Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾತ್ರಿ ಕರ್ಫ್ಯೂ ನಿರ್ಧಾರ ಸುಧಾಕರ್...

ರಾತ್ರಿ ಕರ್ಫ್ಯೂ ನಿರ್ಧಾರ ಸುಧಾಕರ್ ರದ್ದು, ಅವರಿಗೇನಾದರೂ ಪರಿಜ್ಞಾನ ಇದೆಯೇ?: ಡಿಕೆಶಿ ತರಾಟೆ

ವಾರ್ತಾಭಾರತಿವಾರ್ತಾಭಾರತಿ25 Dec 2020 2:28 PM IST
share
ರಾತ್ರಿ ಕರ್ಫ್ಯೂ ನಿರ್ಧಾರ ಸುಧಾಕರ್ ರದ್ದು, ಅವರಿಗೇನಾದರೂ ಪರಿಜ್ಞಾನ ಇದೆಯೇ?: ಡಿಕೆಶಿ ತರಾಟೆ

ಬೆಂಗಳೂರು, ಡಿ.25: 'ರಾತ್ರಿ ಕರ್ಫ್ಯೂ ವಿಚಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರದ್ದಲ್ಲ. ಬದಲಿಗೆ ಸಚಿವ ಡಾ.ಸುಧಾಕರ್ ಅವರದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಶುಕ್ರವಾರ ಸದಾಶಿವ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ಇಡೀ ಪ್ರಪಂಚ ನಮ್ಮ ರಾಜ್ಯ ಹಾಗೂ ಈ ನಗರವನ್ನು ಗಮನಿಸುತ್ತಿದೆ. ಹಗಲಲ್ಲಿ ಸೋಂಕು ಬರಲ್ಲ, ರಾತ್ರಿ ವೇಳೆ ಮಾತ್ರ ಸೋಂಕು ಬರುತ್ತದೆಯೇ? ಪರಿಜ್ಞಾನ ಇರುವವರು ಯಾರೂ ಇಂತಹ ನಿರ್ಧಾರಕ್ಕೆ ಬರುವುದಿಲ್ಲ. ರಾತ್ರಿ 11 ಗಂಟೆ ಮೇಲೆ ಯಾರು ಓಡಾಡುತ್ತಾರೆ? ಎಂದು ಪ್ರಶ್ನಿಸಿದರು.

ಇಡೀ ವರ್ಷ ಜನ ನರಳಿದ್ದಾರೆ. ಇವರು ಯಾರ ಅಭಿಪ್ರಾಯವನ್ನೂ ಪಡೆಯದೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ಯಾಕೆ? ಇವರಿಗೆ ಯಾರಾದರೂ ತಜ್ಞರು ರಾತ್ರಿ ವೇಳೆ ಕರ್ಫ್ಯೂ ಮಾಡಿದರೆ ಸೋಂಕು ಬರುವುದಿಲ್ಲ ಎಂದು ಸಲಹೆ ನೀಡಿದ್ದಾರಾ? ಆ  ರೀತಿ ಯಾರಾದರೂ ಕೊಟ್ಟಿದ್ದರೆ ಅವರ ಫೋಟೋ ಇದ್ದರೆ ಕೊಡಿ. ಅವರದು, ಻ವರ ಫೋಟೋನ ಮನೆಯಲ್ಲಿ ಇಟ್ಟುಕೊಳ್ಳುತ್ತೇವೆ ಎಂದು ವ್ಯಂಗ್ಯವಾಡಿದರು,

