Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದ ಕೃಷಿ ಮಸೂದೆಗಳಿಂದಾಗಿ ರೈತರ...

ಕೇಂದ್ರದ ಕೃಷಿ ಮಸೂದೆಗಳಿಂದಾಗಿ ರೈತರ ಆದಾಯ ದ್ವಿಗುಣ: ಸಿಎಂ ಯಡಿಯೂರಪ್ಪ

"ವಿರೋಧಿಗಳ ಅಪಪ್ರಚಾರಕ್ಕೆ ರೈತರು ಕಿವಿಗೊಡಬೇಡಿ"

ವಾರ್ತಾಭಾರತಿವಾರ್ತಾಭಾರತಿ25 Dec 2020 9:34 PM IST
share
ಕೇಂದ್ರದ ಕೃಷಿ ಮಸೂದೆಗಳಿಂದಾಗಿ ರೈತರ ಆದಾಯ ದ್ವಿಗುಣ: ಸಿಎಂ ಯಡಿಯೂರಪ್ಪ

ಚಿಕ್ಕಮಗಳೂರು, ಡಿ.25: ಕೇಂದ್ರ ಸರಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸದುದ್ದೇಶದಿಂದ ಕೃಷಿ ಮಸೂದೆಗಳಿಗೆ ತಿದ್ದುಪಡಿ ತಂದಿದೆ. ಈ ಕೃಷಿ ಮಸೂದೆಗಳಿಂದ ರೈತ ಸಮುದಾಯಕ್ಕೆ ಯಾವ ನಷ್ಟ, ತೊಂದರೆಯೂ ಆಗುವುದಿಲ್ಲ. ವಿರೋಧಿಗಳ ಅಪಪ್ರಚಾರಕ್ಕೆ ರೈತರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಶುಕ್ರವಾರ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರೈತರ ಬದುಕನ್ನು ಹಸನುಗೊಳಿಸುವುದು ಕೇಂದ್ರ ಮತ್ತು ರಾಜ್ಯ ಸರಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ನೂತನ ಕೃಷಿ ಮಸೂದೆಗಳನ್ನು ಜಾರಿ ಮಾಡಿದೆ. ಈ ಕಾಯ್ದೆಗಳ ವಿರುದ್ಧ ವಿರೋಧ ಪಕ್ಷಗಳು ಅಪಪ್ರಚಾರ ಮಾಡಿರುವುದರಿಂದ ರೈತರು ಚಳವಳಿ ಮಾಡುತ್ತಿದ್ದಾರೆ. ಆದರೆ ಈ ಕಾಯ್ದೆಗಳಿಂದಾಗಿ ರೈತರ ಆದಾಯ ದ್ವಿಗುಣವಾಗಲಿದೆಯೇ ಹೊರತು ರೈತರಿಗೆ ಯಾವ ರೀತಿಯಲ್ಲೂ ಅನ್ಯಾಯವಾಗುವುದಿಲ್ಲ ಎಂದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಕೃಷಿ ಮಾರುಕಟ್ಟೆಯಲ್ಲಿ ಸುಧಾರಣೆಯಾಗಲಿದ್ದು, ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗಲಿದೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂದಿನಂತೆ ಮುಂದುವರಿಯಲಿದೆ. ಭೂಸುಧಾರಣೆ ಕಾಯ್ದೆಯಿಂದಾಗಿ ಸಣ್ಣ ಹಿಡುವಳಿದಾರರ ಕೃಷಿಕರ ಆದಾಯ ಹೆಚ್ಚಲಿದ್ದು, ಕೃಷಿ ಕ್ಷೇತ್ರದಲ್ಲಿ ಕೃಷಿಕರಲ್ಲದವರೂ ಉತ್ಪಾದನೆಯಲ್ಲಿ ತೊಡಗಲು ಸಾಧ್ಯವಾಗಲಿದೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದಾಗಿ ರಾಜ್ಯಾದ್ಯಂತ ಇರುವ ಒಣ ಭೂಮಿಯ ಅಭಿವೃದ್ಧಿ ಸಾಧ್ಯವಾಗಲಿದೆ ಎಂದ ಮುಖ್ಯಮಂತ್ರಿ ಯಡಿಯೂರಪ್ಪ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಮೋದಿ ನೂತನ ಕೃಷಿ ಕಾಯ್ದೆಗಳನ್ನು ಜಾರಿ ಮಾಡಿದ್ದಾರೆ. ಪಿಎಂ ಕಿಸಾನ್ ಯೋಜನೆಯಡಿ 9 ಕೋಟಿ ರೈತರ ಖಾತೆಗೆ 18 ಕೋಟಿ ರೂ. ಅನ್ನು ನೇರವಾಗಿ ಜಮೆ ಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರ ರೈತರು ಸೇರಿದಂತೆ ಎಲ್ಲ ಸಮುದಾಯದ ಜನರ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದರು.

