Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.29: ಉಡುಪಿಯಲ್ಲಿ ವಿಭಾಗೀಯ ಮಟ್ಟದ...

ಡಿ.29: ಉಡುಪಿಯಲ್ಲಿ ವಿಭಾಗೀಯ ಮಟ್ಟದ ಜಿಲ್ಲಾ ಯುವ ಸಂಸತ್ತು

ವಾರ್ತಾಭಾರತಿವಾರ್ತಾಭಾರತಿ26 Dec 2020 5:59 PM IST
share

ಉಡುಪಿ, ಡಿ.26: ಭಾರತ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ಸಹಯೋಗದೊಂದಿಗೆ 2020-21ನೇ ಸಾಲಿನ ರಾಷ್ಟ್ರೀಯ ಯುವ ಸಂಸತ್ತು ಕಾರ್ಯಕ್ರಮದ ನಡೆಯಲಿದೆ. ಇದರ ಅಂಗವಾಗಿ ಯುವ ಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಯುವ ಜನರಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.

ಕರ್ನಾಟಕ ರಾಜ್ಯದಲ್ಲಿ ಈ ಕಾರ್ಯಕ್ರಮ ನಡೆಸಲು ರಾಜ್ಯವನ್ನು 4 ನೊಡೆಲ್ ಕೇಂದ್ರಗಳಾಗಿ ವಿಭಾಗಿಸಲಾಗಿದೆ. ಉಡುಪಿ, ಮೈಸೂರು, ಗುಲ್ಬರ್ಗ ಹಾಗೂ ಕಾರವಾರ ಆಯ್ಕೆಯಾದ ರಾಜ್ಯದ ನೊಡೆಲ್ ಕೇಂದ್ರಗಳು. ಉಡುಪಿ ನೊಡೆಲ್ ಕೇಂದ್ರದ ಅಡಿಯಲ್ಲಿ - ದಕ್ಷಿಣಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳು ಬರಲಿದ್ದು, ಆಯಾ ಜಿಲ್ಲೆಗಳಲ್ಲಿ ಭಾಗವಹಿಸುವ ಯುವ ಪ್ರತಿಭೆ ಗಳಿಗೆ ಆಯಾ ಜಿಲ್ಲಾ ಮಟ್ಟದಲ್ಲೇ ಸೀಕ್ರನಿಂಗ್ ನಡೆಸಿ ಜಿಲ್ಲೆಯಿಂದ ಆಯ್ಕೆಯಾದ ಅತ್ಯುತ್ತಮ ಅಭ್ಯರ್ಥಿಗಳು ಉಡುಪಿಯಿಂದ ಆನ್‌ಲೈನ್ ಮೂಲಕ ಡಿ.29ರ ಮಂಗಳವಾರ ನಡೆಯಲಿರುವ ಕಾರ್ಯಕ್ರಮ ದಲ್ಲಿ ತಮ್ಮತಮ್ಮ ಜಿಲ್ಲೆಗಳನ್ನು ಪ್ರತಿನಿಧಿಸುವರು.

ಪ್ರತೀ ಜಿಲ್ಲೆಯಿಂದ ಇಬ್ಬರು ಅತ್ಯುತ್ತಮ ಅಭ್ಯರ್ಥಿಗಳ ಆಯ್ಕೆಯನ್ನು ಉಡುಪಿ ಯಲ್ಲಿ ನಡೆಸಿ ಅವರ ಹೆಸರುಗಳನ್ನು ರಾಜ್ಯ ಮಟ್ಟಕ್ಕೆ ಶಿಫಾರಸು ಮಾಡಲಾ ಗುವುದು. ಈ ಕಾರ್ಯಕ್ರಮವು ಜಿಲ್ಲಾ ಮಟ್ಟದಲ್ಲಿ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಯಲಿದೆ. ರಾಷ್ಟ್ರ ಮಟ್ಟದಲ್ಲಿ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಸ್ಪರ್ಧೆ ನಡೆಯಲಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ಭಾಗವಹಿಲಿಚ್ಛಿಸುವ ಅಭ್ಯರ್ಥಿಗಳು ಇಂಗ್ಲೀಷ್‌ಅಥವ ಹಿಂದಿ ಭಾಷೆಯಲ್ಲಿ ಸಿದ್ದತೆ ಮಾಡಿಕೊಳ್ಳುವುದು ಸೂಕ್ತ ಎಂದು ನೆಹರು ಯುವ ಕೇಂದ್ರದ ಪ್ರಕಟನೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆಗೊಂಡಿರುವ ಉಡುಪಿ ಜಿಲ್ಲೆಯ ಸಂಘಸಂಸ್ಥೆಗಳ 10 ಯುವಕ/ಯುವತಿಯರು ಹಾಗೂ ಎನ್ನೆಸ್ಸೆಸ್ 10ಮಂದಿ ಆನ್‌ಲೈನ್ ಮೂಲಕ ಭಾಗವಹಿಸಬಹುದಾಗಿದೆ. ಜೂಮ್ (ಆನ್‌ಲೈನ್) ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. 18ರಿಂದ 25 ವರ್ಷ ವಯೋಮಿತಿ ಹೊಂದಿರುವವರು ಮಾತ್ರ ಭಾಗವಹಿಸಲು ಅರ್ಹರು. ಆಸಕ್ತರು ಡಿ.28ರ ಸೋಮವಾರ ಅಪರಾಹ್ನ 12  ಗಂಟೆಯೊಳಗೆ ಹೆಸರು ನೊಂದಾಯಿ ಸಿಕೊಳ್ಳಬಹುದಾಗಿದೆ.

