ಸರಜೂ ಕಾಟ್ಕರ್‍ಗೆ ಬಸವರಾಜ ಕಟ್ಟೀಮನಿ ಪ್ರಶಸ್ತಿ
ಬೆಳಗಾವಿ, ಡಿ. 26: ಹಿರಿಯ ಪತ್ರಕರ್ತರು ಹಾಗೂ ಸಾಹಿತಿ ಡಾ.ಸರಜೂ ಕಾಟ್ಕರ್ ಅವರು ಪ್ರತಿಷ್ಠಿತ `ಬಸವರಾಜ ಕಟ್ಟೀಮನಿ' ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದು, ನಾಳೆ(ಡಿ.27) ಪ್ರಶಸ್ತಿ ಪ್ರದಾನ ಸಮಾರಂಭ ನಗರದಲ್ಲಿ ಜರುಗಲಿದೆ.
ಬಸವರಾಜ ಕಟ್ಟಿಮನಿ ಪ್ರತಿಷ್ಟಾನದ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಹಾಗೂ ಯುವ ಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭಕ್ಕೆ ಡಿ.27ರ ಬೆಳಗ್ಗೆ 11ಗಂಟೆಗೆ ನಗರದ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸಭಾಗೃಹದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಕಪಿಲ್ ಹುಮ್ನಾಬಾದೆ ಹಾಗೂ ಶಶಿ ತರಿಕೆರೆ ಅವರಿಗೆ ಯುವ ಸಾಹಿತ್ಯ ಪುರಸ್ಕಾರ ನೀಡಲಾಗುತ್ತಿದೆ. ಆಕಾಶವಾಣಿ ನಿವೃತ್ತ ನಿರ್ದೇಶಕ ಸಿ.ಯು.ಬೆಳ್ಳಕ್ಕಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಡಾ.ಬಸವರಾಜ ಜಗಜಂಪಿ ಅಭಿನಂದನಾ ಮಾತುಗಳನ್ನಾಡಲಿದ್ದು, ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
Next Story





