Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ವಿರುದ್ಧ ಬಾಕ್ಸಿಂಗ್ ಡೇ...

ಆಸ್ಟ್ರೇಲಿಯ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್: 11ರ ಬಳಗದಲ್ಲಿ ರಾಹುಲ್‌ಗೆ ಸ್ಥಾನವಿಲ್ಲ

ವಾರ್ತಾಭಾರತಿವಾರ್ತಾಭಾರತಿ25 Dec 2020 12:55 PM IST
share
ಆಸ್ಟ್ರೇಲಿಯ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್: 11ರ ಬಳಗದಲ್ಲಿ ರಾಹುಲ್‌ಗೆ ಸ್ಥಾನವಿಲ್ಲ

ಹೊಸದಿಲ್ಲಿ: ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ಗೆ ಮುನ್ನಾದಿನ ಟೀಮ್ ಇಂಡಿಯಾ ಆಡುವ 11ರ ಬಳಗವನ್ನು ಪ್ರಕಟಿಸಿದೆ. ಮುಂಬೈ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಆಡುವ ಬಳಗವನ್ನು ಸೇರಿದರೆ, ಕನ್ನಡಿಗ ಕೆಎಲ್ ರಾಹುಲ್‌ರನ್ನು ಹೊರಗಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ.

 ಕಳಪೆ ಫಾರ್ಮ್‌ನಲ್ಲಿರುವ ಪೃಥ್ವಿ ಶಾ ಸ್ಥಾನವನ್ನು ತುಂಬಲಿರುವ 21ರ ಹರೆಯದ ಗಿಲ್ ಚೊಚ್ಚಲ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ. ಶಾ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ 0 ಹಾಗೂ 4 ರನ್ ಗಳಿಸಿದ್ದಾರೆ. ಗಿಲ್ 2018ರ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಪೃಥ್ವಿ ಶಾ ನಾಯಕತ್ವದಡಿ ಆಡಿದ್ದು ಭಾರತವು ಆಗ ವಿಶ್ವಕಪನ್ನು ಗೆದ್ದುಕೊಂಡಿತ್ತು.

ವೇಗದ ಬೌಲರ್ ಮುಹಮ್ಮದ್ ಸಿರಾಜ್ ಕೂಡ ಟೆಸ್ಟ್ ಕ್ರಿಕೆಟಿಗೆ ಕಾಲಿಡಲಿದ್ದಾರೆ. ಪ್ರತಿಸ್ಪರ್ಧಿ ನವದೀಪ್ ಸೈನಿ ಅವರನ್ನು ಹಿಂದಿಕ್ಕಿ ಗಾಯಗೊಂಡಿರುವ ಮುಹಮ್ಮದ್ ಶಮಿ ಅವರಿಂದ ತೆರವಾಗಿರುವ ಸ್ಥಾನವನ್ನು ತುಂಬಲು ಸಿರಾಜ್ ಸಜ್ಜಾಗಿದ್ದಾರೆ. ಶಮಿ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಚೆಂಡು ಮಣಿಕಟ್ಟಿಗೆ ತಗಲಿ ಗಾಯವಾಗಿತ್ತು.

ಟ್ವೆಂಟಿ-20 ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಸ್ಥಾನ ಪಡೆಯದ ಆಲ್‌ರೌಂಡರ್ ರವೀಂದ್ರ ಜಡೇಜ ಆಡುವ 11ರ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ.

ಬ್ಯಾಟಿಂಗ್ ಸರದಿಯನ್ನು ಬಲಿಷ್ಠಗೊಳಿಸಲು ಮುಂದಾಗಿರುವ ಆಯ್ಕೆಗಾರರು ವಿಕೆಟ್‌ಕೀಪರ್ ವೃದ್ದಿಮಾನ್ ಸಹಾ ಬದಲಿಗೆ ರಿಷಭ್ ಪಂತ್‌ರನ್ನು ಆಯ್ಕೆ ಮಾಡಿದ್ದಾರೆ. ಸಹಾ ಅಡಿಲೇಡ್ ಟೆಸ್ಟ್‌ನಲ್ಲಿ ರನ್ ಗಳಿಸಲು ಪರದಾಡಿದ್ದರು.

ದ್ವಿತೀಯ ಟೆಸ್ಟ್‌ಗೆ ಭಾರತದ 11ರ ಬಳಗ:

 ಅಜಿಂಕ್ಯ ರಹಾನೆ(ನಾಯಕ), ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್,ಚೇತೇಶ್ವರ ಪೂಜಾರ, ಹನುಮವಿಹಾರಿ, ರಿಷಭ್ ಪಂತ್(ವಿಕೆಟ್‌ಕೀಪರ್), ರವೀಂದ್ರ ಜಡೇಜ, ಆರ್.ಅಶ್ವಿನ್, ಉಮೇಶ್ ಯಾದವ್,ಜಸ್‌ಪ್ರೀತ್ ಬುಮ್ರಾ, ಮುಹಮ್ಮದ್ ಸಿರಾಜ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X