Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕಿತ್ತಳೆ ಹಣ್ಣು ಮಧುಮೇಹಿಗಳಿಗೆ...

ಕಿತ್ತಳೆ ಹಣ್ಣು ಮಧುಮೇಹಿಗಳಿಗೆ ಒಳ್ಳೆಯದೇ?

ವಾರ್ತಾಭಾರತಿವಾರ್ತಾಭಾರತಿ26 Dec 2020 7:34 PM IST
share
ಕಿತ್ತಳೆ ಹಣ್ಣು ಮಧುಮೇಹಿಗಳಿಗೆ ಒಳ್ಳೆಯದೇ?

ಚಳಿಗಾಲದಲ್ಲಿ ಎಲ್ಲೆಲ್ಲೂ ರಾಶಿಯಾಗಿ ಕಂಡು ಬರುವ ಕಿತ್ತಳೆ ಹಣ್ಣು ಹಲವಾರು ಆರೋಗ್ಯಲಾಭಗಳನ್ನು ನೀಡುತ್ತದೆ. ಅದು ಕ್ಯಾರೊಟಿನಾಯ್ಡಾ,ಫ್ಲಾವನಾಯ್ಡಾ,ಫಾಲೇಟ್ ಮತ್ತು ಸಿ ವಿಟಾಮಿನ್‌ಗಳಂತಹ ಹಲವಾರು ಉತ್ಕರ್ಷಣ ನಿರೋಧಕಗಳು ಮತ್ತು ಫೈಟೊಕೆಮಿಕಲ್‌ಗಳನ್ನು ಒಳಗೊಂಡಿದೆ. ಇವೆಲ್ಲವೂ ಸೇರಿ ಮಧುಮೇಹ ಮತ್ತು ಸಂಬಂಧಿತ ಹೃದ್ರೋಗಗಳಂತಹ ಹಲವಾರು ದೀರ್ಘಕಾಲಿಕ ಕಾಯಿಲೆಗಳು ಬಾರದಂತೆ ತಡೆಯುತ್ತವೆ. ಕಿತ್ತಳೆ ಹಣ್ಣು ಸಿಹಿ ನಿಜ,ಆದರೆ ಅದು ಮಧುಮೇಹಿಗಳ ಪಾಲಿಗೆ ಒಳ್ಳೆಯ ಆಯ್ಕೆಯಾಗಿದೆ. ಮಧುಮೇಹವು ವಿಶ್ವಾದ್ಯಂತ ಸಾವುಗಳಿಗೆ ಪ್ರಮುಖ ಕಾರಣಗಳಲ್ಲೊಂದಾಗಿದೆ. ಜಗತ್ತಿನಲ್ಲಿ ಸುಮಾರು 37.10 ಕೋಟಿ ಜನರು ಈ ದೀರ್ಘಕಾಲಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ ಮತ್ತು 2030ರ ವೇಳೆಗೆ ಅವರ ಸಂಖ್ಯೆಯು ಸುಮಾರು 55.20 ಕೋಟಿಗೆ ಏರಬಹುದು ಎಂದು ಇಂಟರ್‌ನ್ಯಾಷನಲ್ ಡಯಾಬಿಟಿಸ್ ಫೆಡರೇಷನ್ ತನ್ನ ವರದಿಯಲ್ಲಿ ಹೇಳಿದೆ. ಮಧುಮೇಹವು ಜೀವನದ ಗುಣಮಟ್ಟಕ್ಕೆ ಭಾರೀ ಅಪಾಯವನ್ನು ಒಡ್ಡುತ್ತದೆ ಹಾಗೂ ಹೃದಯ ರಕ್ತನಾಳ ರೋಗಗಳು ಮತ್ತು ಬೊಜ್ಜಿನಂತಹ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೈಪೊಗ್ಲೈಸಿಮಿಯಾ ಅಥವಾ ರಕ್ತದಲ್ಲಿ ಗ್ಲುಕೋಸ್ ಕೊರತೆಯನ್ನು ನಿಯಂತ್ರಿಸುವುದು ಮಧುಮೇಹ ಮತ್ತು ಸಂಬಂಧಿತ ರೋಗಗಳ ಅಪಾಯವನ್ನು ತಗ್ಗಿಸಲು ಏಕಮಾತ್ರ ಪ್ರಮುಖ ಮಾರ್ಗವಾಗಿದೆ. ಆರೋಗ್ಯವಂತರು ಸಹ ಇನ್ಸುಲಿನ್ ಪ್ರತಿರೋಧದಂತಹ ಸ್ಥಿತಿಗೆ ಗುರಿಯಾಗುವುದನ್ನು ತಪ್ಪಿಸಲು ಹೈಪೊಗ್ಲೈಸಿಮಿಯಾವನ್ನು ನಿಯಂತ್ರಿಸುವುದು ಅಗತ್ಯವಾಗಿದೆ.

