Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘21 ಗ್ರಾಮ್ಸ್’ ಚಿತ್ರ ತಂಡದ ಹೊಸ ಸಾಹಸ: ...

‘21 ಗ್ರಾಮ್ಸ್’ ಚಿತ್ರ ತಂಡದ ಹೊಸ ಸಾಹಸ: ತುಳು ಭಾಷೆಯಿಂದ ಆರು ಭಾಷೆಗೆ ಡಬ್ ಆಗಲಿದೆ ಈ ಸಿನೆಮಾ

ವಾರ್ತಾಭಾರತಿವಾರ್ತಾಭಾರತಿ26 Dec 2020 11:11 PM IST
share
‘21 ಗ್ರಾಮ್ಸ್’ ಚಿತ್ರ ತಂಡದ ಹೊಸ ಸಾಹಸ:  ತುಳು ಭಾಷೆಯಿಂದ ಆರು ಭಾಷೆಗೆ ಡಬ್ ಆಗಲಿದೆ ಈ ಸಿನೆಮಾ

ಮಂಗಳೂರು, ಡಿ.26: ತುಳು ಭಾಷೆಯಲ್ಲಿ ನಿರ್ಮಾಣವಾಗಲಿರುವ 21 ಗ್ರಾಮ್ಸ್ ಹೆಸರಿನ ಸೈಕಾಲಜಿಕಲ್ ಥ್ರಿಲ್ಲರ್ ಸಿನೆಮಾ ತುಳು ಭಾಷೆಯಿಂದ ಆರು ಭಾಷೆಗೆ ಡಬ್ ಆಗಲಿದೆ.

ಇದೇ ಮೊದಲ ಬಾರಿಗೆ ತುಳು ಸಿನೆಮಾವೊಂದು ಏಕಕಾಲದಲ್ಲಿ ಆರು ಭಾಷೆಗೆ ಡಬ್ ಆಗಿ ಆಯಾ ರಾಜ್ಯಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾ ಗಲಿದೆ ಎಂದು ಸಿನೆಮಾ ನಿರ್ಮಾಣ ತಂಡ ತಿಳಿಸಿದೆ. ಚಿತ್ರವು ತುಳು ಭಾಷೆಯಲ್ಲಿ ನಿರ್ಮಾಣಗೊಂಡು ಕನ್ನಡ, ಹಿಂದಿ , ತಮಿಳು, ತೆಲುಗು, ಮರಾಠಿ, ಇಂಗ್ಲಿಷ್ ಭಾಷೆಗೆ ಡಬ್ ಆಗಲಿದೆ.ಸೋಚ್ ಸಿನೆಮಾ , ಎಲ್.ಎಸ್. ಮೀಡಿಯ, ಓಂ ಸ್ಟುಡಿಯೋ ಜಂಟಿಯಾಗಿ ಈ ಸಿನೆಮಾ ನಿರ್ಮಾಣ ಮಾಡುತ್ತಿದೆ.

ಅಬ್ಬಕ್ಕ ಕ್ವೀನ್ ಕ್ರೂಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿನೆಮಾ ತಂಡದವರು ಈ ಮಾಹಿತಿ ಹಂಚಿಕೊಂಡಿದ್ದಾರೆ.  ಸಿನೆಮಾದ ಹೀರೊ ಬಹುಭಾಷಾ ನಟ ಅಮಿತ್ ರಾವ್ ಮಾತನಾಡಿ, ಪೂರ್ತಿ ಸಿನೆಮಾವು ಆರಂಭದಿಂದ ಕೊನೆ ತನಕ ಸಸ್ಪೆನ್ಸ್ ಆಗಿ ಇರಲಿದೆ. ಹೀರೊ, ಹಿರೋಹಿನ್ ಕೇಂದ್ರಿತ ಮನೋವೈಜ್ಞಾನಿಕ ಭೂಮಿಕೆಯೇ ಈ ಸಿನೆಮಾದ ವಿಶೇಷವಾಗಿದೆ. ತಾನು ಈ ಸಿನೆಮಾಕ್ಕಾಗಿ ಹೇರ್ ಸ್ಟೈಲ್ ವಿಭಿನ್ನವಾಗಿ ಬದಲಾಯಿಸಿಕೊಳ್ಳಬೇಕಾಯಿತು ಎಂದು ಅಮಿತ್ ರಾವ್ ತಿಳಿಸಿದರು.

ಸಿನೆಮಾದ ನಿರ್ದೇಶಕ ಸ್ಟೀಪನ್ ಮಾತನಾಡಿ, ಕಳೆದ 15 ವರ್ಷಗಳಿಂದ ಕನ್ನಡ ಚಿತ್ರ ರಂಗದಲ್ಲಿ ಸಹ ನಿರ್ದೇಶಕನಾಗಿ ದುಡಿದ ಅನುಭವದ ಹಿನ್ನೆಲೆ ತುಳು ಭಾಷೆಯಲ್ಲಿ ಸಿನೆಮಾ ಮಾಡಲು ಮುಂದಾಗಿದ್ದೇನೆ. ನಿರ್ಮಾಣ ತಂಡದ ಪ್ರೋತ್ಸಾಹದ ಕಾರಣದಿಂದಾಗಿ ತುಳುವಿನಿಂದ 6 ಭಾಷೆಗೆ ಡಬ್ ಮಾಡಿ ಸಿನೆಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದೇವೆ ಎಂದು ತಿಳಿಸಿದರು.

ಸಿನೆಮಾ ಚಿತ್ರೀಕರಣವು ಮಂಗಳೂರು, ಕುಂದಾಪುರ , ಬೆಂಗಳೂರು ಹಾಗೂ ಕರ್ನಾಟಕದ ಇತರ ಭಾಗಗಳಲ್ಲಿ ನಡೆಯಲಿದೆ. ಜೊತೆಗೆ ಉತ್ತರ ಪ್ರದೇಶ ಹಾಗೂ ಜಾರ್ಖಂಡ್‌ನಲ್ಲಿ ಕೂಡ ಚಿತ್ರೀಕರಣ ನಡೆಯಲಿದೆ. ನಿರ್ಮಾಪಕರಾದ ಅವಿನಾಶ್ ಶೆಟ್ಟಿ, ಲಕ್ಷ್ಮಣ್ ಸುವರ್ಣ, ಚರಣ್ ಸುವರ್ಣ, ಬಹುಭಾಷಾ ನಟಿ ಸೋನಲ್ ಮೊಂತೆರೊ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ವಸ್ತ್ರ ವಿನ್ಯಾಸಕಿ ರಶ್ಮಿ ಅನೂಪ್ ರಾವ್, ಅನುಪಮಾ ಸುವರ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X