Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ...

ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರಿಸದ ಆಸ್ಪತ್ರೆ: ಸುಧಾಕರ್ ಮಧ್ಯಪ್ರವೇಶದಿಂದ ಬಗೆಹರಿದ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ25 Dec 2020 9:26 PM IST
share
ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರಿಸದ ಆಸ್ಪತ್ರೆ: ಸುಧಾಕರ್ ಮಧ್ಯಪ್ರವೇಶದಿಂದ ಬಗೆಹರಿದ ಸಮಸ್ಯೆ

ಬೆಂಗಳೂರು, ಡಿ.25: ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಧ್ಯ ಪ್ರವೇಶದಿಂದ ಬಗೆಹರಿದ ಘಟನೆ ನಡೆದಿದೆ.

ರಾಜಸ್ಥಾನ ಮೂಲದ ಭೀಮರಾಮ್ ಪಟೇಲ್ ಎಂಬ ಅರವತ್ತೆರಡು ವರ್ಷದ ವ್ಯಕ್ತಿ ಮೃತಪಟ್ಟಿದ್ದು ಹೆಚ್ಚುವರಿ ಬಿಲ್ ಪಾವತಿ ವಿಷಯದಲ್ಲಿ ಕುಟುಂಬ ಸದಸ್ಯರು ಮತ್ತು ಜಯನಗರದಲ್ಲಿರುವ ಮಣಿಪಾಲ್ ಆಸ್ಪತ್ರೆ ಆಡಳಿತದ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಮಾತ್ರವಲ್ಲ, ನಲವತ್ತು ದಿನಗಳ ಚಿಕಿತ್ಸೆ ಪಡೆದರೂ ಕೊರೋನ ಸೋಂಕು ನಿವಾರಣೆ ಆಗಲಿಲ್ಲ, ಆದರೂ ದೊಡ್ಡ ಮೊತ್ತದ ಶುಲ್ಕ ಪಡೆದಿದ್ದಾರೆ ಮತ್ತು ಸೋಂಕು ನಿವಾರಣೆ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿತ್ತು. ಮರಣೋತ್ತರ ವರದಿಯಲ್ಲಿ ಸೋಂಕು ಇದೆ ಎಂದು ಉಲ್ಲೇಖಿಸಲಾಗಿದೆ, ನಲವತ್ತು ದಿನಗಳ ಚಿಕಿತ್ಸೆ ಬಳಿಕವೂ ಸೋಂಕು ಇದೆ ಎಂದರೆ ಹೇಗೆ? ಎಂಬುದು ಕುಟುಂಬಸ್ಥರ ಆರೋಪವಾಗಿತ್ತು.

ಈ ಕಾರಣಗಳಿಂದ ಡಿ.23 ರಂದು ರೋಗಿ ಬೆಳಗ್ಗೆ ಮೃತಪಟ್ಟಿದ್ದರೂ ಸಂಜೆ ಆದರೂ ಈ ವಿಷಯದಲ್ಲಿ ಪರ-ವಿರೋಧ ಚರ್ಚೆಗಳಿಂದ ಮೃತದೇಹ ಹಸ್ತಾಂತರ ಆಗಿರಲಿಲ್ಲ. ಈ ಸುದ್ದಿ ಅದೇ ದಿನ ಸಂಜೆ ವೇಳೆಗೆ ಆರೋಗ್ಯ ಸಚಿವ ಸುಧಾಕರ್ ಅವರಿಗೆ ತಲುಪಿದೆ. ವಿಷಯ ಗೊತ್ತಾಗುತ್ತಿದ್ದಂತೆ ಎಲ್ಲ ಮಾಹಿತಿ ತರಿಸಿಕೊಂಡು ಪರಿಶೀಲಿಸಿದ ಅವರು, ಆಡಳಿತ ಮಂಡಳಿಯವರನ್ನು ಸಂಪರ್ಕಿಸಿ ಪ್ರಕರಣದ ಬಗ್ಗೆ ವಿಚಾರಿಸಿದ್ದಾರೆ.