ಕೊರೋನಾ ಸೋಂಕಿನಿಂದಾಗಿ ರಾಜ್ಯ ಸರಕಾರ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲೂ ಅಭಿವೃದ್ಧಿ ವಿಚಾರದಲ್ಲಿ ಸರಕಾರ ನಿರ್ಲಕ್ಷ್ಯ ವಹಿಸಿಲ್ಲ. ರಾಜ್ಯದ ಎಲ್ಲ ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ 1063 ಕೋ. ರೂ. ಅನುದಾನ ನೀಡಲಾಗಿದೆ ಎಂದ ಅವರು, ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಾಲೇಜನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನದಲ್ಲಿ ನಿರ್ಮಿಸಲಾಗುತ್ತಿದೆ. ಇದೇ ಅನುದಾನದಲ್ಲಿ ಜಿಲ್ಲಾಸ್ಪತ್ರೆಯನ್ನು 1 ಸಾವಿರ ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಜಿಲ್ಲಾಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಇನ್ನೂ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುದಾನಕ್ಕೆ ಮನವಿ ಮಾಡಿದ್ದು, ಹಣಕಾಸಿನ ಪರಿಸ್ಥಿತಿ ಆಧಾರದ ಮೇಲೆ ಮುಂದಿನ ಬಜೆಟ್‍ನಲ್ಲಿ ಅನುದಾನ ನೀಡಲಾಗುವುದು ಎಂದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಸಮಾಜದ ಕಣ್ಣು. ಕೇಂದ್ರ ಹಾಗೂ ರಾಜ್ಯ ಸರಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಮೂಲಸೌಕರ್ಯಕ್ಕೆ ಆದ್ಯತೆ ನೀಡಿದೆ. ಕೇಂದ್ರ ಸರಕಾರ ರಾಜ್ಯಕ್ಕೆ 4 ವೈದ್ಯಕೀಯ ಕಾಲೇಜು ನೀಡಿದ್ದು, ಮೋದಿ ಪ್ರಧಾನಿಯಾದ ಮೇಲೆ ದೇಶಾದ್ಯಂತ 157 ಮೆಡಿಕಲ್ ಕಾಲೇಜು ಆರಂಭವಾಗಿವೆ ಎಂದ ಅವರು, ರಾಜ್ಯಾದ್ಯಂತ ಇರುವ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದರೊಂದಿಗೆ ಎಲ್ಲ ರೀತಿಯ ಸೌಲಭ್ಯ ಸೇರಿದಂತೆ ದಿನದ 24ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ಅಭಿವೃದ್ಧಿಪಡಿಸಲು ಮುಂದಿನ ಬಜೆಟ್‍ನಲ್ಲಿ ಕ್ರಮವಹಿಸಲಾಗುವುದು. ಚಿಕ್ಕಮಗಳೂರು ನಗರಕ್ಕೆ ಮಂಜೂರಾಗಿರುವ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ 20ರಿಂದ 24 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದರು.

ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಪ್ರತಿಯೊಬ್ಬರಿಗೂ ಸೂರು ಕಲ್ಪಿಸಸಲು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದು, ಅದರಂತೆ ರಾಜ್ಯ ಸರಕಾರ 20 ಲಕ್ಷ ಮನೆಗಳನ್ನು ವಸತಿ ರಹಿತರಿಗೆ ನೀಡಿದೆ. ಈ ಪೈಕಿ 7 ಲಕ್ಷ ಮನೆಗಳ ನಿರ್ಮಾಣ ಕಾಮಗಾರಿ ಬಾಕಿ ಇದೆ. ಮುಂದಿನ ಬಜೆಟ್‍ನಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗುವುದು ಎಂದರು.

