ದ.ಕ. ಜಿಲ್ಲೆ : ಮತ್ತೆ 30 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಡಿ.25: ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 30 ಮಂದಿಗೆ ಕೊರೋನ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 33 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 405 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 32,723 ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 732 ಮಂದಿ ಸಾವನ್ನಪ್ಪಿದ್ದಾರೆ. 31,586 ಮಂದಿ ಕೊರೋನ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 18,153 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 19,36,468 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story