ಇದು ಸಾಮಾನ್ಯ ಜ್ಞಾನದ ವಿಚಾರ. ಇದರಲ್ಲಿ ಯಾವುದೇ ವಿಜ್ಞಾನ ಅಡಗಿಲ್ಲ. ರಸ್ತೆ, ಮಾರುಕಟ್ಟೆ ಸೇರಿದಂತೆ ಹಗಲೆಲ್ಲಾ ಜನ ಸಾವಿರಾರು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಎಲ್ಲೆಲ್ಲಿ ಯಾವ ರೀತಿ ನಿಯಂತ್ರಣ ಮಾಡಬೇಕೋ ಆ ರೀತಿ ಕ್ರಮ ಕೈಗೊಳ್ಳಬೇಕು. ಸರ್ಕಾರ ಜನರಿಗೆ ಔಷಧಿ ಒದಗಿಸಬೇಕು. ಅವರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕು. ನೊಂದವರಿಗೆ, ನಷ್ಟ ಅನುಭವಿಸಿರುವವರಿಗೆ ಪರಿಹಾರ ನೀಡಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವವರಿಗೆ ತೆರಿಗೆ ವಿನಾಯಿತಿ ಏನಾದರೂ ಕೊಟ್ಟಿದ್ದಾರಾ? ಉದ್ಯೋಗ ಭತ್ಯೆ ನೀಡಿದ್ದಾರಾ? ಬ್ಯಾಂಕ್ ಗಳಿಗೆ ಸೂಚನೆ ನೀಡಿ ಸಾಲ ಮನ್ನಾ ಮಾಡದಿದ್ದರೂ ಬಡ್ಡಿ ಮನ್ನಾ ಮಾಡಿದ್ದಾರಾ? ಅರ್ಧಕ್ಕರ್ಧ ರೆಸ್ಟೋರೆಂಟ್ ಗಳು ಬಾಗಿಲು ತೆರೆಯಲು ಆಗಿಲ್ಲ.

ತಮಗೆ ಪ್ರಚಾರ ಸಿಗುತ್ತದೆ ಅಂತಾ ಅವರಿಗೆ ಇಷ್ಟಬಂದ ಹಾಗೆ ತೀರ್ಮಾನ ಮಾಡಿದರೆ ಕೇಳಲು ಸಾಧ್ಯವೇ?

ಈ ಸರಕಾರ ಬಂದ ಮೇಲೆ ಎಷ್ಟು ನಿರ್ಧಾರಗಳಲ್ಲಿ ಯೂ ಟರ್ನ್ ಹೊಡೆದಿದೆ ಎಂದು ಲೆಕ್ಕ ಹಾಕಿ.  ಸರ್ಕಾರ ಯುವಕರ ಭಾವನೆ ಮತ್ತು ಆಕ್ರೋಶಕ್ಕೆ ಸ್ಪಂದಿಸಿದೆ. ನಾವು ಕೂಡ ಅವರ ಭಾವನೆಗೆ ಸ್ಪಂದಿಸಿದ್ದು, ಅದು ನಮ್ಮ ಕರ್ತವ್ಯ.

ನಮ್ಮ ಯುವಕರಿಗೆ ಈ ಸಚಿವರಿಗಿಂತ ಉತ್ತಮ ಪರಿಜ್ಞಾನ ಇದೆ. ಈ ರಾಜ್ಯದ ಜನರಿಂದ ನಮ್ಮ ರಾಜ್ಯಕ್ಕೆ ಹೆಸರು ಬಂದಿದೆಯೇ ಹೊರತು ಇವರಿಂದ ಅಲ್ಲ.  ಯಡಿಯೂರಪ್ಪನವರು ಬೇಲ್ ಮೇಲೆ ಬಂದಿದ್ದನ್ನು ನೋಡಿದ್ದೇವೆ, ದೊಡ್ಡ ನಾಯಕರು ಬಂದಿದ್ದನ್ನು ನೋಡಿದ್ದೇವೆ. ಇದಕ್ಕೆಲ್ಲ ಕಾಲ ಉತ್ತರ ಕೊಡುತ್ತದೆ. ರಾಜ್ಯದಿಂದ ಈ  ಮಾಹಾಮಾರಿ ತೊಲಗಿ, ಜನರಿಗೆ ನೆಮ್ಮದಿ ಶಾಂತಿ ಸಿಗಲಿ ಎಂದು ನಾನು ವೈಕುಂಠ ಏಕಾದಶಿ ದಿನ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಕೆಶಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X