Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವ...

ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತ: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Dec 2020 6:24 PM IST
share
ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಡಿ.26: ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದಿಲ್ಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೆ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ ಎಂದು ಹೇಳಿದ್ದಾರೆ.

ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ. ಮೋದಿ ತಾವು ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಕುಮಾರಸ್ವಾಮಿ ಹಾರೈಸಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. 

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ.
1/5

— H D Kumaraswamy (@hd_kumaraswamy) December 26, 2020

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ.
3/5

— H D Kumaraswamy (@hd_kumaraswamy) December 26, 2020

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ.
5/5

— H D Kumaraswamy (@hd_kumaraswamy) December 26, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X