Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.25ರಂದು ವಾಜಪೇಯಿ ಜನ್ಮದಿನದ ನಿಮಿತ್ತ...

ಡಿ.25ರಂದು ವಾಜಪೇಯಿ ಜನ್ಮದಿನದ ನಿಮಿತ್ತ ಸುಶಾಸನ ದಿನಾಚರಣೆ: ಪ್ರಧಾನಿ ಮೋದಿ ಭಾಷಣ

ವಾರ್ತಾಭಾರತಿವಾರ್ತಾಭಾರತಿ24 Dec 2020 10:35 PM IST
share
ಡಿ.25ರಂದು ವಾಜಪೇಯಿ ಜನ್ಮದಿನದ ನಿಮಿತ್ತ ಸುಶಾಸನ ದಿನಾಚರಣೆ: ಪ್ರಧಾನಿ ಮೋದಿ ಭಾಷಣ

ಬೆಂಗಳೂರು, ಡಿ.24: ಅತ್ಯುತ್ತಮ ಆಡಳಿತದಿಂದ ಅಚ್ಚಳಿಯದ ಛಾಪು ಮೂಡಿಸಿದ್ದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ(ಡಿ.25)ವನ್ನು ಗುಡ್ ಗವರ್ನೆನ್ಸ್ ಡೇ(ಸುಶಾಸನ ದಿನ)ಯನ್ನಾಗಿ ಆಚರಿಸಲಾಗುತ್ತಿದ್ದು, ಶುಕ್ರವಾರ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಅಟಲ್ ಜೀ ಅವರ ಗೌರವಾರ್ಥ ಸುಶಾಸನ ದಿನವನ್ನು ಆಯೋಜಿಸಲಾಗಿದ್ದು, ಆಡಳಿತದಲ್ಲಿ ವಾಜಪೇಯಿ ಅವರ ಕನಸುಗಳನ್ನು ಸಾಕಾರ ಮಾಡಲು ಈ ಮೂಲಕ ಹೆಜ್ಜೆ ಇರಿಸಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಸೇರಿದಂತೆ ಇತರ ಪ್ರಮುಖರು ಇದರಲ್ಲಿ ಭಾಗಿಯಾಗುತ್ತಾರೆ. ಇದೇ ವೇಳೆ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗೆ ಸಂಬಂಧಿಸಿದ ಪ್ರಾತ್ಯಾಕ್ಷಿಕೆಯನ್ನು ಪ್ರದರ್ಶಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಲಿದ್ದಾರೆ. ಬಳಿಕ ಚರ್ಚಾಗೋಷ್ಠಿಗಳು ನಡೆಯಲಿವೆ. 11.30ರಿಂದ ಉನ್ನತ ಶಿಕ್ಷಣ-ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ- ಜೈವಿಕ ತಂತ್ರಜ್ಞಾನ, ವಿಜ್ಞಾನ-ತಂತ್ರಜ್ಞಾನ, ನವೋದ್ಯಮಗಳು, ಬಿಯಾಂಡ್ ಬೆಂಗಳೂರು ವಿಷಯದ ಬಗ್ಗೆ ಚರ್ಚೆ, ಉನ್ನತ ಶಿಕ್ಷಣದಲ್ಲಿ ಆಡಳಿತ ಮತ್ತು ನಾಯಕತ್ವದ ಗುಣ, ಕೈಗಾರಿಕೆಗೆ ಪೂರಕವಾದ ಕುಶಲತೆಯುಳ್ಳ ಶಿಕ್ಷಣ ಸೇರಿದಂತೆ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಮುಖ್ಯವಾಗಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‍ಎಂಎಸ್), ಏಕೀಕೃತ ವಿಶ್ವವಿದ್ಯಾಲಯ ನಿರ್ವಹಣಾ ವ್ಯವಸ್ಥೆ, ಆನ್‍ಲೈನ್ ಅಪ್ಲಿಯೇಷನ್, ಡಿಪ್ಲೋಮೊ ಪಠ್ಯ ಪರಿಷ್ಕರಣೆ, ರಾಷ್ಟ್ರೀಯ ಶಿಕ್ಷಣ ನೀತಿ ಮುಂತಾದ ವಿಷಯಗಳ ಬಗ್ಗೆ ಪ್ರಾತ್ಯಾಕ್ಷಿಕೆ ಇರಲಿದೆ. ಇಡೀ ಕಾರ್ಯಕ್ರಮವು ಆನ್‍ಲೈನ್ ಮೂಲಕ ನೇರ ಪ್ರಸಾರವಾಗಲಿದೆ ಎಂದು ಅಶ್ವತ್ಥ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X