ಕುಂದಾಪುರ: ಮತದಾರರನ್ನು ಮತಗಟ್ಟೆಗೆ ಕರೆತರುವ ವಿಚಾರದಲ್ಲಿ ಮಾತಿನ ಚಕಮಕಿ

ಕುಂದಾಪುರ, ಡಿ.27: ಮತದಾರರನ್ನು ಮತಗಟ್ಟೆಗೆ ವಾಹನದಲ್ಲಿ ಕರೆತರುವ ವಿಚಾರವಾಗಿ ಅಭ್ಯರ್ಥಿಗಳಿಬ್ಬರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ತಾಲೂಕಿನ ಅಂಪಾರು ಎಂಬಲ್ಲಿಂದ ವರದಿಯಾಗಿದೆ.
ಇಂದು ಬೆಳಗ್ಗೆ ಓರ್ವ ಅಭ್ಯರ್ಥಿಗಳ ಪರ ಬೆಂಬಲಿಗರು ತಮ್ಮ ಖಾಸಗಿ ವಾಹನದಲ್ಲಿ ಮತದಾರರನ್ನು ಮತಗಟ್ಟೆಗೆ ಕರೆತರುತ್ತಿದ್ದರೆನ್ನಲಾಗಿದೆ. ಇದಕ್ಕೆ ಪ್ರತಿಸ್ಪರ್ಧಿ ಅಭ್ಯರ್ಥಿ ಹಾಗೂ ಬೆಂಬಲಿಗರು ಆಕ್ಷೇಪಿಸಿದ್ದರಿಂದ ಎರಡು ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತು.
ಈ ವೇಳೆ ಮಧ್ಯೆಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
Next Story





