ಉಡುಪಿ: 13 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಡಿ.25: ಜಿಲ್ಲೆಯಲ್ಲಿ ಶುಕ್ರವಾರ 13 ಮಂದಿಯಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ. 14 ಮಂದಿ ಚಿಕಿತ್ಸೆಯಿಂದ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡರೆ, ಜಿಲ್ಲೆಯಲ್ಲಿ ಕೋವಿಡ್ಗೆ ಸಕ್ರಿಯರಾ ಗಿರುವವರ ಸಂಖ್ಯೆ 73ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರು ಹಾಗೂ 9 ಮಂದಿ ಮಹಿಳೆಯರು ಸೇರಿದ್ದಾರೆ. ಇವರಲ್ಲಿ ನಾಲ್ವರು ಪುರುಷರು ಹಾಗೂ ಎಂಟು ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ. ಇಂದು ಸೋಂಕು ಪತ್ತೆಯಾದವರಲ್ಲಿ 10ಮಂದಿ ಉಡುಪಿ ತಾಲೂಕಿನವರಾದರೆ ಮೂವರು ಕುಂದಾಪುರ ತಾಲೂಕಿನವರು ಎಂದು ಡಾ.ಸೂಡ ತಿಳಿಸಿದರು.
14 ಮಂದಿ ಗುಣಮುಖ: ಗುರುವಾರ ಜಿಲ್ಲೆಯಲ್ಲಿ 14 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,742ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 73 ಮಂದಿ ಕೋವಿಡ್ಗೆ ಸಕ್ರಿಯರಿದ್ದಾರೆ ಎಂದರು.
1089 ನೆಗೆಟಿವ್: ಗುರುವಾರ ಒಟ್ಟು 1102 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1089 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದ 13 ಮಂದಿಯಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,990 ಆಗಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 2,78,222 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,55,219 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,003 ಮಂದಿ ಪಾಸಿಟಿವ್ ಬಂದಿದ್ದರೆ, 22,742 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.
ಇಂದು ಸಹ ಕೋವಿಡ್ನಿಂದ ಯಾರೂ ಮೃತಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 188 ಮಾತ್ರ ಎಂದು ಇಲಾಖೆ ತಿಳಿಸಿದೆ.