ವಿಷಯಗಳು: ಕಾರ್ಯಕ್ರಮದಲ್ಲಿ ಕಾಲಾವಕಾಶ ಕೇವಲ 4 ನಿಮಿಷಗಳು ಮಾತ್ರ. ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿರುತ್ತದೆ. ಜಿಲ್ಲಾ ಮಟ್ಟದಜ ಕಾರ್ಯಕ್ರಮದಲ್ಲಿ ಭಾಷಣದ ವಿಷಯಗಳು: 1.ರಾಷ್ಟ್ರೀಯ ಶಿಕ್ಷಣ ನೀತಿ-202 0 ಭಾರತವನ್ನು ಪರಿವರ್ತಿ ಸುತ್ತದೆ. 2.ಉನ್ನತ ಭಾರತ ಅಭಿಯಾನದ ಮೂಲಕ ಸಮುದಾಯಗಳಲ್ಲಿ ಅಡಗಿರುವ ಶಕ್ತಿಯನ್ನು ಹೊರಗೆಳೆಯುವುದು. ಹಾಗೂ ಅವರ ಉನ್ನತೀಕರಣಕ್ಕೆ ತಂತ್ರಜ್ಞಾನವನ್ನು ಬಳಸುವುದು. 3. ಸಾಮಾನ್ಯ ಕ್ರಮದ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಬಿಚ್ಚಿಡುವುದು. 4.ಶೂನ್ಯ ಬಜೆಟ್‌ನ ನೈಸರ್ಗಿಕ ಕೃಷಿ ರೈತರಿಗೆ ವರದಾನ.

ಮೇಲಿನ ವಿಷಯಗಳ ಮೇಲೆ ಜಿಲ್ಲಾ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ. ಭಾಗವಹಿಸಿದವರಿಗೆ ಪ್ರಮಾಣ ಪತ್ರ ಗಳನ್ನು ನೀಡಲಾಗುವುದು. ಅಲ್ಲದೇ ಉಡುಪಿ ವಿಭಾಗದಿಂದ ರಾಜ್ಯಮಟ್ಟದಲ್ಲಿ ಭಾಗವಹಿಸಲು ಪ್ರತಿ ಜಿಲ್ಲೆಯಿಂದ ಇಬ್ಬರು ಪ್ರಥಮ ಮತ್ತು ದ್ವಿತೀಯ ವಿಜೇತರನ್ನು ಆಯ್ಕೆ ಮಾಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗುವುದು.

2 ಲಕ್ಷ ರೂ.ಬಹುಮಾನ: ರಾಷ್ಟ್ರಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 2ಲಕ್ಷ ರೂ., ದ್ವಿತೀಯ ಬಹುಮಾನ 1.5ಲಕ್ಷ ರೂ. ಹಾಗೂ ತೃತೀಯ ಬಹುಮಾನ 1ಲಕ್ಷ ರೂ. ನಗದು ನೀಡಲಾಗುತ್ತದೆ. ಡಿ.29ರ ಅಪರಾಹ್ನ 2:00ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆನ್‌ ಲೈನ್ ಮೂಲಕ ವಿಭಾಗೀಯ ಮಟ್ಟದ ಜಿಲ್ಲಾ ಯುವ ಸಂಸತ್ ಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅರ್ಜಿಯನ್ನು ನೆಹರು ಯುವ ಕೇಂದ್ರ, ಜಿಲ್ಲಾಧಿಕಾರಿಗಳ ಕಚೇರಿ, ಬಿ ಬ್ಲಾಕ್ 102, ರಜತಾದ್ರಿ, ಮಣಿಪಾಲ ಉಡುಪಿ (ದೂರವಾಣಿ: 08202574992) ಇಲ್ಲಿಂದ ಪಡೆಯಬಹುದು ಹೆಚ್ಚಿನ ಮಾಹಿತಿಗೆ ಜಿಲ್ಲಾ ಯುವಜನ ಅಧಿಕಾರಿ ಅವರ ಮೊಬೈಲ್ ಸಂಖ್ಯೆ: 9958325151/ 8762114883 ಇವರನ್ನು ಸಂಪರ್ಕಿಸುವಂತೆ ಉಡುಪಿ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ ಫ್ರೆಡ್‌  ಡಿಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X