ಮೊಳಕಾಲ್ಮೂರು: ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ, ಏಳು ಮಂದಿ ಗಂಭೀರ

ಚಿತ್ರದುರ್ಗ, ಡಿ.27: ಕೆಎಸ್ಸಾರ್ಟಿಸಿ ಬಸ್ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 7 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ರವಿವಾರ ಮುಂಜಾವ ನಡೆದಿದೆ.
ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದ ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19) ದುರ್ಗಪ್ಪ(16) ಸೇರಿದಂತೆ ಐವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಲೂಸರ್ ಮತ್ತು ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದ್ದು, ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕ್ರೂಸರ್ ನಲ್ಲಿದ್ದವರು ಮತದಾನಕ್ಕಾಗಿ ಊರಿಗೆ ಆಗಮಿಸಿದ್ದರೆನ್ನಲಾಗಿದೆ.
Next Story





