Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ...

ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಪ್ರಧಾನಿಯ ಮುಂದೆ ಕೃಷಿ ಕಾಯ್ದೆ ವಿರುದ್ಧ ಘೋಷಣೆ ಕೂಗಿದ ಆಪ್ ನಾಯಕರು

ವಾರ್ತಾಭಾರತಿವಾರ್ತಾಭಾರತಿ25 Dec 2020 9:19 PM IST
share
ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಪ್ರಧಾನಿಯ ಮುಂದೆ ಕೃಷಿ ಕಾಯ್ದೆ ವಿರುದ್ಧ ಘೋಷಣೆ ಕೂಗಿದ ಆಪ್ ನಾಯಕರು

ಹೊಸದಿಲ್ಲಿ, ಡಿ. 25: ನೂತನ ಕೃಷಿ ಕಾಯ್ದೆಗಳ ವಿರುದ್ಧ ಆಮ್ ಆದ್ಮಿ ಪಕ್ಷ (ಆಪ್)ದ ಇಬ್ಬರು ಸಂಸದರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಘೋಷಣೆಗಳನ್ನು ಕೂಗಿದ ಘಟನೆ ಶುಕ್ರವಾರ ನಡೆದಿದೆ.

ಮಾಜಿ ಪ್ರಧಾನಿ ಅಟಲ್ ಬಿಹಾರ್ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸುವ ಸಂದರ್ಭ ಈ ಘಟನೆ ನಡೆಯಿತು.

ಸೆಂಟ್ರಲ್ ಹಾಲ್‌ನಲ್ಲಿ ತಾನು ಹಾಗೂ ಪಕ್ಷದ ತನ್ನ ಸಹೋದ್ಯೋಗಿ ಭಾಗ್ವತ್ ಮನ್ನಾ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ಹಾಗೂ ಪ್ರತಿಭಟನೆ ನಡೆಸುತ್ತಿರುವ ವೀಡಿಯೊವನ್ನು ಆಪ್‌ನ ಸಂಸದ ಸಂಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

 ರೈತ ವಿರೋಧಿಯಾಗಿರುವ ಕರಾಳ ಕಾನೂನನ್ನು ಹಿಂಪಡೆಯಿರಿ ಎಂದು ಅವರಲ್ಲಿ ಒಬ್ಬರು ಆಗ್ರಹಿಸುತ್ತಿರುವುದು ವೀಡಿಯೊದಲ್ಲಿ ಕೇಳಿ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಾಜಪೇಯಿ ಅವರ ಭಾವಚಿತ್ರದ ಮುಂದೆ ನಿಂತು ಗೌರವ ಸಲ್ಲಿಕೆ ಪೂರ್ಣಗೊಳಿಸುತ್ತಿರುವ ಸಂದರ್ಭ ಇತರ ಹಲವು ಸಂಸದರು ನಿಂತಿರುವುದು ವೀಡಿಯೊದಲ್ಲಿ ಕಂಡು ಬಂದಿದೆ.

ಇತರ ಕೆಲವು ನಾಯಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಹೊರಗೆ ನಡೆದುಕೊಂಡು ಹೋಗುತ್ತಿರುವುದು, ಈ ನಡುವೆ ಆಪ್‌ನ ಇಬ್ಬರು ಸಂಸದರು ನಿರಂತರ ಘೋಷಣೆಗಳನ್ನು ಕೂಗುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ.

 ‘‘ಸಂಸತ್ತಿನ ಅಧಿವೇಶನ ಕರೆಯುತ್ತಿಲ್ಲ. ಪ್ರಧಾನಿ ಅವರೊಂದಿಗೆ ಮಾತನಾಡಲು ಅಥವಾ ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡುತ್ತಿಲ್ಲ. ಸೆಂಟ್ರಲ್‌ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಆಪ್‌ನ ಸಂಸದ ಭಾಗ್ವತ್ ಮನ್ನಾ ಹಾಗೂ ನಾನು ಕರಾಳ ಕಾಯ್ದೆಗಳನ್ನು ಹಿಂದೆಗೆಯುವಂತೆ ಆಗ್ರಹಿಸಿದ್ದೇವೆ. ಈ ಕಾಯ್ದೆಗಳ ವಿರುದ್ಧ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಕೃಷಿ ಕಾಯ್ದೆಗಳು ಕೈಗಾರಿಕೋದ್ಯಮಿಗಳ ಕೈಯಲಿವೆ. ಈ ಕಾಯ್ದೆಗಳು ರೈತರಿಗೆ ವಿರುದ್ಧವಾಗಿದೆ. ರೈತರ ಪ್ರತಿಭಟನೆಗೆ ನಾವು ಬೆಂಬಲ ನೀಡುತ್ತೇವೆ. ಮೂರು ಕರಾಳ ಕಾನೂನನ್ನು ಹಿಂದೆಗೆಯುವಂತೆ ನಾವು ಪ್ರಧಾನಿ ಅವರಲ್ಲಿ ಮನವಿ ಮಾಡಿದ್ದೇವೆ’’ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

 ‘‘ಮೋದಿ ಸರಕಾರದ ಕಣ್ಣು ಹಾಗೂ ಕಿವಿಯನ್ನು ತೆರೆಯಲು ಸೆಂಟ್ರಲ್ ಹಾಲ್‌ನಲ್ಲಿ ರೈತ ಪರ ಘೋಷಣೆಗಳು ಪ್ರತಿಧ್ವನಿಸಿದವು’’ ಎಂದು ಪಂಜಾಬ್‌ನ ಸಂಗ್ರೂರ್‌ನ ಸಂಸದ ಭಾಗ್ವತ್ ಮನ್ನಾ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X