ದ.ಕ. ಜಿಲ್ಲೆ : 34 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 34 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಕೊರೋನಾ ಮುಕ್ತರಾದ 22 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 32,757 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, 31,608 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 417 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 732 ಸಾವು ಪ್ರಕರಣಗಳು ಸಂಭವಿಸಿವೆ.
ಜಿಲ್ಲೆಯಲ್ಲಿ 18,185 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆತಾಗಿದ್ದು, 19,39,668 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story





