ಶ್ರೀ ಸಾಹಿತ್ಯ ಪ್ರಶಸ್ತಿಗೆ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಆಯ್ಕೆ

ಬೆಂಗಳೂರು, ಡಿ.25: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ 2020ನೇ ಸಾಲಿನ ಶ್ರೀ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಕವಿ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಆಯ್ಕೆಯಾಗಿದ್ದಾರೆ.
ಹಿರಿಯ ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಎಂ.ಎ.ಜಯಚಂದ್ರ ಹಾಗೂ ಶಿವರಾಮಶೆಟ್ಟಿ ಒಳಗೊಂಡ ಆಯ್ಕೆ ಸಮಿತಿಯು ಸರ್ವಾನುಮತದಿಂದ ಸಿದ್ದಲಿಂಗಯ್ಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಶ್ರೀ ಸಾಹಿತ್ಯ ಪ್ರಶಸ್ತಿಯು ಒಂದು ಲಕ್ಷ ರೂ.ನಗದು, ಸ್ಮರಣಿಕೆ ಒಳಗೊಂಡಿದೆ. ಜ.1ರಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಆರ್.ಲಕ್ಷ್ಮಿನಾರಾಯಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





