Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ನೈಟ್ ಕರ್ಫ್ಯೂ' ನಿರ್ಧಾರ...

'ನೈಟ್ ಕರ್ಫ್ಯೂ' ನಿರ್ಧಾರ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು: ಆರೋಗ್ಯ ಸಚಿವ ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ25 Dec 2020 8:02 PM IST
share
ನೈಟ್ ಕರ್ಫ್ಯೂ ನಿರ್ಧಾರ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು: ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು, ಡಿ. 25: ರಾತ್ರಿ (ನೈಟ್) ಕರ್ಫ್ಯೂ ಹೇರುವ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದೇನೂ ರಾಜಕೀಯ ನಿರ್ಧಾರ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರಕಾರ ಎನ್ನಲಾಗಿದೆ. ಆದರೆ, ಇದೇ ನಮ್ಮ ಸರಕಾರ ಉತ್ತಮವಾದ ನಿರ್ಧಾರಗಳಿಂದ ಕೊರೋನ ಸೋಂಕು ನಿಯಂತ್ರಣಕ್ಕೆ ತಂದಿದೆ. ರಾಜ್ಯ ಸರಕಾರದ ಕ್ರಮಗಳಿಂದಾಗಿ ಕೊರೋನ ಸೋಂಕಿಗೊಳಗಾದವರಲ್ಲಿ ಶೇ.97.5ರಷ್ಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇ.1.22ಕ್ಕೆ ಇಳಿಕೆಯಾಗಿದೆ ಎಂದರು.

ಯು.ಕೆ.ಯಲ್ಲಿ ಲಾಕ್‍ಡೌನ್ ಆಗಿದೆ ಹಾಗೂ ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಹಾಗೆಂದು ಅಲ್ಲಿ ಇರುವವರಿಗೆ ಬುದ್ಧಿ ಇಲ್ಲ ಎಂದರ್ಥವಲ್ಲ. ನಮ್ಮ ಸರಕಾರ ಯಾವುದೇ ರಾಜಕೀಯ ತೀರ್ಮಾನ ಕೈಗೊಂಡಿಲ್ಲ. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದವರ ಜೊತೆ ಕೂಲಂಕಷವಾಗಿ ಚರ್ಚಿಸಿ ಪ್ರತಿಯೊಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಕುರಿತು ಹಲವಾರು ಬಾರಿ ಚರ್ಚಿಸಿ, ಜನರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.

ಆರ್ಥಿಕ ಚಟುವಟಿಕೆ ಬಂದ್ ಮಾಡಿದರೆ ಸರಕಾರಕ್ಕೆ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯಕ್ಕಾಗಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ. ಅನೇಕರು ಕೊರೋನ ಬಗ್ಗೆ ಮುನ್ನೆಚ್ಚರಿಕೆ ಮರೆತಿದ್ದಾರೆ. ಇಂತಹ ಸಮಯದಲ್ಲಿ ಜನರನ್ನು ಎಚ್ಚರಿಸುವುದು ನಮ್ಮ ಕರ್ತವ್ಯ ಎಂದು ಅವರು ತಿಳಿಸಿದರು.

ಯುನೈಟೆಡ್ ಕಿಂಗ್ ಡಮ್‍ನಿಂದ ರಾಜ್ಯಕ್ಕೆ ಬಂದವರಲ್ಲಿ 10 ಜನರಿಗೆ ಕೊರೋನ ಪಾಟಿಸಿವ್ ಆಗಿದೆ ಎಂದು ತಿಳಿದುಬಂದಿದ್ದು, ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳುಹಿಸಲಾಗಿದೆ ಎಂದ ಡಾ.ಕೆ.ಸುಧಾಕರ್, ಜೆನೆಟಿಕ್ ಸ್ವೀಕೆನ್ಸ್ ಮಾಡಲು 2-3 ದಿನ ಬೇಕಾಗುತ್ತದೆ. ಒಂದು ವೇಳೆ ಅವರಲ್ಲಿ ಹೊಸ ಪ್ರಭೇದದ ವೈರಸ್ ಇರುವುದು ಖಚಿತವಾದರೆ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದಸರಾ, ದೀಪಾವಳಿ, ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ, ಆದರೆ ಹೊಸ ವರ್ಷದಂದು ಯುವಜನತೆ ಮೋಜು ಮಸ್ತಿ ಮಾಡಲೇಬೇಕೆನ್ನುವಂತೆ ಪ್ರತಿಪಕ್ಷಗಳವರು ವ್ಯಾಖ್ಯಾನ ಮಾಡಿದ್ದಾರೆ. ಜನರಿಗೆ ತೊಂದರೆಯಾದರೆ ಅವರೇ ಜವಾಬ್ದಾರಿ ಹೊರುತ್ತಾರೆಯೇ? ಎಂದು ಸುಧಾಕರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಸಂಸದ ಡಿ.ಕೆ.ಸುರೇಶ್ ನೀಡುವ ಸರ್ಟಿಫಿಕೇಟ್ ಅಗತ್ಯವಿಲ್ಲ. ಜಾಮೀನಿನ ಮೇಲೆ ಹೊರಗೆ ಇರುವವರೇ ಆರೋಪ ಮಾಡುತ್ತಾರೆ. ಮೋಜು, ಮಸ್ತಿ, ಭ್ರಷ್ಟಾಚಾರದ ಆರೋಪ ಹೊತ್ತುಕೊಂಡು ಜಾಮೀನಿನ ಮೇಲೆ ಹೊರಗೆ ಇರುವವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಸುಧಾಕರ್ ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X