ಅಂತರ್ ರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿ ಮೂವರ ಬಂಧನ: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು, ಡಿ.24: ಅಂತರ್‍ರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 5 ಲಕ್ಷ ರೂ. ಮೌಲ್ಯದ 100 ಗ್ರಾಂ ಎಂಡಿಎಂಎ, ಕಾರು, ಬೈಕ್, 5 ಸಾವಿರ ರೂ. ನಗದು ಜಪ್ತಿ ಮಾಡಿದ್ದಾರೆ.
ನೈಜೀರಿಯಾ ಮೂಲದ ಉದೆಲುದೇಯುಜಾ(33), ಕೇರಳ ಮೂಲದ ಪ್ರಸೂನ್(27), ಆನಂದ್ ಚಂದನ್(27) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
ಯಲಹಂಕದ ರಾಮಕೃಷ್ಣಪ್ಪ ಬಹುಮಹಡಿ ಕಟ್ಟಡ ಮುಂಭಾಗ 5ನೆ ಕ್ರಾಸ್‍ನಲ್ಲಿ ವಾಹನವೊಂದರಲ್ಲಿ ಮಾದಕ ಮತ್ತು ಎಂಡಿಎಂಎ ಇಟ್ಟುಕೊಂಡು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆ ಮುಂದುವರಿಸಲಾಗಿದೆ.
Next Story





