ.

ಪತಿ-ಪತ್ನಿಯು ವಿಚ್ಛೇದನ ಪಡೆದ ಬಳಿಕ ಇಬ್ಬರೂ ವಿಭಿನ್ನ ಬದುಕಿನ ದಾರಿ ಹಿಡಿದಿದ್ದು, ಅಪ್ರಾಪ್ತ ಮಗುವನ್ನು ನ್ಯಾಯಾಲಯ ತಾಯಿಯ ಮಡಿಲಿಗೆ ಹಾಕಿತ್ತು. ಸುಸ್ಥಿತಿಯಲ್ಲಿದ್ದರೂ ತಂದೆಯು ತನ್ನ ಜೀವನ ನಿರ್ವಹಣೆಗೆ ನ್ಯಾಯಾಲಯ ಆದೇಶಿಸಿದಷ್ಟು ಜೀವನಾಂಶ ಪಾವತಿಸುತ್ತಿಲ್ಲ ಎಂದು ಆರೋಪಿಸಿ ಅಪ್ರಾಪ್ತ ಬಾಲಕನು ತಾಯಿಯ ಮೂಲಕ ಸಿಆರ್‍ಪಿಸಿ ಸೆಕ್ಷನ್ 125ರ ಅಡಿ ಜೀವನಾಂಶ ಕೊಡಿಸುವಂತೆ ನ್ಯಾಯಾಲಯವನ್ನು ಕೋರಿ ಕೊಂಡಿದ್ದನು.

ಮಗುವಿನ ಆರೈಕೆ ಮಾಡುವುದರಿಂದ ಉದ್ದೇಶಪೂರ್ವಕವಾಗಿ ತಂದೆ ವಿಮುಖವಾಗುತ್ತಿದ್ದಾರೆ ಎಂಬುದನ್ನು ಪತ್ನಿಯು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇದನ್ನು ಆಧರಿಸಿ ನ್ಯಾಯಾಲಯವು ಜೀವನ ನಿರ್ವಹಣೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ವಜಾಗೊಳಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿದಾರರ ಪರ ವಾದಿಸಿದ್ದ ವಕೀಲರು, ತನ್ನ ಕಕ್ಷಿದಾರರು ಕೂಲಿ ಕೆಲಸ ಮಾಡುತ್ತಿದ್ದು, ಕಡಿಮೆ ಆದಾಯ ಗಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪಾಲಿಸಲು ಕಕ್ಷಿದಾರರು ಅರ್ಹವಾಗಿಲ್ಲ ಎಂದು ಪೀಠಕ್ಕೆ ತಿಳಿಸಿದ್ದರು. ಅರ್ಜಿದಾರರ ವಾದದಲ್ಲಿ ತಿರುಳಿಲ್ಲ ಎಂದು ಭಾವಿಸಿರುವ ನ್ಯಾಯಾಲಯವು ಹಿಂದೂ ಧರ್ಮಕ್ಕೆ ಸೇರಿದ ವ್ಯಕ್ತಿಯು ಆಸ್ತಿ ಹೊಂದಿದ್ದರೂ ಅಥವಾ ಹೊಂದಿಲ್ಲದಿದ್ದರೂ ತನ್ನ ಪತ್ನಿ, ಅಪ್ರಾಪ್ತ ಪುತ್ರರು ಮತ್ತು ಅವಿವಾಹಿತ ಪುತ್ರಿಯರು, ವಯಸ್ಸಾದ ಪೋಷಕರನ್ನು ನೋಡಿಕೊಳ್ಳುವುದು ಕಾನೂನಾತ್ಮಕ ಜವಾಬ್ದಾರಿಯಾಗಿದೆ ಎಂದಿದೆ.

ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ತಂದೆಯು ಜೀವನಾಂಶ ಪಾವತಿಸಿದ್ದರೆ ಬಾಲಕ ಅದನ್ನು ತನ್ನ ಶಿಕ್ಷಣಕ್ಕೆ ಬಳಸಿಕೊಳ್ಳುತ್ತಿದ್ದ. ಈ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನ ಅಲಂಕರಿಸುತ್ತಿದ್ದ ಎಂದು ನ್ಯಾಯಾಲಯ ಹೇಳಿದೆ. ಮೇಲಿನ ಕಾರಣಗಳ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯದ ಜೀವನ ನಿರ್ವಹಣೆ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ನ್ಯಾಯಾಲಯವು ಮನವಿಯನ್ನು ವಜಾಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X