Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ವರ್ಷಾಚರಣೆಗೆ ಅವಕಾಶವಿಲ್ಲ: ಗೃಹ...

ಹೊಸ ವರ್ಷಾಚರಣೆಗೆ ಅವಕಾಶವಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

'ಸೋಮವಾರ ಹೊಸ ಮಾರ್ಗಸೂಚಿ ಬಿಡುಗಡೆ'

ವಾರ್ತಾಭಾರತಿವಾರ್ತಾಭಾರತಿ27 Dec 2020 5:09 PM IST
share
ಹೊಸ ವರ್ಷಾಚರಣೆಗೆ ಅವಕಾಶವಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿ. 27: ರಾಜ್ಯದಲ್ಲಿ ರೂಪಾಂತರಗೊಂಡಿರುವ ಕೋವಿಡ್-19 ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ 2021ರ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಣೆ ನೀಡಿದ್ದಾರೆ.

ರವಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೂತನ ವರ್ಷಾಚರಣೆಗೆ ನಿರ್ಬಂಧ ಹೇರುವ ಸಂಬಂಧ ನಾಳೆ(ಡಿ.28) ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ನೂತನ ವರ್ಷದ ಸಂಭ್ರಮದ ನೆಪದಲ್ಲಿ ದೊಡ್ಡಸಂಖ್ಯೆಯಲ್ಲಿ ಜನರು ಸೇರಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಲು ಅವಕಾಶ ಮಾಡಬಾರದು ಎಂದು ಸಲಹೆ ನೀಡಿದರು.

ಹೊಸ ವರ್ಷಾಚರಣೆಯ ವೇಳೆ ನಡೆಯುವ ಪಾರ್ಟಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಅವರನ್ನು ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಆ ಹಿನ್ನೆಲೆಯಲ್ಲಿ ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ನೂತನ ವರ್ಷಾಚರಣೆಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದರು.

ನೂತನ ವರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕ ಪಾರ್ಟಿಗಳಿಗೆ ಅವಕಾಶ ಇಲ್ಲ. ಈಗಾಗಲೇ ನಗರ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಯುಕೆಯಿಂದ ಬಂದವರ ವಿಳಾಸ ಪತ್ತೆ ಹಚ್ಚುವ ಮೂಲಕ ಎಲ್ಲರನ್ನೂ ಪರೀಕ್ಷೆ ಮಾಡಲಾಗುತ್ತಿದೆ. ಪರೀಕ್ಷೆ ಮಾಡಿಸಿಕೊಳ್ಳದವರನ್ನು ಪತ್ತೆ ಮಾಡಿ ಪರೀಕ್ಷೆ ಮಾಡಿಸುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಮೊದಲನೆ ಹಂತದಲ್ಲಿ ಬಂದವರಿಗೆ ಕೋವಿಡ್ ರೂಪಾಂತರಿ ವೈರಸ್ ಕುರಿತು ಗೊತ್ತಿರಲಿಲ್ಲ. ಹೀಗಾಗಿ ಯಾವುದೇ ನಿರ್ಬಂಧವಿಲ್ಲದೆ ಸಂಚರಿಸಿದ್ದಾರೆ. ಅವರಿಗೂ ಫೋನ್ ಮೂಲಕ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿದ್ದೇವೆ ಎಂದ ಅವರು, ರೂಪಾಂತರ ಸೋಂಕು ನಿಯಂತ್ರಣಕ್ಕೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.

ಸಿಸಿಟಿವಿ ಟೆಂಡರ್ ಪ್ರಕರಣ ಸಂಬಂಧ ಈಗಾಗಲೇ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ)ರನ್ನು ಕರೆದು ಮಾತನಾಡಿದ್ದೇನೆ. ಐಪಿಎಸ್ ಅಧಿಕಾರಿಗಳ ನಡುವಿನ ಬಹಿರಂಗ ತಿಕ್ಕಾಟ ಸಂಬಂಧ ಆದೇಶ, ಉಪದೇಶ ಕೊಡುವ ಎರಡೂ ಕೆಲಸವನ್ನು ಸಿಎಸ್ ಮತ್ತು ಡಿಜಿಪಿ ಮಾಡಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X