ಬೆಂಗಳೂರು: ಸ್ಫೋಟಕ ವಸ್ತುಗಳ ಮಾರಾಟ; ಇಬ್ಬರ ಬಂಧನ

ಬೆಂಗಳೂರು, ಡಿ.26: ಸ್ಫೋಟಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ) ಪೊಲೀಸರು ಬಂಧಿಸಿದ್ದಾರೆ.
ಸುರೇಶ್(37), ರಾಜಶೇಖರಯ್ಯ(60) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಜಿಲೇಟಿನ್, ಡಿಟೋನೇಟರ್, ಅಮೋನೀಯಂ ಇನ್ನಿತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತ ಆರೋಪಿಗಳಿಬ್ಬರು ಪೀಣ್ಯ ಬಸ್ ನಿಲ್ದಾಣದ ಬಳಿ ಸ್ಪೋಟಕ ವಸ್ತುಗಳನ್ನ ಮಾರಾಟ ಮಾಡುತ್ತಿದ್ದರು. ಈ ಕುರಿತು ಐಎಸ್‍ಡಿ ಕಚೇರಿಗೆ ಮಾಹಿತಿ ನೀಡಲಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Next Story