ಫೈಟೊಕೆಮಿಕಲ್ ಸಮೃದ್ಧ ಹಣ್ಣುಗಳು ಮತ್ತು ತರಕಾರಿಗಳ ಸೇವನೆಯು ಶರೀರದಲ್ಲಿಯ ಗ್ಲುಕೋಸ್ ಮಟ್ಟದಲ್ಲಿ ಏರಿಕೆಯನ್ನು ವಿಳಂಬಿಸಲು ಮತ್ತು ತನ್ಮೂಲಕ ಮಧುಮೇಹದ ಅಪಾಯವನ್ನು ತಗ್ಗಿಸಲು ನೆರವಾಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಿತ್ತಳೆ ಹಣ್ಣು ಹೆಚ್ಚಿನ ಪ್ರಮಾಣದಲ್ಲಿ ಫೈಟೊಕೆಮಿಕಲ್‌ಗಳನ್ನು ಒಳಗೊಂಡಿರುವುದರಿಂದ ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ಇಳಿಸಲು ಮಧುಮೇಹಿಗಳಿಗೆ ಒಳ್ಳೆಯ ಆಯ್ಕೆಯಾಗುತ್ತದೆ.

 ಮಧುಮೇಹಿಗಳು ಕಿತ್ತಳೆಯನ್ನು ಹಣ್ಣಿನ,ಜ್ಯೂಸ್‌ನ ಅಥವಾ ನೆಕ್ಟರ್ ಸ್ವೀಟನ್ಡ್ (ಮಕರಂದ ಅಥವಾ ಜೇನು ಮಿಶ್ರಿತ)ಜ್ಯೂಸ್‌ನ ರೂಪದಲ್ಲಿ ಸೇವಿಸಬಹುದು. ಇವುಗಳಲ್ಲಿ ಅಧಿಕ ಪ್ರಮಾಣದಲ್ಲಿರುವ ನಾರು ಮಧುಮೇಹ ನಿರೋಧಕ ಪರಿಣಾಮಗಳಿಗೆ ಮುಖ್ಯ ಕಾರಣವಾಗಿರಬಹುದು ಎಂದು ಅಧ್ಯಯನಗಳು ಬೆಟ್ಟು ಮಾಡಿವೆ. ಆದರೆ ನೆಕ್ಟರ್ ಸ್ವೀಟನ್ಡ್ ಜ್ಯೂಸ್ ಕೆಲವರಲ್ಲಿ ಪ್ರಿಡಯಾಬಿಟಿಸ್ ಅಥವಾ ಪೂರ್ವ ಮಧುಮೇಹ ಮತ್ತು ಹೃದಯ ರೋಗಗಳಿಗೆ ತುತ್ತಾಗುವ ಅಪಾಯವನ್ನು ಹೆಚ್ಚಿಸಬಹುದು. ಆದ್ದರಿಂದ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ದೂರವಿರಬೇಕು ಎನ್ನುತ್ತಾರೆ ತಜ್ಞರು.

  ರಕ್ತದಲ್ಲಿನ ಗುಕೋಸ್ ಮಟ್ಟವನ್ನು ನಿಯಂತ್ರಿಸಲು ಕಿತ್ತಳೆ ಹಣ್ಣಿನ ಜ್ಯೂಸ್ ಒಳ್ಳೆಯದಾಗಿದ್ದರೂ ದಿನದ ವಿಭಿನ್ನ ಸಮಯಗಳಲ್ಲಿ ಅದರ ಸೇವನೆಯು ಶಕ್ತಿ ಮತ್ತು ಇನ್ಸುಲಿನ್ ಮಟ್ಟಗಳ ಮೇಲೆ ಪರಿಣಾಮವನ್ನು ಬೀರಬಹುದು ಮತ್ತು ಗ್ಲುಕೋಸ್ ಮಟ್ಟ ಹೆಚ್ಚಲು ಕಾರಣವಾಗಬಹುದು. ಕಿತ್ತಳೆ ಜ್ಯೂಸ್‌ನ್ನು ಬ್ರೇಕ್‌ಫಾಸ್ಟ್,ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟದ ಜೊತೆಗೆ ಸೇವಿಸಿದರೆ ಮತ್ತು ಇವುಗಳ ನಡುವೆ ಯಾವುದೇ ತಿನಿಸನ್ನು ತಿನ್ನದಿದ್ದರೆ ಅದು ಶಕ್ತಿ ಮತ್ತು ಇನ್ಸುಲಿನ್ ಮಟ್ಟಗಳ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುತ್ತದೆ ಮತ್ತು ಶರೀರದಲ್ಲಿಯ ಕೊಬ್ಬನ್ನೂ ಕರಗಿಸುತ್ತದೆ ಎಂದು ಅಧ್ಯಯನವೊಂದು ತೋರಿಸಿದೆ. ಅಲ್ಲದೆ ಜ್ಯೂಸ್‌ನ ಸೇವನೆಯು ಸೂಕ್ತ ಪೋಷಕಾಂಶಗಳನ್ನು ಒದಗಿಸುವ ಮೂಲಕ ಆರೋಗ್ಯವನ್ನೂ ಹೆಚ್ಚಿಸುತ್ತದೆ. ಹೀಗಾಗಿ ಕಿತ್ತಳೆ ಜ್ಯೂಸ್ ಅನ್ನು ಊಟಗಳ ನಡುವೆ ಸೇವಿಸುವುದಕ್ಕಿಂತ ಊಟದ ಜೊತೆಗೆ ಸೇವಿಸುವುದು ಒಳ್ಳೆಯದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X