ಆಸ್ಪತ್ರೆ ಆಡಳಿತ, ತಮ್ಮದೇನೂ ತಪ್ಪಿಲ್ಲ, ರೋಗಿಗೆ ಕೋವಿಡ್ ಇರುವುದರಿಂದ ನಿಯಮಾವಳಿಗಳ ಅನ್ವಯ ಬಿಬಿಎಂಪಿ ಮೂಲಕ ದೇಹ ಹಸ್ತಾಂತರ ಮಾಡಬೇಕಿದೆ ಎಂಬ ಮಾಹಿತಿ ನೀಡಿದರಲ್ಲದೇ, ಬಾಕಿ ಇರುವ ಶುಲ್ಕ ಪಾವತಿ ಕುರಿತ ವಿವರ ನೀಡಿದರು. ಅಂತಿಮವಾಗಿ ಸಚಿವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ವಿಮಾ ಕಂಪನಿಯಿಂದ ಪಡೆದ ಹಣ ಮತ್ತು ರೋಗಿ ಪುತ್ರ ಪಟೇಲ್ ಮುಂಚಿತವಾಗಿ ಕಟ್ಟಿದ್ದ ಹಣಕ್ಕೆ ಬಿಲ್ ಮುಕ್ತಾಯಗೊಳಿಸಿ ದೇಹವನ್ನು ಮೃತರ ಕುಟುಂಬಸ್ಥರಿಗೆ ಡಿ.24ರಂದು ಕೋವಿಡ್ ವಿಧಿ ವಿಧಾನಗಳ ಅನ್ವಯ ಹಸ್ತಾಂತರಿಸಲಾಯಿತು. ಕಟ್ಟಬೇಕು ಎಂದು ತಿಳಿಸಿದ್ದ ಹತ್ತು ಲಕ್ಷ ರೂ.ಗಳಷ್ಟು ಹಣವನ್ನು ಮನ್ನಾ ಮಾಡಲಾಯಿತು.

ಕುಟುಂಬಸ್ಥರ ಆರೋಪ: ನ.15ರಂದೇ ಭೀಮರಾವ್ ಪಟೇಲ್ ಅವರನ್ನು ಗ್ಯಾಸ್ಟ್ರಿಕ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೂರು ದಿನಗಳ ಬಳಿಕ ಅವರಿಗೆ ಕೊರೋನ ಸೋಂಕು ಇದೆ ಎಂದು ತಿಳಿಸಲಾಯಿತು. ಅಂದಿನಿಂದ 20ನೇ ತಾರೀಖಿನವರೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರನ್ನು ನೋಡಲು ಬಿಟ್ಟಿರಲಿಲ್ಲ. ಆ ಮಧ್ಯೆ ವಿಮಾ ಕಂಪನಿಯಿಂದ 36.59 ಲಕ್ಷ ರೂ.ಮತ್ತು ನಗದು ರೂಪದಲ್ಲಿ 9.80 ಲಕ್ಷ ರೂ.ಪಾವತಿಸಲಾಗಿತ್ತು. ಸಾಯುವ ಹಿಂದಿನ ದಿನ ನೋಡಲೇಬೇಕು ಎಂದು ಒತ್ತಾಯಿಸಿದಾಗ ನಮ್ಮ ಕಡೆಯ 20 ಮಂದಿ ಭೇಟಿಗೆ ಅವಕಾಶ ನೀಡಲಾಗಿತ್ತು. ರೋಗಿ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಮರುದಿನ ಬೆಳಗ್ಗೆ ಮೃತಪಟ್ಟಿರುವುದಾಗಿ ಹೇಳಿ ಮತ್ತೆ ಹತ್ತು ಲಕ್ಷ ರೂ. ಬಾಕಿ ಕಟ್ಟುವಂತೆ ಒತ್ತಾಯಿಸಲಾಗಿತ್ತು. ಸಚಿವರ ಮಧ್ಯ ಪ್ರವೇಶದ ಬಳಿಕವಷ್ಟೇ ನಮಗೆ ದೇಹ ನೀಡಲಾಗಿದೆ ಎಂಬುದು ಕುಟುಂಬ ಸದಸ್ಯರ ದೂರು.

ನಿರಾಕರಣೆ: ಆದರೆ ಆರೋಪಗಳನ್ನು ನಿರಾಕರಿಸಿದ್ದ ಆಸ್ಪತ್ರೆ ಆಡಳಿತ ರೋಗಿಯನ್ನು ಉಳಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗಿತ್ತು. ಹೆಚ್ಚುವರಿ ಶುಲ್ಕ ಕೇಳಿಲ್ಲ, ನಿಯಮಗಳ ಅನ್ವಯವೇ ದೇಹ ನೀಡಬೇಕಿದ್ದರಿಂದ ಆ ಪ್ರಕ್ರಿಯೆ ನಡೆಸಿ ಹಸ್ತಾಂತರಿಸಲಾಗಿದೆ ಎಂದು ತಿಳಿಸಿತ್ತು. ಒಟ್ಟಾರೆ ಪ್ರಕರಣ ಸಚಿವರ ಮಧ್ಯ ಪ್ರವೇಶದಿಂದ ತೆರೆ ಕಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X