Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಜೆಟ್‍ನಲ್ಲಿ ದಿವ್ಯಾಂಗರ ಕಲ್ಯಾಣ...

ಬಜೆಟ್‍ನಲ್ಲಿ ದಿವ್ಯಾಂಗರ ಕಲ್ಯಾಣ ಕಾರ್ಯಗಳಿಗೆ ಶೇ.5ರಷ್ಟು ಅನುದಾನ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ26 Dec 2020 11:32 PM IST
share
ಬಜೆಟ್‍ನಲ್ಲಿ ದಿವ್ಯಾಂಗರ ಕಲ್ಯಾಣ ಕಾರ್ಯಗಳಿಗೆ ಶೇ.5ರಷ್ಟು ಅನುದಾನ: ಸಿ.ಟಿ.ರವಿ

ಚಿಕ್ಕಮಗಳೂರು, ಡಿ.26: ರಾಜ್ಯ ಸರಕಾರವು ದಿವ್ಯಾಂಗರ ಕಲ್ಯಾಣ ಕಾರ್ಯಗಳಿಗೆ ಆಯವ್ಯಯದಲ್ಲಿ ಶೇ.5ರಷ್ಟು ಅನುದಾನವನ್ನು ಶಾಸನಬದ್ಧಗೊಳಿಸಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಜಿಪಂ, ತಾಪಂ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ 53 ದಿವ್ಯಾಂಗರಿಗೆ ಉಚಿತ ಮೋಟಾರ್ ಸೈಕಲ್ ವಿತರಿಸಿ ಮಾತನಾಡಿದ ಅವರು, ಅಂಗವೈಕಲ್ಯ ಎನ್ನುವುದು ಬದುಕಿಗೆ ಅಡ್ಡಿಯಾಗಬಾರದು. ಬಹುತೇಕ ಅಂಗವಿಕಲರು ಆತ್ಮವಿಶ್ವಾಸದಿಂದ ಬಹುದೊಡ್ಡ ಸಾಧನೆ ತೋರಿದ್ದಾರೆ. ಅವರ ಜೀವನ ಕ್ರಮಗಳು, ಆದರ್ಶಗಳು ಎಲ್ಲರಿಗೂ ಪ್ರೇರಣೆಯಾಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈ ಬಾರಿ ಜಿಪಂ, ತಾಪಂ, ನಗರಸಭೆ ಅನುದಾನದಲ್ಲಿ, ದಿವ್ಯಾಂಗರ ಕಲ್ಯಾಣ ಕಾರ್ಯಗಳಿಗೆ ಶೇ.20ರಷ್ಟು ಅನುದಾನ ಮೀಸಲಿರಿಸಲಾಗಿದೆ. 53 ದಿವ್ಯಾಂಗರಿಗೆ ಮೋಟರ್ ಸೈಕಲ್ ವಿತರಿಸಲಾಗಿದೆ. ವಾಹನಗಳು ದುರುಪಯೋಗವಾಗದಂತೆ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ ಅವರು, ರಾಜ್ಯ ಸರಕಾರವು ದಿವ್ಯಾಂಗರ ಕಲ್ಯಾಣ ಕಾರ್ಯಗಳಿಗೆ ಆಯವ್ಯಯದಲ್ಲಿ ಶೇ.5ರಷ್ಟು ಅನುದಾನವನ್ನು ಶಾಸನಬದ್ದಗೊಳಿಸಿದೆ. ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಎಲ್ಲಾ ದಿವ್ಯಾಂಗರಿಗೂ ಮುಂದಿನ ಬಜೆಟ್‍ನ ಅನುದಾನದಲ್ಲಿ ಹಿರಿತನದ ಆಧಾರದಲ್ಲಿ ಪ್ರತಿಯೊಬ್ಬರಿಗೂ ಆದ್ಯತೆಯ ಮೇಲೆ ಮೋಟಾರ್ ಸೈಕಲ್ ವಿತರಿಸಲಾಗುವುದು ಎಂದರು.

ಜಿಪಂ ಉಪಾಧ್ಯಕ್ಷ ಸೋಮಶೇಖರಪ್ಪ ಮಾತನಾಡಿ, ಜಿಪಂ ಅನುದಾನದಲ್ಲಿ ಪ್ರತೀ ಸದಸ್ಯರಿಗೂ ಫಲಾನುಭವಿಗಳನ್ನು ಗುರುತಿಸಿ ಮೋಟಾರ್ ವಾಹನ ವಿತರಿಸಲು ಅವಕಾಶವಿದೆ. ಮುಂದಿನ ದಿನಗಳಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಲಾಗುವುದು. ಈಗಾಗಲೇ ಜಿ.ಪಂನಲ್ಲಿ ಮೊದಲ ಹಂತದಲ್ಲಿ 28 ಮೋಟರ್ ಸೈಕಲ್ ವಿತರಿಸಲಾಗಿದೆ. ಸ್ಥಳೀಯ ಶಾಸಕರು ಸುಮಾರು 180ಕ್ಕೂ ಹೆಚ್ಚು ಮೋಟರ್ ವಾಹನಗಳನ್ನು ವಿತರಿಸಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಜಸಿಂತಾಅನಿಲ್‍ಕುಮಾರ್, ತಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಪೂರ್ಣೇಶ್ ಮಾತನಾಡಿದರು. ಜಿಪಂ ಸದಸ್ಯ ಬೆಳವಾಡಿ ರವೀಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್, ಮುಖಂಡರಾದ ವರಸಿದ್ದಿ ವೇಣುಗೋಪಾಲ್, ತಾಪಂ ಮಾಜಿ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ನೆಟ್ಟಿಕೆರೆಹಳ್ಳಿ ಜಯಣ್ಣ, ಎಸ್ಸಿ ಮೊರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್, ಎ.ಪಿ.ಎಂ.ಸಿ ಅಧ್ಯಕ್ಷ ಶಿವಕುಮಾರ್, ಅಧಿಕಾರಿ ವೀರೇಶ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X