ನಗರ ನೀರು ಸರಬರಾಜು ಹಾಗೂ ಒಳ ಚರಂಡಿ ನಿಗಮ ಮಂಡಳಿ ಅಧ್ಯಕ್ಷ ರಾಜುಗೌಡ ಮಾತನಾಡಿ, ಚಿಕ್ಕಮಗಳೂರು ನಗರದಲ್ಲಿ 26 ಸಾವಿರ ಮನೆಗಳಿಗೆ ಅಮೃತ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದ್ದು, 4-5 ಸಾವಿರ ಮನೆಗಳಿಗೆ ಸಂಪರ್ಕ ಕಲ್ಪಿಸುವ ಕಾಮಗಾರಿ ಬಾಕಿ ಇದೆ. ಯುಜಿಡಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಯುಜಿಡಿ ಕಾಮಗಾರಿ ಪೂರ್ಣಗೊಳಿಸಲು ಇನ್ನೂ 26 ಕೋಟಿ ರೂ. ಅನುದಾನ ಅಗತ್ಯವಿದ್ದು, ಮಂಡಳಿಯಿಂದ ಶೀಘ್ರ ಅನುದಾನ ನೀಡಿ ಮುಂದಿನ 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಕೇಳಿದ್ದನ್ನೆಲ್ಲ ಕೊಡುವ ಕಾಮಧೇನು. ಚಿಕ್ಕಮಗಳೂರಿನ ಶಾಸಕರು ಅನೇಕ ಯೋಜನೆಗಳಿಗಾಗಿ ಅನುದಾನಕ್ಕೆ ಸಿಎಂ ಬಳಿ ಮನವಿ ಮಾಡಿದ್ದಾರೆ. ಆರ್ಥಿಕ ಸಂಕಷ್ಟದ ಕಾಲದಲ್ಲೂ ಸಿಎಂ ಜಿಲ್ಲೆಗೆ ವಿವಿಧ ಕಾಮಗಾರಿಗಳಿಗೆ 1063 ಕೋ. ರೂ. ನೀಡಿದ್ದಾರೆ. ಜಿಲ್ಲೆಗೆ ಸರಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ, ತರೀಕೆರೆ ಪಟ್ಟಣದಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ನಿರ್ಮಾಣ, ಕಳಸ ತಾಲೂಕು ಕೇಂದ್ರದ ಅನುಷ್ಠಾನ ಹಾಗೂ ಕಾಫಿ ಬೆಳೆಗಾರರ ಅನುಕೂಲಕ್ಕೆ 10ಎಚ್‍ಪಿ ಉಚಿತ ವಿದ್ಯುತ್ ನೀಡಬೇಕೆಂಬುದು ಜಿಲ್ಲೆಯ ಜನರು ಹಾಗೂ ಜನಪ್ರತಿನಿಧಿಗಳ ಬೇಡಿಕೆಯಾಗಿದ್ದು ಮುಂದಿನ ಬಜೆಟ್‍ನಲ್ಲಿ ಮುಖ್ಯಮಂತ್ರಿ ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, 13 ತಿಂಗಳ ಅವಧಿಗೆ ಸಚಿವನಾಗಿದ್ದ ವೇಳೆ ಜಿಲ್ಲೆಯ ಅಭಿವೃದ್ಧಿಗೆ ಸಂಘಟಿತ ಪ್ರಯತ್ನ ಮಾಡಿದ್ದೇನೆ. ಇದರ ಫಲವಾಗಿ ಸಿಎಂ 1063 ಕೋ. ರೂ. ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ನೀಡಿದ್ದಾರೆ. ಪ್ರತ್ಯೇಕ ಹಾಲು ಒಕ್ಕೂಟ, ಗೋಂದಿ ಯೋಜನೆ, ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಯ ಸಂಕಲ್ಪ ಮಾಡಿದ್ದು, ಯೋಜನೆ ಜಾರಿಗೆ ಸರಕಾರ ಅನುಮೋದನೆ ನೀಡಿದೆ. ಈ ಯೋಜನೆಗಳನ್ನು ಮಾಡಿಸಿಯೇ ತೀರುತ್ತೇನೆ ಎಂದ ಅವರು, ಅಟಲ್‍ ಬಿಹಾರಿ ವಾಜಪೇಯಿ ಬಡಾವಣೆ ನಷ್ಟದ ಯೋಜನೆ ಎಂದು ಟೀಕಿಸಿದ್ದರು, ಆದರೆ ಈ ಯೋಜನೆಯಿಂದ ಸಿಡಿಎಗೆ 40-50 ಕೋಟಿ ರೂ. ಆದಾಯ ಬಂದಿದೆ. ಚಿಕ್ಕಮಗಳೂರು-ಹಾಸನ ಸಂಪರ್ಕದ ರೈಲ್ವೆ ಯೋಜನೆ ಶೀಘ್ರ ಜಾರಿಯಾಗಲಿದೆ. ಸದ್ಯ ಸಚಿವನಾಗಿಲ್ಲದಿದ್ದರೂ ಪಕ್ಷದ ನೀಡಿದ ಜವಬ್ದಾರಿಯೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಜವ್ದಾರಿಯಿಂದ ನುಣುಚಿಕೊಂಡಿಲ್ಲ. ಜನರು ಹೆಮ್ಮೆಪಡುವಂತಹ ಕೆಲಸ ಮುಂದಿನ ದಿನಗಳಲ್ಲೂ ಮಾಡುತ್ತೇನೆ ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಭೈರತಿ ಬಸವರಾಜು, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಮಾತನಾಡಿದರು. ಮಾಜಿ ಸಚಿವ ಜೀವರಾಜ್, ಶಾಸಕರಾದ ಕುಮಾರಸ್ವಾಮಿ, ಡಿ.ಎಸ್.ಸುರೇಸ್, ಬೆಳ್ಳಿಪ್ರಕಾಶ್, ಟಿ.ಡಿ.ರಾಜೇಗೌಡ, ವಿಪ ಸದಸ್ಯರಾದ ಭೋಜೇಗೌಡ, ಪ್ರಾಣೇಶ್, ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಎಸ್ಪಿ ಅಕ್ಷಯ್ ಮಚೀಂದ್ರ, ಜಿಪಂ ಸಿಇಒ ಪೂವಿತಾ ಸೇರಿದಂತೆ ತಾಪಂ, ಜಿಪಂ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಸಿಎಂ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಸಿಎಂ ಯಡಿಯೂರಪ್ಪ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ ವೇಳೆ ತಮ್ಮ ಭಾಷಣದಲ್ಲಿ ಮಲೆನಾಡಿಗರ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ಸರಕಾರದ ನಿಲುವಿನ ಬಗ್ಗೆ ಹೇಳುತ್ತಾರೆಂದು ಸಾರ್ವಜನಿಕರು ಸೇರಿದಂತೆ ಹೋರಾಟಗಾರರ ನಿರೀಕ್ಷೆಯಾಗಿತ್ತು. ಆದರೆ ಸಿಎಂ ಭಾಷಣ ಮಾಡಿದಾಗ ಕಸ್ತೂರಿ ರಂಗನ್ ವರದಿಯ ಬಗ್ಗೆ ಪ್ರಸ್ತಾಪವನ್ನೇ ಮಾಡಲಿಲ್ಲ. ಇದರಿಂದ ಸಾರ್ವಜನಿಕರು ಹಾಗೂ ಹೋರಾಟಗಾರರಲ್ಲಿ ಭಾರೀ ನಿರಾಶೆ ಉಂಟಾಯಿತು. ಆದರೆ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿದ ವೇಳೆ, ಕಸ್ತೂರಿ ರಂಗನ್ ವರದಿಯಿಂದ ಜನರು ಹಾಗೂ ರೈತರಿಗೆ ರಕ್ಷಣೆ ನೀಡುವುದು ಸರಕಾರದ ಕರ್ತವ್ಯವಾಗಿದೆ. ವರದಿ ಜಾರಿ ವೇಳೆ ಜನರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಈಗಾಗಲೇ ಭರವಸೆ ನೀಡಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರ ಅಗತ್ಯ ಕ್ರಮವಹಿಸಲಿವೆ ಎಂದು ಹೇಳಿದರಾದರೂ ವರದಿ ಜಾರಿ ಸಂಬಂಧ ಅವರು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X