Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಕ್ರಿಸ್ಮಸ್ ಜಾಗರಣೆಯ ರಾತ್ರಿ...

ಮಂಗಳೂರು : ಕ್ರಿಸ್ಮಸ್ ಜಾಗರಣೆಯ ರಾತ್ರಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ24 Dec 2020 11:00 PM IST
share
ಮಂಗಳೂರು : ಕ್ರಿಸ್ಮಸ್ ಜಾಗರಣೆಯ ರಾತ್ರಿ ಆಚರಣೆ

ಮಂಗಳೂರು, ಡಿ. 24: ಏಸು ಕ್ರಿಸ್ತರ ಜನ್ಮದಿನದ ಮುನ್ನಾ ದಿನವಾದ ಗುರುವಾರ ಕ್ರೈಸ್ತರು ಕ್ರಿಸ್ಮಸ್ ಜಾಗರಣೆಯ ರಾತ್ರಿಯನ್ನು ಆಚರಿಸಿದರು. ಶುಕ್ರವಾರ ಬೆಳಗ್ಗೆ ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಬಲಿ ಪೂಜೆಗಳು ನೆರವೇರಲಿದ್ದು, ಆ ಪ್ರಯುಕ್ತ ಕ್ರೈಸ್ತ ದೇವಾಲಯಗಳಲ್ಲಿ, ಪ್ರಾರ್ಥನಾ ಮಂದಿರಗಳಲ್ಲಿ ಮತ್ತು ಕ್ರೈಸ್ತರ ಮನೆಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.

ಕರಾವಳಿಯ ಬಹುತೇಕ ಎಲ್ಲಾ ಚರ್ಚ್‌ಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಚರ್ಚ್ ಆವರಣದಲ್ಲಿ ಮತ್ತು ಕ್ರೈಸ್ತರ ಮನೆ ಆವರಣದಲ್ಲಿ ಆಕರ್ಷಕ ಕ್ರಿಬ್‌ಗಳನ್ನು ನಿರ್ಮಿಸಲಾಗಿತ್ತು. ನಕ್ಷತ್ರಗಳನ್ನು ಜೋಡಿಸಲಾಗಿತ್ತು. ಚರ್ಚ್‌ಗಳಲ್ಲಿ ಗುರುವಾರ ರಾತ್ರಿ ವೇಳೆ ಜರಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ರಿಸ್ಮಸ್ ಕ್ಯಾರೊಲ್‌ಗಳನ್ನು ಹಾಡಿ ಏಸು ಕ್ರಿಸ್ತರ ಜನನವನ್ನು ಸ್ಮರಿಸಿ ಕಂದ ಏಸುವಿಗೆ ನಮಿಸಿದರು.

ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಗುರುವಾರ ರಾತ್ರಿ ಬಿಷಪ್ ರೆಡಾ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಹಬ್ಬದ ಬಲಿಪೂಜೆ ನಡೆಯಿತು. ಕೆಥೆಡ್ರಲ್‌ನ ರೆಕ್ಟರ್ ವಂ. ಆಲ್ಪ್ರೆಡ್ ಜೆ.ಪಿಂಟೋ, ಸಹಾಯಕ ಗುರು ವಂ. ವಿನೋದ್ ಲೋಬೋ, ರೊಸಾರಿಯೊ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ವಿಕ್ಟರ್ ಡಿಸೋಜ ಭಾಗವಹಿಸಿದ್ದರು.

ಕೊರೋನ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲೆಡೆ ಸರಳವಾಗಿ ಹಬ್ಬದ ಆಚರಣೆ ಆಯೋಜಿಸಲಾಗಿದೆ. ಈ ಬಾರಿ ಸಾಂತಾಕ್ಲಾಸ್ ಸಂಭ್ರಮವೂ ಇರುವುದಿಲ್ಲ. ಹಬ್ಬದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು, ಸರಳ ಮಾದರಿಯಲ್ಲಿ ಶುಭಾಶಯ ಸಲ್ಲಿಸುವ ಪ್ರಕ್ರಿಯೆಗೆ ಆದ್ಯತೆ ನೀಡಲಾಗಿದೆ. ಶುಕ್ರವಾರ ಕ್ರಿಸ್ಮಸ್ ಹಬ್ಬದ ಆಚರಣೆ ನಡೆಯಲಿದೆ.

ಚರ್ಚ್‌ಗಳಲ್ಲಿ ಹಬ್ಬದ ಬಲಿ ಪೂಜೆ, ಶುಭಾಶಯಗಳ ವಿನಿಮಯ ನಡೆಯಲಿದೆ. ಮನೆಗಳಲ್ಲಿ ಕ್ರಿಸ್ಮಸ್ ವಿಶೇಷ ತಿಂಡಿ ತಿನಿಸು ‘ಕುಸ್ವಾರ್’ ವಿನಿಮಯ ಮತ್ತು ಹಬ್ಬದ ಭೋಜನದೊಂದಿಗೆ ಹಬ್ಬದ ಸಂಭ್ರಮ ನೆರವೇರಲಿದೆ. ಮಂಗಳೂರು ಧರ್ಮಪ್ರಾಂತದ  ಬಿಷಪ್ ಅತಿ ವಂಡಾಪೀಟರ್ ಪಾವ್ಲ್ ಸಲ್ಡಾನ್ಹಾ ಮಾತನಾಡಿ, ಚಿಂದಿ ಬಟ್ಟೆಯಲ್ಲಿ ಸುತ್ತಿದ್ದ ಹಾಗೂ ಗೋದಲಿಯಲ್ಲಿ ಮಲಗಿದ್ದ ಬಾಲಯೇಸು ಆಹಾರವಿಲ್ಲದ ಹಸಿದ ಹೊಟ್ಟೆಯಲ್ಲಿ ನಿದ್ದೆಗೆ ಜಾರುವ ಬಡವರ ಕಷ್ಟಗಳನ್ನು ಅನುಭವಿಸಿದವರು. ವಸತಿ ಇಲ್ಲದೆ ಬೀದಿ ಬದಿಗಳಲ್ಲಿ ಮಲಗುವ ನಿರಾಶ್ರಿತರ ಆತಂಕಗಳನ್ನು ಅರಿತವರು.

ಉದ್ಯೋಗ ಕಳೆದುಕೊಂಡು ತಮ್ಮ ಕುಟುಂಬಗಳನ್ನು ಸಾಕಲು ಕಷ್ಟಪಡುತ್ತಿರುವ ನಿರುದ್ಯೋಗಿಗಳ ಬವಣೆ ಅರಿತವರು. ಕೊರೋನ ಮತ್ತು ಇತರ ರೋಗಗಳಿಂದ ಸೋಂಕಿತರಾಗಿ ಔಷಧಕ್ಕಾಗಿ ಹಣ ಇಲ್ಲದವರ ಪಾಡನ್ನು ತಿಳಿದವರು. ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಲು ಕಷ್ಟಪಡುತ್ತಿರುವ ಹೆತ್ತವರ ದುಃಖವನ್ನು ಅರಿತವರಾಗಿದ್ದು, ಇಂತಹ ಸಮಾಜದಲ್ಲಿರುವ ಅಶಕ್ತರೊಡನೆ ನಾವು ಬೆರೆತು ಕ್ರಿಸ್ಮಸ್ ಆಚರಿಸೋಣ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X