ಡಿ. 28ಕ್ಕೆ ಕಾಂಗ್ರೆಸ್ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ
ಉಡುಪಿ, ಡಿ.26: ಇದೇ ಡಿ.28ರ ಸೋಮವಾರ ಬೆಳಗ್ಗೆ 10:30ಕ್ಕೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 135ನೇ ಸಂಸ್ಥಾಪನಾ ದಿನದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಮರ್ಪಣಾ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





