Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ...

ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು: ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Dec 2020 7:04 PM IST
share
ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು: ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು, ಡಿ.26: ಕನ್ನಡ ಚಿತ್ರರಂಗದ ಮೇರುನಟ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮಾಗಡಿ ರಸ್ತೆಯ ಟೋಲ್‍ಗೇಟ್ ಬಳಿ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಷ್ಣು ಅಭಿಮಾನಿಗಳು ಹಾಗೂ ನಟರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಹಿಂದೆ ತೆಲುಗು ನಟ ವಿಜಯ ರಂಗರಾಜು ವಿಷ್ಣುವರ್ಧನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ, ಬಳಿಕ ಕ್ಷಮೆಯಾಚಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಕಿಡಿಗೇಡಿಗಳು ವಿಷ್ಣು ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ವಿಷ್ಣು ಅಭಿಮಾನಿಗಳು ಮಾಗಡಿ ರಸ್ತೆಯಲ್ಲಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿ, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು.

ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತಪ್ಪಿತಸ್ಥರನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದುಕೊಂಡರು. ಮಾಗಡಿ ರಸ್ತೆ ಬಳಿ ಇರುವ ಬಾಲ ಗಂಗಾಧರನಾಥ ವೃತ್ತದಲ್ಲಿ ವಿಷ್ಣುವರ್ಧನ್ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಒಂದೂವರೆ ವರ್ಷದ ಹಿಂದೆ ಸ್ಥಾಪಿಸಲಾಗಿದ್ದ ವಿಷ್ಣು ಪ್ರತಿಮೆಯನ್ನು ಬೇರೆ ಕಡೆ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು ಎಂದು ಹೇಳಲಾಗಿದೆ.

ಈ ಹಿಂದೆ ಪ್ರತಿಮೆಯನ್ನು ಕಿಡಿಗೇಡಿಗಳು ಹೊತ್ತೊಯ್ದಿದ್ದ ಘಟನೆಯೂ ನಡೆದಿತ್ತು. ಆನಂತರ ಪ್ರತಿಮೆಯನ್ನು ವಾಪಸ್ ತಂದಿಡಲಾಗಿತ್ತು. ಈಗ ರಾತ್ರೋ ರಾತ್ರಿ ದುಷ್ಕರ್ಮಿಗಳು ಪ್ರತಿಮೆ ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಒತ್ತಾಯಿಸಿದ್ದಾರೆ. "ಅಪ್ಪಾವ್ರ ಪ್ರತಿಮೆ ಧ್ವಂಸ ಮಾಡಿರುವುದು ಬೇಸರದ ಸಂಗತಿ. ಆದರೆ, ಈ ವಿಷಯವನ್ನು ಮುಂದುವರಿಸುವುದು ಬೇಡ. ಸಮಾಜದಲ್ಲಿ ಪ್ರೀತಿ ಬೆಳೆಯಬೇಕು ಹೊರತು, ದ್ವೇಷವಲ್ಲ. ಮುಂದಿನ ದಿನಗಳಲ್ಲಿ ಈ ಕೃತ್ಯ ಮರುಕಳಿಸಬಾರದು" ಎಂದು ಅವರು ಹೇಳಿದ್ದಾರೆ.

ರಾತ್ರೋರಾತ್ರಿ ನಗರದ ಮಾಗಡಿ ರಸ್ತೆಯ ಟೋಲ್‍ಗೇಟ್ ಬಳಿ ಇರುವ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ತೆರವುಗೊಳಿಸಿರುವುದು ಪ್ರಕರಣವನ್ನು ರಾಜ್ಯ ಸರಕಾರ ಸೂಕ್ತ ತನಿಖೆ ನಡೆಸಬೇಕೆಂದು ಕರವೇ ಕನ್ನಡಿಗರ ಧ್ವನಿ ಸಂಘಟನೆ ಆಗ್ರಹಿಸಿದ್ದು, ಈ ಸಂಬಂಧ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯ ರಾಜ್ಯಾಧ್ಯಕ್ಷ ಕುಮಾರ, ಇಂತಹ ಕೃತ್ಯ ಎಸಗಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಅವರು ಮಾಡಿರುವ ತಪ್ಪಿಗೆ ತಕ್ಕ ಶಿಕ್ಷೆ ನೀಡಬೇಕು. ಈ ಹಿಂದೆಯೂ ಇದೇ ಪ್ರತಿಮೆಯನ್ನು ಕೆಲವರು ಹೊತ್ತೊಯ್ದಿದ್ದರು. ಹೀಗೆ ಪದೇಪದೇ ವಿಷ್ಣುವರ್ಧನ್ ಅವರನ್ನು ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ.ವಿಷ್ಣು ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು, ಯಾರು ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು.
-ದರ್ಶನ್, ನಟ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X